Andolana originals

ಕಂಚುಗಾರ ಕೊಪ್ಪಲಿನ ಪ್ರತಿಭೆಗೆ ಕಾಮನ್ವೆಲ್ತ್‌ನಲ್ಲಿ ಕಂಚು!

ಭೇರ್ಯ ಮಹೇಶ್

ಕಾಮನ್ವೆಲ್ತ್ ಕ್ರೀಡಾಕೂಟದ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ತೋರಿದ ಮೈಸೂರಿನ ಶಿಲ್ಪ 

ಕೆ.ಆರ್.ನಗರ: ಈಕೆ ಹುಟ್ಟಿ- ಬೆಳೆದ ಊರಿನ ಹೆಸರಲ್ಲೇ ಇದೆ ‘ಕಂಚು’; ಅದಕ್ಕೆ ತಕ್ಕಂತೆ ಕಾಮನ್ವೆಲ್ತ್ ಕ್ರೀಡಾ ಕೂಟದ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ತೋರಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಸಾಧಿಸುವ ಛಲವೊಂದಿದ್ದರೆ, ಸಾಧನೆಗೆ ಅಂಗವೈಕಲ್ಯಅಡ್ಡಿಯಾಗದು ಎಂಬುದನ್ನು ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಸಾಧಿಸಿ ತೋರಿಸಿದ್ದಾರೆ

ತಾಲ್ಲೂಕಿನ ಗ್ರಾಮೀಣ ಪ್ರತಿಭೆ ಕೆ.ಎಸ್.ಶಿಲ್ಪ. ಮೈಸೂರು ಜಿಲ್ಲೆಯ ಭತ್ತದ ಕಣಜ ಕೆ.ಆರ್.ನಗರ ತಾಲ್ಲೂಕಿನ ಕಂಚುಗಾರ ಕೊಪ್ಪಲು ಗ್ರಾಮದ ರೈತ ದಂಪತಿ ಶೈಲೇಶ್(ಶೈಲ) ಮತ್ತು ಶಾಂತ ಅವರ ಎರಡನೇ ಮಗಳಾಗಿರುವ ಕೆ.ಎಸ್.ಶಿಲ್ಪ. ಅವರು ನಾಲ್ಕನೇ ವಯಸ್ಸಿನಲ್ಲಿ ರಸ್ತೆ ಅಪಘಾತವೊಂದರಲ್ಲಿ ಒಂದು ಕಾಲು ಕಳೆದು ಕೊಂಡರು. ಅದರಿಂದ ಎದೆಗುಂದಲಿಲ್ಲ. ಬದಲಿಗೆ ವಿದ್ಯಾಭ್ಯಾಸವನ್ನು ಮುಂದುವರಿಸಿ ಎಂ.ಎ., ಬಿ.ಇಡಿ ಪದವಿ ಪಡೆದವರು.

ಮೈಸೂರಿನ ಶಿಕ್ಷಣ ಸಂಸ್ಥೆಯೊಂದರಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ಕ್ರೀಡೆಯಲ್ಲೂ ಸಾಧನೆ ಮೆರೆಯಬೇಕು ಎಂದು ನಿರ್ಧರಿಸಿ ಗುಂಡು ಎಸೆತವನ್ನು ಅಭ್ಯಾಸ ಮಾಡುತ್ತಾ, ಜಿಲ್ಲೆ, ರಾಜ್ಯ, ರಾಷ್ಟ್ರವನ್ನು ಪ್ರತಿನಿಧಿಸಿ, ಇದೀಗ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.

ಪ್ಯಾರಾ ಅಥ್ಲೆಟಿಕ್ ವಿಭಾಗದಲ್ಲಿ ಗುಂಡು ಎಸೆತದಲ್ಲಿ ತೃತೀಯ ಸ್ಥಾನಕ್ಕೆ ಭಾಜನರಾಗಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಪದಕ ಪಟ್ಟಿಯಲ್ಲಿ ಭಾರತದ ಹೆಸರು ದಾಖಲಿಸಿದ್ದಾರೆ.

ಅಭಿನಂದನೆಗಳ ಮಹಾಪೂರ: ಶಿಲ್ಪ ಅವರು ಮಾಡಿದ ಈ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಕೆ.ಆರ್.ನಗರ ತಾಲ್ಲೂಕಿನ ಗ್ರಾಮೀಣ ಪ್ರತಿಭೆಯ ಈ ಸಾಧನೆ ಕಂಡು ಶಿಲ್ಪ ಅವರ ಪೋಷಕರಿಗೆ ತಾಲ್ಲೂಕಿನ ಜನತೆ ಅಭಿನಂದನೆ ಸಲ್ಲಿಸುತ್ತಿರುವುದಲ್ಲದೇ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಗ್ರಾಪಂ ಮಾಜಿ ಅಧ್ಯಕ್ಷ ತ್ಯಾಗರಾಜ್, ನಿವೃತ್ತ ಶಿಕ್ಷಕ ದೇವೇಂದ್ರ ಕುಮಾರ್, ಕುಬೇರ, ಚನ್ನಕೇಶವ ಮೊದಲಾದವರು ಮನೆಗೆ ತೆರಳಿ ಶಿಲ್ಪ ಪೋಷಕರಿಗೆ ಶುಭಾಶಯ ಕೋರಿದರು.

” ಕಷ್ಟಪಟ್ಟು ಮಗಳನ್ನು ಓದಿಸಿದ್ದೇನೆ. ಆಕೆ ಕೂಡ ಛಲದಿಂದಲೇ ಓದಿನ ಜೊತೆಗೆ ಗುಂಡು ಎಸೆತವನ್ನು ಅಭ್ಯಾಸ ಮಾಡಿಕೊಂಡು ಇಂದು ವಿದೇಶಿ ನೆಲದಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆ ಹಾರಿಸಿದ ಹೆಮ್ಮೆ ಇದೆ. ನಮ್ಮ ಮಗಳು ಈ ಸಾಧನೆಯಿಂದ ರಾಜ್ಯ, ದೇಶದ ಜೊತೆಗೆ ಊರಿಗೆ ಕೀರ್ತಿ ತಂದಿದ್ದಾಳೆ.”

– ಶೈಲೇಶ್, ಶಿಲ್ಪ ತಂದೆ

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

24 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago