ಬೈಲಕುಪ್ಪೆ: ಪಿರಿಯಾಪಟ್ಟಣ ತಾಲ್ಲೂಕಿನ ಆವರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಿನ ಮುಳಸೋಗೆ ಮುಖ್ಯ ರಸ್ತೆಯ ಪಕ್ಕದಲ್ಲಿ ಹೈ ವೋಲ್ಟೇಜ್ ವಿದ್ಯುತ್ ತಂತಿಯ ಮೇಲೆ ಕಾಡು ಜಾತಿಯ ಮರವೊಂದು ಬಾಗಿ ನಿಂತಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿತ್ತು. ಈ ಬಗ್ಗೆ ‘ಆಂದೋಲನ’ ದಿನಪತ್ರಿಕೆಯಲ್ಲಿ ‘ವಿದ್ಯುತ್ ತಂತಿ ಮಧ್ಯೆ ಬಾಗಿ ನಿಂತ ಮರ ತೆರವುಗೊಳಿಸಿ’ ಎಂಬ ಶೀರ್ಷಿಕೆಯಡಿ ನ.೧೯ರ ಬುಧವಾರ ಪ್ರಕಟವಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಉಪವಲಯ ಅರಣ್ಯಾಧಿಕಾರಿ ನಿಜಾಂ ಮಿಲ್ಲಾ, ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅವರ ಆದೇಶದ ಮೇರೆಗೆ ವಿದ್ಯುತ್ ಇಲಾಖೆಯವರಿಗೆ ಮಾಹಿತಿ ನೀಡಿ ಗುರುವಾರ ಕೊಂಬೆಯನ್ನು ತೆರವುಗೊಳಿಸಿದ್ದಾರೆ.





