Andolana originals

ಹೆತ್ತಮ್ಮನ ದುಡಿಮೆ ನೋಡಲಾಗದೆ ಮನೆ ಬಿಟ್ಟ ಬಾಲಕ

ಕಂಗಾಲಾದ ಕುಟುಂಬ; ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ಮನಕಲಕುವ ಘಟನೆ

ಶ್ರೀಧರ್ ಆರ್. ಭಟ್
ನಂಜನಗೂಡು: ತಾಯಿ ಪಡುತ್ತಿರುವ ಕಷ್ಟ ನೋಡಲಾಗದೆ ಪ್ರೌಢಶಾಲೆ ವಿದ್ಯಾರ್ಥಿಯೊಬ್ಬ ಮನೆ ಬಿಟ್ಟು ಹೋಗಿರುವ ಮನಕಲಕುವ ಘಟನೆ ತಾಲ್ಲೂಕಿನ ಕೆಂಪಿ ಸಿದ್ದನಹುಂಡಿಯಲ್ಲಿ ನಡೆದಿದೆ.

೮ ವರ್ಷಗಳ ಹಿಂದೆ ತಂದೆಯನ್ನು ಕಳೆದು ಕೊಂಡಿದ್ದ ಬಾಲಕ ತಾಯಿಯೊಂದಿಗೆ ಅಜ್ಜಿ ಮನೆ ಕೆಂಪಿಸಿದ್ದನ ಹುಂಡಿಯಲ್ಲಿ ವಾಸವಾಗಿದ್ದ. ಅಜ್ಜ, ಅಜ್ಜಿ, ತಾನು ಹಾಗೂ ತಂಗಿ ಸೇರಿದಂತೆ ನಾಲ್ಕು ಜೀವಗಳನ್ನು ಸಾಕಲು ತಾಯಿ ಪಡುತ್ತಿರುವ ಕಷ್ಟ ನೋಡಲಾಗದೆ ಬಾಲಕ ಭರತ್ ಮನೆ ಬಿಟ್ಟಿದ್ದಾನೆ.

ತಾಯಿಯ ದುಡಿಮೆಯ ಕಷ್ಟ ನನ್ನಿಂದ ನೋಡಲಾಗುತ್ತಿಲ್ಲ. ನಾನು ದುಡಿದು ಸಂಪಾದನೆ ಮಾಡುವವರೆಗೂ ಮನೆಗೆ ಬರಲ್ಲ, ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಅಕ್ಟೋಬರ್ ೧೬ರಂದು ಪತ್ರ ಬರೆದಿಟ್ಟು ಮನೆಯಿಂದ ಹೋದ ಭರತ್ ೧೨ ದಿನಗಳಾದರೂ ಮನೆಗೆ ವಾಪಸ್ ಬಂದಿಲ್ಲ. ತಾಯಿ ಮಹದೇವಮ್ಮ ಗ್ರಾಮದ ಕನಕದಾಸ ಪ್ರೌಢಶಾಲೆಯಲ್ಲಿ ಬಿಸಿಯೂಟದ ಅಡುಗೆ ಸಿಬ್ಬಂದಿಯಾಗಿದ್ದಾರೆ. ಮಗ ಭರತ್ ಅದೇ ಶಾಲೆಯ ೧೦ ನೇ ತರಗತಿಯ ವಿದ್ಯಾರ್ಥಿ. ಶಾಲೆಯಲ್ಲಿ ಹಾಗೂ ಮನೆಯಲ್ಲಿ ಹೆತ್ತಮ್ಮ ದುಡಿಯುವುದನ್ನು ಪ್ರತಿನಿತ್ಯ ನೋಡುತ್ತಿದ್ದ ಬಾಲಕ ಅಮ್ಮನ ದುಡಿಮೆಯ ಕಷ್ಟ ನೋಡಲಾಗದೇ ಮನೆ ಬಿಟ್ಟು ಹೋಗಿದ್ದಾನೆ.

ಮಗ ಮನೆಯನ್ನು ಬಿಟ್ಟುಹೋದ ಬಳಿಕ ಈಗ ಮನೆಯಲ್ಲಿ ನೀರವ ಮೌನ ಆವರಿಸಿದೆ. ಭರತ್ ನನ್ನು ನೆನಪಿಸಿಕೊಂಡು ಅಜ್ಜ ಮಲ್ಲಯ್ಯ, ಅಜ್ಜಿ ಮಲ್ಲಮ್ಮ ಹಾಗೂ ತಾಯಿ ಮಹದೇವಮ್ಮ ಕಣ್ಣೀರು ಹಾಕುತ್ತಿದ್ದಾರೆ. ಸಂಬಂಧಿಕರ ಮನೆಯನ್ನೆಲ್ಲಾ ಜಾಲಾಡಿದ ಅವರು ಈಗ ಬಾಲಕ ನನ್ನು ಪತ್ತೆ ಮಾಡಿಕೊಡಬೇಕೆಂದು ನಂಜನಗೂಡು ಗ್ರಾಮಾಂತರ ಪೊಲೀಸರ ಮೊರೆ ಹೋಗಿದ್ದಾರೆ.

೮ ವರ್ಷಗಳ ಹಿಂದೆ ಜಾಂಡೀಸ್ ಕಾಯಿಲೆಯಿಂದ ಅಳಿಯ ನಾಗರಾಜ ಮೃತಪಟ್ಟ ಬಳಿಕ ಮಗಳು ಇಬ್ಬರೂ ಮಕ್ಕಳೊಂದಿಗೆ ನಮ್ಮೊಡನೆಯೇ ಇದ್ದಾರೆ. ಮಗಳಿಗೆ ನಮ್ಮನ್ನು ಬಿಟ್ಟರೆ ಬೇರ‍್ಯಾರೂ ದಿಕ್ಕಿಲ್ಲ. ನಮಗೆ ಮಗಳು, ಮೊಮ್ಮಕ್ಕಳನ್ನು ಬಿಟ್ಟರೆ ಬೇರ‍್ಯಾರೂ ಇಲ್ಲ. ಇಂತಹ ಸ್ಥಿತಿಯಲ್ಲಿ ಮನೆ ಬಿಟ್ಟು ಹೋಗಿರುವ ಭರತ್‌ನನ್ನು ಮನೆಗೆ ಕರೆದುಕೊಂಡು ಬನ್ನಿ ಎಂದು ಮಲ್ಲಯ್ಯ ಕಂಡವರೆಲ್ಲರನ್ನೂ ಅಂಗಲಾಚಿಸುವ ಪರಿ ಎಂತಹವರ ಹೃದಯವನ್ನೂ ಕಲಕುತ್ತದೆ.

ಭರತ್ ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ಆತ ಮನೆ ಬಿಟ್ಟು ಹೋಗಿರುವ ವಿಷಯ ತಿಳಿದು ನಾವೂ ಕೂಡ ದಿಗ್ಮೂಢರಾಗಿದ್ದೇವೆ. -ಮಂಜುನಾಥ್, ಮುಖ್ಯಶಿಕ್ಷಕ, ಕನಕದಾಸ ಪ್ರೌಢಶಾಲೆ

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

10 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

11 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

11 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

12 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

12 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

12 hours ago