ಪ್ರಶಾಂತ್ ಎಸ್.
ಮೈಸೂರು: ಕೊರೊನಾ ಸಂದರ್ಭದಲ್ಲಿ ಜಿಲ್ಲೆಯಹಲವೆಡೆ ಕಡಿತಗೊಳಿಸಲಾಗಿದ್ದ ಒಟ್ಟು ೧೧೦ ಬಸ್ ಮಾರ್ಗಗಳ ಸೇವೆಯನ್ನು ಐದು ವರ್ಷಗಳಾದರೂ ಪರಿಷ್ಕರಿಸದ ಕಾರಣದಿಂದಾಗಿ ಪ್ರಯಾಣಕ್ಕೆ ಬಸ್ಗಳನ್ನೇ ಅವಲಂಬಿಸಿರುವ ಜಿಲ್ಲೆಯ ಸರಗೂರು, ಎಚ್.ಡಿ.ಕೋಟೆ ಮತ್ತಿತರ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ಸರಿಯಾದ ಸಮಯಕ್ಕೆ ಬಸ್ ಸಿಗದೆ ಗಂಟೆಗಟ್ಟಲೆ ಕಾದು ನಿಲ್ಲುವಂತಹ ಸ್ಥಿತಿ ನಿರ್ಮಾಣವಾಗಿದೆ.
ಮೈಸೂರು ವಿಭಾಗದಲ್ಲಿ ಕೇವಲ ೧,೦೭೨ ಬಸ್ಗಳ ಸೇವೆಯನ್ನು ಮಾತ್ರ ಒದಗಿಸಲಾಗಿತ್ತು. ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದರೂ ಮೊದಲಿನಂತೆ ಸಾರಿಗೆ ಸೇವೆಯನ್ನು ಕಲ್ಪಿಸಲಾಗಿಲ್ಲ. ಸಂಜೆ ವೇಳೆ ಬಸ್‌ಗಳು ಮೈಸೂರಿನಿಂದಲೂ ಲಭ್ಯವಿಲ್ಲದ ಕಾರಣದಿಂದ ಅಥವಾ ಬರುವ ಒಂದಷ್ಟು ಬಸ್‌ಗಳಲ್ಲಿ ಹೆಚ್ಚು ಪ್ರಯಾಣಿಕರ ಒತ್ತಡದಿಂದ ತಮ್ಮ ಊರು ಗಳನ್ನು ತಲುಪಲು ಜನರು ಪರದಾಡುವಂತಾಗಿದೆ.
ಬಸ್‌ಗಳ ಕೊರತೆಗೆ ಕಾರಣ: ಗ್ರಾಮಾಂತರ ಭಾಗಗಳಲ್ಲಿ ೩೦ಕ್ಕೂ ಹೆಚ್ಚು ಬಸ್‌ಗಳ ಕೊರತೆ ಇದ್ದರೆ, ನಗರ ಸಾರಿಗೆಯಲ್ಲೂ ಇದೇ ಪರಿಸ್ಥಿತಿ ಮುಂದುವರಿದಿದೆ. ಇಲ್ಲೂ ಕೂಡ ಎಲ್ಲ ಕಡೆಗೆ ಸಮರ್ಪಕ ಬಸ್ ವ್ಯವಸ್ಥೆಯನ್ನು ಇನ್ನೂ ಕಲ್ಪಿಸಲಾಗಿಲ್ಲ. ಹೀಗಾಗಿ ಗ್ರಾಮೀಣ ಪ್ರದೇಶದ ಜನರ ಜತೆ ನಗರವಾಸಿಗಳೂ ಸಂಚರಿಸಲು ಬಸ್ಗಳ ಸಮಸ್ಯೆ ಎದುರಿಸುತ್ತಿದ್ದಾರೆ. ಮೈಸೂರು ಜಿಲ್ಲೆಯಾದ್ಯಂತ ೧.೨೫ ಲಕ್ಷ ವಿದ್ಯಾರ್ಥಿಗಳಿದ್ದು ಇವರೆಲ್ಲರಿಗೂ ಉನ್ನತ ಶಿಕ್ಷಣ ಕಲಿಕೆಗೆ ಮೈಸೂರು ನಗರ ಕೇಂದ್ರವಾಗಿರುವ ಕಾರಣ, ಗ್ರಾಮೀಣ ಪ್ರದೇಶದ ಸಾಕಷ್ಟು ವಿದ್ಯಾರ್ಥಿಗಳು ದಿನನಿತ್ಯ ಮೈಸೂರಿಗೆ ಆಗಮಿಸುತ್ತಾರೆ. ಇಷ್ಟೇ ಅಲ್ಲದೆ ಉದ್ಯೋಗ ಅರಸಿ ನಗರದ ಕಡೆಗೆ ನೂರಾರು ಕೂಲಿ ಕಾರ್ಮಿಕರು ಬರುತ್ತಿದ್ದಾರೆ. ಇವರೆಲ್ಲರಿಗೂ ಉತ್ತಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿರುವುದು ಕೆಎಸ್‌ಆರ್‌ಟಿಸಿ ನಿಗಮದ ಪ್ರಮುಖ ಜವಾಬ್ದಾರಿಯಾಗಿದೆ.
ಶಕ್ತಿ ಯೋಜನೆಯ ಫಲಾನುಭವಿಗಳೇ ಹೆಚ್ಚು : ರಾಜ್ಯ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿ ಆದ ಬಳಿಕ ಗ್ರಾಮಾಂತರ ಮತ್ತು ನಗರ ಸಾರಿಗೆ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಇದರಿಂದ ವಿದ್ಯಾರ್ಥಿಗಳ ಸಂಚಾರಕ್ಕೆ ಒಂದಷ್ಟು ಅನನುಕೂಲ ಉಂಟಾಗಿದೆ. ಸಕಾಲಕ್ಕೆ ಬಸ್ ಬಾರದಿರುವುದರಿಂದ ಬ್ಯಾಗುಗಳನ್ನು ಹೊತ್ತು ನಿಂತು ಬಸವಳಿದ ಶಾಲಾ ಮಕ್ಕಳು ಬಸ್ ಬಂದಾಕ್ಷಣ ಜನರ ನೂಕು ನುಗ್ಗಲಿನ ನಡುವೆ ಬಸ್ ಹತ್ತಲು ಹರಸಾಹಸ ಪಡುವಂತಾಗಿದೆ. ಈ ಸಮಸ್ಯೆಯನ್ನು ನೀಗಿಸಲು ಸಾರಿಗೆ ನಿಗಮ ಹೆಚ್ಚುವರಿ ಬಸ್‌ಗಳ ಸೇವೆಯನ್ನು ಒದಗಿಸುವ ಅಗತ್ಯವಿದೆ.
” ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಸರಿಯಾದ ರೀತಿಯಲ್ಲಿದೆ. ’ಶಕ್ತಿ’ ಯೋಜನೆಯಡಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆಯೂ ಹೆಚ್ಚಿದೆ. ಹಾಗಾಗಿ ಸ್ವಲ್ಪ ಮಟ್ಟಿಗೆ ಸಮಸ್ಯೆ ಆಗಿರಬಹುದು. ಅದನ್ನು ಪರಿಶೀಲಿಸಿ ಪ್ರಯಾಣಿಕರಿಗೆ ಸರಿಯಾದ ವ್ಯವಸ್ಥೆ ಮಾಡುತ್ತೇವೆ.”
ಶ್ರೀನಿವಾಸ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ,ಮೈಸೂರು
” ಶಕ್ತಿ ಯೋಜನೆ ಉತ್ತಮವಾಗಿದೆ. ಆದರೆಈ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಬಸ್‌ಗಳ ಸಮಸ್ಯೆ ಹೆಚ್ಚಿದ್ದು ಇನ್ನಷ್ಟು ಹೆಚ್ಚುವರಿ ಬಸ್‌ಗಳನ್ನು ರಾತ್ರಿ ೭ ಗಂಟೆ ನಂತರ ನಿಯೋಜನೆ ಮಾಡಿದರೆ ಪ್ರಯಾಣಿಕರಿಗೆ ಅನುಕೂಲ ಆಗುತ್ತದೆ.”
-ಸುನಿಲ್, ಪ್ರಯಾಣಿಕ
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…