ನ್ಯಾ. ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗ ಸಲ್ಲಿಸಿರುವ ಒಳ ಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು ಎಂದು ಪ್ರತಿಭಟಿಸಿ ಆಯೋಗದ ಅಧ್ಯಕ್ಷರಾದ ನಾಗಮೋಹನದಾಸ್ ವಿರುದ್ಧ ಚಾಮರಾಜನಗರ ಜಿಲ್ಲೆಯ ದಲಿತ ಮಹಾಸಭಾ ಘೋಷಣೆ ಕೂಗಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿರುವುದು ಖಂಡನಾರ್ಹ.
ನ್ಯಾ. ನಾಗಮೋಹನ ದಾಸ್‌ರವರ ವರದಿಯ ಕುರಿತು ಭಿನ್ನಾಭಿಪ್ರಾಯವಿದ್ದರೆ ಕಾನೂನಾತ್ಮಕವಾಗಿ ಪ್ರಶ್ನೆ ಮಾಡಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮುಕ್ತವಾದ ಅವಕಾಶವಿದೆ ಹಾಗೂ ಪುನರ್ ಪರಿಶೀಲನೆ ನಡೆಸಲೂ ಸರ್ಕಾರದ ಮೇಲೆ ಒತ್ತಡ ಹೇರಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
– ಎನ್. ಪುನೀತ್, ಅಶೋಕಪುರಂ, ಮೈಸೂರು





