Andolana originals

ಕನ್ನಂಬಾಡಿ ಹಿನ್ನೀರಿನಲ್ಲಿ ಭೂವರಾಹನಾಥ

• ಬಲ್ಲೇನಹಳ್ಳಿ ಮಂಜುನಾಥ್, ಉಪನ್ಯಾಸಕರು ಮತ್ತು ಸಾಹಿತಿಗಳು

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕು ಹಲವು ಪುರಾತನ ದೇವಾಲಯ ಗಳಿಗೆ ಹೆಸರಾಗಿದೆ. ಇಲ್ಲಿ ಹೊಯ್ಸಳ ಅರಸರ ಕಾಲದ ದೇಗುಲಗಳು ಸಾಕಷ್ಟಿವೆ. ಇಂತಹ ದೇಗುಲಗಳಲ್ಲಿ ಹೇಮಾವತಿ ನದಿಯ ದಂಡೆ ಮತ್ತು ಕನ್ನಂಬಾಡಿ ಕಟ್ಟೆ ಹಿನ್ನೀರಿನ ದಡದಲ್ಲಿ ಇರುವ ಕಲ್ಲಹಳ್ಳಿಯ ಭೂವರಾಹನಾಥ ದೇಗುಲವೂ ಒಂದು.

ಮೇಲುಕೋಟೆಯ ನಂತರ ಜಿಲ್ಲೆಯಲ್ಲಿ ಅಪಾರ ಜನರನ್ನು ಆಕರ್ಷಿಸುವ ಪ್ರಾಚೀನ ವೈಷ್ಣವ ದೇವಾಲಯ ಇದಾಗಿದ್ದು, ಭೂ ವೈಕುಂಠ ಎಂದೇ ಹೆಸರಾಗಿದೆ. ಕೊಡಗಿನಿಂದ ಹರಿದು ಬರುವ ಕಾವೇರಿ, ಚಿಕ್ಕಮಗಳೂರಿನ ಬೆಟ್ಟದಿಂದ ಹರಿದು ಬರುವ ಹೇಮಾವತಿ ಹಾಗೂ ಹುಣಸೂರಿನ ಕಡೆಯಿಂದ ಬರುವ ಲಕ್ಷ್ಮಣತೀರ್ಥ ನದಿಗಳು ಸೇರುವ ತಾಣ ಇದಾಗಿದೆ.

ಕನ್ನಂಬಾಡಿ ಕಟ್ಟೆಯ ನಿರ್ಮಾಣದಿಂದ ಮುಳುಗಡೆಯಾದ ಕಲ್ಲಹಳ್ಳಿ ಗ್ರಾಮದ ಹಿನ್ನೀರಿನ ಅಂಚಿನಲ್ಲಿ ಈ ದೇವಾಲಯ ನಿರ್ಮಾಣಗೊಂಡಿದೆ. ದಕ್ಷಿಣ ಭಾರತದಲ್ಲಿಯೇ ಅಪರೂಪವಾದ ಸುಮಾರು 8 ಅಡಿ ಎತ್ತರ ವಿರುವ ಏಕ ಕಪ್ಪುಶಿಲೆಯ ವರಾಹ ವಿಗ್ರಹ ಹಾಗೂ ಭೂದೇವಿ (ಲಕ್ಷ್ಮೀ) ವಿಗ್ರಹ ಗಮನ ಸೆಳೆಯುತ್ತವೆ.

ಶಾಸನದ ಸಾರಾಂಶ: ಈ ವಿಗ್ರಹದ ನಿರ್ಮಾತೃ ಯಾರೆಂಬುದು ತಿಳಿದಿಲ್ಲವಾದರೂ, ದೇಗುಲದ ಮುಂದಿರುವ ಶಾಸನವು ಕ್ರಿ.ಶ.1334ರಲ್ಲಿ ಹೊಯ್ಸಳ ಅರಸ ಮುಮ್ಮಡಿ ಬಲ್ಲಾಳನು ತನ್ನ ಮಡದಿ ದ್ಯಾಮಲಾದೇವಿಯ ಜ್ಞಾಪಕಾರ್ಥಕವಾಗಿ ಈ ಸ್ಥಳವನ್ನು ‘ದೇಮಲಾಪುರ’ ಎಂದು ಕರೆದು, ಅಗ್ರ ಹಾರ ಮಾಡಿದನೆಂದು, ಈ ಮೂರ್ತಿಯ ಪೂಜಾ ಕೈಂಕರ್ಯಗಳಿಗಾಗಿ 42 ಸಾವಿರ ಕೋಲು ಅಳತೆಯ ಬೆದ್ದಲು (ಹೊಲ) ನೀಡಿದನೆಂದು ತಿಳಿಸುವುದರಿಂದ ಹೊಯ್ಸಳ ಅರಸರ ಕಾಲದಲ್ಲಿ ಇದೊಂದು ಪ್ರಸಿದ್ಧ ವೈಷ್ಣವ ಕ್ಷೇತ್ರವಾಗಿತ್ತೆಂದು ತಿಳಿದು ಬರುತ್ತದೆ.

ಹಳೆಯ ದೇವಸ್ಥಾನವು ಚಿಕ್ಕದಾಗಿದ್ದರಿಂದ ಇದೇ ಜಾಗದಲ್ಲಿ ಹೊಯ್ಸಳ ವಾಸ್ತು ಶಿಲ್ಪದ ಮಾದರಿಯಲ್ಲಿ ಪುನರ್ ನಿರ್ಮಾಣ ಮಾಡಲಾಗುತ್ತಿದೆ. 108 ಕಾಲು ಮಂಟಪ-ಅಲ್ಲದೆ 178 ಅಡಿ ಎತ್ತರದ ರಾಜಗೋಪುರ ನಿರ್ಮಾಣ ಮಾಡಲಾಗುತ್ತಿದೆ. ದೇವಾಲಯದ ಅಭಿವೃದ್ಧಿ ಗಾಗಿ ಸುಮಾರು 50 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ದಾನಿಗಳ ಸಹಾಯದಿಂದ ಮೈಸೂರಿನ ಶ್ರೀ ಪರಕಾಲ ಮಠದ ಮಾರ್ಗದರ್ಶನದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಇದನ್ನು ಹೊಯ್ಸಳ ದೊರೆ ಮೂರನೇ ವೀರಬಲ್ಲಾಳನಿಗೆ ಅರ್ಪಿಸಲು ಮಠ ನಿರ್ಧರಿಸಿದೆ. ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ 3 ಕೋಟಿ ರೂ. ಅನುದಾನ ನೀಡಿದ್ದಾರೆ. ಕ್ಷೇತ್ರವನ್ನು ಪ್ರವಾಸಿ ತಾಣವನ್ನಾಗಿಸುವುದು, ತ್ರಿವೇಣಿ ಸಂಗಮಕ್ಕೆ ಬೋಟಿಂಗ್‌ ವ್ಯವಸ್ಥೆ, ತೂಗು ಸೇತುವೆ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ. ನೀರಾವರಿ ಇಲಾಖೆಯು ಪ್ರವಾಸಿಗರ ಅನುಕೂಲಕ್ಕಾಗಿ ಹೇಮಾವತಿ ನದಿಯ ಹಿನ್ನೀರಿಗೆ ಸೋಪಾನಕಟ್ಟೆ ನಿರ್ಮಿಸಲು ಕಾಮಗಾರಿ ಕೈಗೊಂಡಿದೆ.

ಭೂವರಾಹನಾಥ ದೇವಾಲಯಕ್ಕೆ ಇರುವ ದೂರ:
• ಮಂಡ್ಯ ಜಿಲ್ಲಾ ಕೇಂದ್ರದಿಂದ 60 ಕಿ.ಮೀ.
• ಮೈಸೂರಿನಿಂದ 50 ಕಿ.ಮೀ.
• ಕೆ.ಆರ್.ಎಸ್‌ನಿಂದ 30 ಕಿ.ಮೀ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago