Andolana originals

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಕೆ ಭರಾಟೆ ಜೋರಾಗಿತ್ತು.

ಈ ಎರಡೂ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಮಾ.೨೩ ಕೊನೆಯ ದಿನವಾಗಿತ್ತು. ಆಡಳಿತಾ ರೂಢ ಪಕ್ಷ ಕಾಂಗ್ರೆಸ್ ಮತ್ತು ವಿಪಕ್ಷವಾದ ಬಿಜೆಪಿ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲೂ ಸೋಮ ವಾರ ಬಿ ಫಾರಂ ಸಮೇತ ತಮ್ಮ ಉಮೇದು ವಾರಿಕೆಗಳನ್ನು ಸಲ್ಲಿಸಿದ್ದು, ಉಪ ಚುನಾವಣೆಗೆ ಅಖಾಡ ಸಜ್ಜಾಗಿದೆ.

ಈ ಎರಡೂ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಯು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮತ್ತು ವಿಪಕ್ಷ ಬಿಜೆಪಿಯ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಯಿತು. ಎರಡೂ ಪಕ್ಷಗಳ ಅಭ್ಯರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಗ ರೊಂದಿಗೆ ಆಗಮಿಸಿ ತಮ್ಮ ಉಮೇದು ವಾರಿಕೆಯನ್ನು ಸಲ್ಲಿಸಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪುತ್ರ ಹಾಗೂ ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ್ ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದು, ನಾಮಪತ್ರ ಸಲ್ಲಿಕೆಯ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದರು.

ಆದರೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಚಿವ ಜಮೀರ್ ಅಹಮದ್ ಖಾನ್ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.

ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಸಂಸದರಾದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಮಾಜಿ ಸಚಿವ ಶ್ರೀರಾಮುಲು, ಎಂ.ಪಿ.ರೇಣುಕಾಚಾರ್ಯ  ಸೇರಿದಂತೆ ಬಿಜೆಪಿ ಪ್ರಮುಖ ನಾಯಕರುಗಳು ಉಪಸ್ಥಿತರಿದ್ದು, ಉಪಚುನಾವಣೆಯ ಜಿದ್ದಾಜಿದ್ದಿನ ಹೋರಾಟಕ್ಕೆ ಪುಷ್ಟಿ ನೀಡಿದರು. ಈ ಕ್ಷೇತ್ರದಲ್ಲಿ ಈ ಇಬ್ಬರೂ ಅಭ್ಯರ್ಥಿಗಳು ಕಳೆದ ಶುಕ್ರವಾರ ಶುಭದಿನವೆಂದು ನಾಮಪತ್ರ ಸಲ್ಲಿಕೆ ಮಾಡಿದ್ದರು. ಸೋಮವಾರ ಪಕ್ಷದ ಬಿ ಫಾರಂ ಸಮೇತ ಅಧಿಕೃತವಾಗಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.

ಬಾಗಲಕೋಟೆಯಲ್ಲೂ ನಾಮಪತ್ರ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿ ಮಠ ತಮ್ಮ ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ೬ ನೇ ಬಾರಿಗೆ ಸ್ಪರ್ಧಿಸುತ್ತಿರುವ ಚರಂತಿ ಮಠ ಅವರು ಮೂರು ಬಾರಿ ಗೆದ್ದು, ೨ ಬಾರಿ ಪರಾಭವಗೊಂಡಿದ್ದರು. ಬಿಜೆಪಿ ಅಭ್ಯರ್ಥಿಯ ಉಮೇದುವಾರಿಕೆ ಸಲ್ಲಿಕೆ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪಿ. ಎಚ್.ಪೂಜಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಂಸದರಾದ ಪಿ.ಸಿ.ಗದ್ದಿಗೌಡರ್, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣ ಸಾ. ಭಾಂಡೆಗೆ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಮುರುಗೇಶ್ ನಿರಾಣಿ ಸೇರಿದಂತೆ ಹಲವು ನಾಯಕರುಗಳು ಉಪಸ್ಥಿತರಿದ್ದರು.

ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ದಿ. ಹೆಚ್.ವೈ. ಮೇಟಿಯವರ ಕಿರಿಯ ಪುತ್ರ ಉಮೇಶ್ ಮೇಟಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಆರ್. ಬಿ.ತಿಮ್ಮಾಪುರ, ಸತೀಶ ಜಾರಕಿಹೊಳಿ, ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಶಿವರಾಜ ತಂಗಡಗಿ, ರಹೀಂಖಾನ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

ಈ ಉಪಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಮಾ. ೨೬ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಮಂಗಳವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ಏ. ೯ರಂದು ಈ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಮೇ ೪ ರಂದು ಮತ ಏಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

9 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

9 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

9 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

9 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

11 hours ago