Andolana originals

ಚಾ.ನಗರ: ಮಂತ್ರಿ ಸ್ಥಾನದ ಮೇಲೆ ಇಬ್ಬರು ಕಣ್ಣು!

ರಾಜೇಶ್ ಬೆಂಡರವಾಡಿ

ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ ಪ್ರಬಲ ಆಕಾಂಕ್ಷಿಗಳು

ಚಾಮರಾಜನಗರ: ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ನವೆಂಬರ್ -ಡಿಸೆಂಬರ್‌ನಲ್ಲಾದರೂ ಅಥವಾ ಮುಂದೆ ಯಾವಾಗ ಆದರೂ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಸಚಿವ ಸ್ಥಾನಗಿಟ್ಟಿಸಲು ಪ್ರಬಲ ಪೈಪೋಟಿಗೆ ಇಳಿಯುವುದರಲ್ಲಿ ಸಂದೇಹವೇ ಇಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ನವೆಂಬರ್‌ಗೆ ಎರಡೂವರೆ ವರ್ಷಗಳಾಗಲಿದ್ದು, ಸಂಪುಟ ಪುನರ್ ರಚನೆ ವೇಳೆ ಹೊಸಬರಿಗೆ ಅವಕಾಶ ದೊರೆಯುವ ಲಕ್ಷಣ ಕಾಣುತ್ತಿದೆ. ಹಾಗೆ ನೋಡಿದರೆ, ಜಿಲ್ಲೆಯ ಮಟ್ಟಿಗೆ ಈ ಇಬ್ಬರೂ ಹಿರಿಯರೇ. ಮುಖ್ಯಮಂತ್ರಿ ಅವರಿಗೂ ಆಪ್ತರೇ. ಸಿ.ಪುಟ್ಟರಂಗಶೆಟ್ಟಿ ಅವರು ೨೦೦೮ರಿಂದಲೂ ಸತತವಾಗಿ ೪ ಬಾರಿಯಿಂದ ಶಾಸಕರು. ಸೋಲಿಲ್ಲದ ಸರದಾರ. ಕಾಂಗ್ರೆಸ್-ಜಾ.ದಳ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಖಾತೆ ಸಚಿವರಾಗಿದ್ದರು. ಈಗಿನ ಸರ್ಕಾರದಲ್ಲಿ ಎಂಎಸ್‌ಐಎಲ್ ಅಧ್ಯಕ್ಷರಾಗಿದ್ದಾರೆ.

ಎ.ಆರ್.ಕೃಷ್ಣಮೂರ್ತಿ ಅವರ ವಿಚಾರಕ್ಕೆ ಬಂದರೆ ಅವರು ಮೂರು ಬಾರಿ ಶಾಸಕರು. ವಿಸರ್ಜಿತ ಸಂತೇಮರಹಳ್ಳಿ ಕ್ಷೇತ್ರದಿಂದ ೧೯೯೪, ೧೯೯೯ರಲ್ಲಿ ಮತ್ತು ಕೊಳ್ಳೇಗಾಲದಿಂದ ೨೦೨೩ರಲ್ಲಿ ಶಾಸಕರಾದವರು. ಶಾಸನಸಭೆ ಪ್ರವೇಶಿಸಿಯೇ ಅವರು ೨ ದಶಕಗಳ ಮೇಲಾಯಿತು. ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರಿಗೆ ನಿಗಮ, ಮಂಡಳಿಯಲ್ಲಿ ಸ್ಥಾನಮಾನ ನೀಡುವ ವಿಚಾರ ಮುನ್ನೆಲೆಯಲ್ಲಿ ಬಂದಾಗ ಅದಕ್ಕೆ ನಾನು ಆಕಾಂಕ್ಷಿ ಅಲ್ಲ ಎಂದು ಮಾಧ್ಯಮದ ಮುಂದೆ ಬಹಿರಂಗವಾಗಿ ಹೇಳಿ ಅದರಿಂದ ದೂರ ಉಳಿದವರು ಕೃಷ್ಣಮೂರ್ತಿ.

ಎಆರ್‌ಕೆ ಮತ್ತು ಸಿ.ಪುಟ್ಟರಂಗಶೆಟ್ಟಿ ಅವರು ಕ್ರಮವಾಗಿ ದಲಿತ ಹಾಗೂ ಉಪ್ಪಾರ ಸಮಾಜಕ್ಕೆ ಸೇರಿದವರು.ಎರಡೂ ಸಮುದಾಯಗಳೂ ಕಾಂಗ್ರೆಸ್ ಪಕ್ಷದ ಪ್ರಮುಖ ವೋಟ್ ಬ್ಯಾಂಕ್‌ಗಳು ಎಂದರೆ ತಪ್ಪಾಗಲಾರದು. ಕೃಷ್ಣಮೂರ್ತಿ ಅವರ ತಂದೆಯವರಾದ ಮಾಜಿ ರಾಜ್ಯಪಾಲ ಬಿ.ರಾಚಯ್ಯ ನನ್ನ ರಾಜಕೀಯ ಗುರುಗಳು ಎಂದು ಹಲವು ಬಾರಿ ಸಿಎಂ ಸಿದ್ದರಾಮಯ್ಯ ಅವರು ಹೇಳಿಕೊಂಡಿದ್ದಾರೆ. ಹೀಗಾಗಿ ರಾಜಕೀಯವನ್ನು ಮೀರಿದ ಆತ್ಮೀಯತೆ ರಾಚಯ್ಯ ಅವರ ಕುಟುಂಬದವರ ಜೊತೆ ಸಿಎಂಗೆ ಇದೆ ಎಂಬುದು ನಿರ್ವಿವಾದ.

೨೦೨೩ರಲ್ಲಿ ಸರ್ಕಾರ ಹೊಸದಾಗಿ ರಚನೆ ಆದ ಸಂದರ್ಭದಲ್ಲಿ ಪುಟ್ಟರಂಗಶೆಟ್ಟಿ ಅವರನ್ನು ವಿಧಾನಸಭೆ ಉಪ ಸಭಾಪತಿ ಮಾಡಿ ಆದೇಶ ಹೊರಡಿಸಲಾಗಿತ್ತು. ಪುಟ್ಟರಂಗ ಶೆಟ್ಟಿ ಅವರು ಆ ಸ್ಥಾನದಿಂದ ನಯವಾಗಿಯೇ ಹಿಂದೆ ಸರಿದಿದ್ದು ಗೊತ್ತಿರುವ ವಿಚಾರ. ಬದಲಾದ ಸನ್ನಿವೇಶದಲ್ಲಿ ಅವರನ್ನು ಎಂಎಸ್‌ಐಎಲ್ಅ ಧ್ಯಕ್ಷರನ್ನಾಗಿ ಮಾಡಲಾಯಿತು.

೨೦೧೩-೧೮ರ ಅವಧಿಯಲ್ಲಿ ಪ್ರಥಮ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗಲೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಮತ್ತು ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಪುಟ್ಟರಂಗಶೆಟ್ಟಿ ಕಾರ್ಯ ನಿರ್ವಹಿಸಿದ್ದರು. ಹೀಗೆ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇದ್ದಾಗೆಲ್ಲಾ ಪುಟ್ಟರಂಗಶೆಟ್ಟಿ ಅವರಿಗೆ ಸ್ಥಾನಮಾನ ದೊರೆಯುತ್ತಲೇ ಬಂದಿದೆ ಎಂಬುದು ಅಷ್ಟೇ ವಾಸ್ತವ. ನಿರೀಕ್ಷಿಸಿದ ರೀತಿಯಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗಿ ಸಚಿವ ಸ್ಥಾನ ನೀಡುವ ವಿಚಾರ ಮುನ್ನೆಲೆಗೆ ಬಂದಾಗ ಇಬ್ಬರೂ ಆಪ್ತರಲ್ಲಿ ಯಾರನ್ನು ಮಾಡಬಹುದು? ಎಂಬುದು ಯಕ್ಷಪ್ರಶ್ನೆಯಾಗಿದೆ.

ಚಾ.ನಗರಕ್ಕೆ ಪ್ರಾತಿನಿಧ್ಯ ಏಕೆ?: 

ಮೊದಲ ಎರಡೂವರೆ ವರ್ಷಗಳ ಅವಧಿಯಲ್ಲಿ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯವೇ ಇಲ್ಲದ ಚಾಮರಾಜನಗರದಂತಹ ಜಿಲ್ಲೆಗಳಿಗೆ ಸದ್ಯದಲ್ಲೇ ಎದುರಾಗಲಿರುವ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕಾರಣಕ್ಕೆ ಆದ್ಯತೆ ನೀಡುವ ಎಲ್ಲ ಸಾಧ್ಯತೆಗಳೂ ಇವೆ. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಈ ಇಬ್ಬರು ಜಿಲ್ಲೆಯ ಶಾಸಕರು ಅವಕಾಶ ಸಿಕ್ಕಾಗಲೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಮತ್ತು ಅವರ ಆಪ್ತ ಸಚಿವರ ಬಳಿ ಭಿನ್ನವತ್ತಳೆ ಸಲ್ಲಿಸಿದ್ದಾರೆ ಎಂಬುದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಆಕಾಂಕ್ಷಿ ಎಂದಿದ್ದಾರೆ, ಬೆಂಬಲಿಗರು ಸಹ ಧ್ವನಿಯಾಗಿದ್ದಾರೆ…: 

ಸಚಿವ ಸಂಪುಟ ಪುನರ್ ರಚನೆ ಮತ್ತು ವಿಸ್ತರಣೆ ವಿಚಾರ ಬಂದಾಗಲೆಲ್ಲಾ ಎ.ಆರ್.ಕೃಷ್ಣಮೂರ್ತಿ ಮತ್ತು ಪುಟ್ಟರಂಗಶೆಟ್ಟಿ ಅವರ ಬೆಂಬಲಿಗರು ‘ತಮ್ಮ ನಾಯಕರನ್ನು’ ಮಂತ್ರಿ ಮಾಡುವಂತೆ ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಉಭಯ ಶಾಸಕರೂ ಕೂಡ ಸಚಿವ ಸ್ಥಾನಕ್ಕೆ ತಾವು ಪ್ರಬಲ ಆಕಾಂಕ್ಷಿಗಳು ಎಂಬುದನ್ನು ಸಂದರ್ಭ ಸಿಕ್ಕಾಗಲೆಲ್ಲಾ ಹೊರಹಾಕುತ್ತಲೇ ಬಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

33 mins ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

2 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

2 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

2 hours ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

3 hours ago