ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಇಡೀ ಮಹದೇಶ್ವರ ಬೆಟ್ಟ ಸಿಂಗಾರಗೊಂಡು ಜಗಜಗಿಸುತ್ತಿದೆ.
ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಐತಿಹಾಸಿಕ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ ಹಾಗೂ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಿದ್ಧತೆ ಪೂರ್ಣಗೊಳಿಸಿವೆ.
ಚಾಮರಾಜನಗರ ಲೋಕಸಭಾ ಚುನಾವಣೆ ಸಂದರ್ಭ ದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ. ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಜಿಲ್ಲೆಯ ಪ್ರತಿಯೊಂದು ಗ್ರಾಮದ ಸಮಸ್ಯೆ ಗಳನ್ನೂ ಕಣ್ಣಾರೆ ನೋಡಿದ್ದರು. ಚುನಾವಣೆ ವೇಳೆಯೇ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಸಚಿವ ಸಂಪುಟ ಸಭೆಯನ್ನು ಜಿಲ್ಲೆಯಲ್ಲಿ ನಡೆಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಸಚಿವದ್ವಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ ನಂತರ ಮ. ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ವಿವಿಧ ಕಾರಣಾಂತರಗಳಿಂದ ಮೂರು ಬಾರಿ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿತ್ತು. ಈಗ ನಾಲ್ಕನೇ ಬಾರಿಗೆ ಏ. ೨೪ರಂದು ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಶಾಸಕ ಎಂ. ಆರ್. ಮಂಜುನಾಥ್, ಜಿಲ್ಲಾಧಿಕಾರಿ ಸಿ. ಟಿ. ಶಿಲ್ಪಾ ನಾಗ್, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಶ್ರೀ ಕ್ಷೇತ್ರದಲ್ಲಿ ಪ್ರಗತಿಯಲ್ಲಿದ್ದ ಕಾಮಗಾರಿ ಗಳನ್ನು ಪೂರ್ಣಗೊಳಿಸಿ ಉದ್ಘಾಟನೆಗೆ ಸಜ್ಜುಗೊಳಿಸಿದ್ದಾರೆ.
ಬದಲಾದ ಸ್ಥಳ: ಮ. ಬೆಟ್ಟದ ದೀಪದಗಿರಿ ಒಡ್ಡುವಿನ ೧೦೮ ಅಡಿ ಮಲೆ ಮಹದೇಶ್ವರರ ಪ್ರತಿಮೆ ಸ್ಥಳದ ಆವರಣದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮೊದಲು ತೀರ್ಮಾನಿಸಲಾಗಿತ್ತು. ಆದರೆ ಈ ಪ್ರದೇಶದಲ್ಲಿ ಅತಿಯಾದ ಗಾಳಿ ಬೀಸುವುದರಿಂದ ಸೂಕ್ತವಾಗಿಲ್ಲ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ನಂತರ ವಜ್ರಮಲೆ ವಸತಿಗೃಹದ ಮುಂಭಾಗದಲ್ಲಿರುವ ಖಾಲಿ ನಿವೇಶನದಲ್ಲಿ ಕೇವಲ ಮೂರು ದಿನಗಳಲ್ಲಿ ತಜ್ಞರ ಮಾರ್ಗದರ್ಶನದಲ್ಲಿ ಸಚಿವ ಸಂಪುಟ ಸಭೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಜರ್ಮನ್ ಟೆಂಟ್ ಶಾಮಿಯಾನ ಹಾಕಿಸುವ ಮೂಲಕ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ನಡೆಸಲಾಗಿದೆ. ಎಸ್. ಎಂ. ಕೃಷ್ಣ ಮುಖ್ಯಮಂತ್ರಿಗಳಾಗಿದ್ದಾಗ ಬಿಳಿಗಿರಿರಂಗನ ಬೆಟ್ಟದಲ್ಲಿ ಮಿನಿ ಸಚಿವ ಸಂಪುಟ ಸಭೆ ನಡೆದಿತ್ತು. ಆದರೆ ಗುರುವಾರ ಮ. ಬೆಟ್ಟದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆ, ಭರಪೂರ ಅನುದಾನ ದೊರೆಯುವ ವಿಶ್ವಾಸ ಮೂಡಿದೆ.
ವಿನೂತನ ಮಾದರಿಯಲ್ಲಿ ವಿನ್ಯಾಸ: ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಸಾಲೂರು ಬೃಹನ್ಮಠದ ಎಸ್‌ಬಿಐ ಸರ್ಕಲ್‌ನಲ್ಲಿ ರಾಜಗೋಪುರ ಮಾದರಿ, ವಜ್ರಮಲೆ ವಸತಿಗೃಹದ ಮುಂಭಾಗ ಸ್ವಾಗತ ಕಮಾನು, ಮಲೆ ಮಹದೇಶ್ವರ ಪ್ರತಿಮೆ ಸ್ಥಳಗಳಲ್ಲಿ ವಿಶೇಷ ಮಾದರಿ ಯಲ್ಲಿ ಗೋಪುರಗಳನ್ನು ಸ್ಥಾಪಿಸಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಬೆಟ್ಟದಲ್ಲಿ ಮಹಾಶಿವರಾತ್ರಿ, ಯುಗಾದಿ ಅಮಾವಾಸ್ಯೆ , ದೀಪಾವಳಿ, ಕಾರ್ತಿಕ ಮಾಸದ ಜಾತ್ರಾ ಮಹೋತ್ಸವಕ್ಕೆ ವಿಶೇಷವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ. ಈಗ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಮೊಟ್ಟ ಮೊದಲ ಬಾರಿಗೆ ಬೆಟ್ಟದ ಮಾಸ್ಟರ್ ಪ್ಲಾನ್ ಆವರಣದಲ್ಲಿ ವಿನೂತನ ಮಾದರಿಯಲ್ಲಿ ವಿದ್ಯುತ್ ದೀಪಾ ಲಂಕಾರ ಮಾಡಿರುವುದು ನೋಡುಗರ ಕಣ್ಮನ ಸೆಳೆಯುತ್ತಿದೆ.
ಮ. ಬೆಟ್ಟದಲ್ಲಿ ಮೊತ್ತಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಮಾರ್ಗದರ್ಶನ ದಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನೂ ಅಚ್ಚುಕಟ್ಟಾಗಿ ಮಾಡಲಾಗಿದೆ. ಒಂದು ವಾರದಿಂದ ಜಿಲ್ಲಾಡಳಿತ ಹಾಗೂ ಹಿರಿಯ ಅಧಿಕಾರಿಗಳ ಸಹಕಾರದಿಂದ ಸಚಿವ ಸಂಪುಟ ಸಭೆ ಸಿದ್ಧತೆಗೆ ಶ್ರಮ ವಹಿಸಲಾಗಿದೆ. ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೂ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ.
– ಎ. ಇ. ರಘು, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…