Andolana originals

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್.

ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ

ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ

ಮೈಸೂರು: ಮೈಸೂರು- ಮಾನಂದವಾಡಿ ಹೆದ್ದಾರಿಯಲ್ಲಿರುವ ಅಶೋಕಪುರಂ ರೈಲ್ವೆ ವರ್ಕ್‌ಶಾಪ್, ನಾಚನಹಳ್ಳಿ ಪಾಳ್ಯ, ಟೋಲ್‌ಗೇಟ್, ಶಿವಪುರ ತಿರುವುಗಳು ‘ಬ್ಲಾಕ್ ಸ್ಪಾಟ್’ಗಳಾಗಿ ಮಾರ್ಪಟ್ಟಿವೆ.

ನಿತ್ಯ ಇಲ್ಲಿ ಒಂದಲ್ಲಾ ಒಂದು ಅಪಾಘಾತ ಸಂಭವಿಸುತ್ತಿದೆ.ಈ ಸ್ಥಳಗಳಲ್ಲಿ ಅಪಘಾತ ವಲಯ ಎಂಬ ಸೂಚನಾ ಫಲಕವಾಗಲಿ, ರಿಫ್ಲೆಕ್ಟರ್, ಬ್ಯಾರಿಕೇಡ್ ಅಥವಾ ರಸ್ತೆ ವಿಭಜಕವನ್ನಾಗಲಿ ಅಳವಡಿಸುವ ಗೋಜಿಗೆ ಹೋಗಿಲ್ಲ. ಇದರಿಂದಾಗಿ ಈ ಮಾರ್ಗದಲ್ಲಿ ವಾಹನ ಸವಾರರು, ಅದರಲ್ಲೂ ದ್ವಿಚಕ್ರ ವಾಹನ ಸವಾರರು ಜೀವ ಭಯದಲ್ಲೇ ಸಂಚರಿಸುವಂತಾಗಿದೆ.

ಬೇಕಿದೆ ರಿಫ್ಲೆಕ್ಟರ್: ಈ ರಸ್ತೆಯಲ್ಲಿ ರಿಫ್ಲೆಕ್ಟರ್, ಬ್ಯಾರಿಕೇಡ್ ಮತ್ತು ಅತ್ಯಾಧುನಿಕ ಸೂಚನಾ ಫಲಕಗಳನ್ನು ಅಳವಡಿಸಬೇಕಿದೆ. ರಸ್ತೆಯ ಇಕ್ಕೆಲಗಳಲ್ಲಿ ರಾತ್ರಿ ವೇಳೆ ಹೊಳೆಯುವ ರಿಫ್ಲೆಕ್ಟರ್ಗಳನ್ನಾದರೂ ಅಳವಡಿಸಿದರೆ ಅಪಘಾತಗಳು ನಿಯಂತ್ರಣಕ್ಕೆ ಬರಲಿವೆ. ಸ್ವಲ್ಪ ಮೈ ಮರೆತರೂ ಮೂರೂ ದಿಕ್ಕುಗಳಿಂದಲೂ ನುಗ್ಗುವ ವಾಹನಗಳ ವೇಗವನ್ನು ನಿಯಂತ್ರಣ ಮಾಡದಿದ್ದರೆ, ಅಪಾಯ ಉಂಟಾಗಲಿದೆ.

ಬೇಕಿದೆ ಬ್ಯಾರಿಕೇಡ್ : ಅಶೋಕಪುರಂ ರೈಲ್ವೆ ವರ್ಕ್ ಶಾಪ್‌ನಿಂದ ಶಿವಪುರ ತಿರುವಿನವರೆಗಿನ ರಸ್ತೆ ಅಲ್ಲಲ್ಲಿ ಹಳ್ಳ ದಿಣ್ಣೆಗಳಿಂದ ಕೂಡಿದೆ. ದಿಣ್ಣೆ ಹತ್ತಿದ ವಾಹನಗಳು ಮತ್ತೆ ಇಳಿಯಬೇಕಾದರೆ ಬ್ರೇಕ್ ಹಾಕಿ ನಿಯಂತ್ರಿಸಬೇಕಾಗಿದೆ. ಈ ಹಿಂದೆ ಸಾರ್ವಜನಿಕರ ದೂರನ್ನು ಆಲಿಸಿ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಅಂದಿನಿಂದ ಇಲ್ಲಿ ಅಪಘಾತವಾಗುವುದು ತುಸು ಕಡಿಮೆಯಾಗಿತ್ತು. ಆದರೆ,ಇದೀಗ ಬ್ಯಾರಿಕೇಡ್‌ಗಳು ಕಣ್ಮರೆಯಾಗಿದ್ದರಿಂದ ಎದುರು -ಬದುರು ಚಲಿಸುವ ವಾಹನಗಳಿಗೂ ತೊಂದರೆ ಆಗುತ್ತಿದೆ. ಎರಡು ದಿನಗಳ ಹಿಂದೆ ಕೂಡ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿ ಎರಡೂ ವಾಹನಗಳು ಜಖಂಗೊಂಡಿವೆ.

” ಅಶೋಕಪುರಂ ರೈಲ್ವೆ ವರ್ಕ್‌ಶಾಪ್, ನಾಚನಹಳ್ಳಿ ಪಾಳ್ಯ, ಟೋಲ್ ಗೇಟ್, ಶಿವಪುರ ತಿರುವು ಬಳಿ ಬ್ಯಾರಿಕೇಡ್ ಅಳವಡಿಸಬೇಕು. ಇದರಿಂದ ಮೂರೂ ದಿಕ್ಕುಗಳಿಂದ ಬರುವ ವಾಹನಗಳ ಅಪಘಾತ ನಿಯಂತ್ರಣವಾಗುತ್ತದೆ. ಸವಾರರು ಜಾಗ್ರತೆಯಿಂದ ರಸ್ತೆಯಲ್ಲಿ ಸಂಚರಿಸಬಹುದು. ಪೊಲೀಸ್ ಇಲಾಖೆ ಕೂಡಲೇ ಸಮಸ್ಯೆ ಬಗೆಹರಿಸಬೇಕಿದೆ.”

-ಚಕ್ರವರ್ತಿ, ಬೈಕ್ ಸವಾರ

 

 

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

17 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

18 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

19 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

19 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

1 day ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

1 day ago