ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಕೆ ಭರಾಟೆ ಜೋರಾಗಿತ್ತು.
ಈ ಎರಡೂ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಮಾ.೨೩ ಕೊನೆಯ ದಿನವಾಗಿತ್ತು. ಆಡಳಿತಾ ರೂಢ ಪಕ್ಷ ಕಾಂಗ್ರೆಸ್ ಮತ್ತು ವಿಪಕ್ಷವಾದ ಬಿಜೆಪಿ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲೂ ಸೋಮ ವಾರ ಬಿ ಫಾರಂ ಸಮೇತ ತಮ್ಮ ಉಮೇದು ವಾರಿಕೆಗಳನ್ನು ಸಲ್ಲಿಸಿದ್ದು, ಉಪ ಚುನಾವಣೆಗೆ ಅಖಾಡ ಸಜ್ಜಾಗಿದೆ.
ಈ ಎರಡೂ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಯು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮತ್ತು ವಿಪಕ್ಷ ಬಿಜೆಪಿಯ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಯಿತು. ಎರಡೂ ಪಕ್ಷಗಳ ಅಭ್ಯರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಗ ರೊಂದಿಗೆ ಆಗಮಿಸಿ ತಮ್ಮ ಉಮೇದು ವಾರಿಕೆಯನ್ನು ಸಲ್ಲಿಸಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪುತ್ರ ಹಾಗೂ ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ್ ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದು, ನಾಮಪತ್ರ ಸಲ್ಲಿಕೆಯ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದರು.
ಆದರೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಚಿವ ಜಮೀರ್ ಅಹಮದ್ ಖಾನ್ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಸಂಸದರಾದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಮಾಜಿ ಸಚಿವ ಶ್ರೀರಾಮುಲು, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರುಗಳು ಉಪಸ್ಥಿತರಿದ್ದು, ಉಪಚುನಾವಣೆಯ ಜಿದ್ದಾಜಿದ್ದಿನ ಹೋರಾಟಕ್ಕೆ ಪುಷ್ಟಿ ನೀಡಿದರು. ಈ ಕ್ಷೇತ್ರದಲ್ಲಿ ಈ ಇಬ್ಬರೂ ಅಭ್ಯರ್ಥಿಗಳು ಕಳೆದ ಶುಕ್ರವಾರ ಶುಭದಿನವೆಂದು ನಾಮಪತ್ರ ಸಲ್ಲಿಕೆ ಮಾಡಿದ್ದರು. ಸೋಮವಾರ ಪಕ್ಷದ ಬಿ ಫಾರಂ ಸಮೇತ ಅಧಿಕೃತವಾಗಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.
ಬಾಗಲಕೋಟೆಯಲ್ಲೂ ನಾಮಪತ್ರ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿ ಮಠ ತಮ್ಮ ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ೬ ನೇ ಬಾರಿಗೆ ಸ್ಪರ್ಧಿಸುತ್ತಿರುವ ಚರಂತಿ ಮಠ ಅವರು ಮೂರು ಬಾರಿ ಗೆದ್ದು, ೨ ಬಾರಿ ಪರಾಭವಗೊಂಡಿದ್ದರು. ಬಿಜೆಪಿ ಅಭ್ಯರ್ಥಿಯ ಉಮೇದುವಾರಿಕೆ ಸಲ್ಲಿಕೆ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪಿ. ಎಚ್.ಪೂಜಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಂಸದರಾದ ಪಿ.ಸಿ.ಗದ್ದಿಗೌಡರ್, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣ ಸಾ. ಭಾಂಡೆಗೆ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಮುರುಗೇಶ್ ನಿರಾಣಿ ಸೇರಿದಂತೆ ಹಲವು ನಾಯಕರುಗಳು ಉಪಸ್ಥಿತರಿದ್ದರು.
ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ದಿ. ಹೆಚ್.ವೈ. ಮೇಟಿಯವರ ಕಿರಿಯ ಪುತ್ರ ಉಮೇಶ್ ಮೇಟಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಆರ್. ಬಿ.ತಿಮ್ಮಾಪುರ, ಸತೀಶ ಜಾರಕಿಹೊಳಿ, ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಶಿವರಾಜ ತಂಗಡಗಿ, ರಹೀಂಖಾನ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ಈ ಉಪಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಮಾ. ೨೬ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಮಂಗಳವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ಏ. ೯ರಂದು ಈ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಮೇ ೪ ರಂದು ಮತ ಏಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…
ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…
ಬೆಂಗಳೂರು: ಮಾರ್ಚ್.28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್…
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…