Andolana originals

ಅನೈರ್ಮಲ್ಯ ತಾಣವಾದ ಶಾಲಾ ಮುಖ್ಯ ರಸ್ತೆ

ಮೈಸೂರು: ರಸ್ತೆಯ ಬದಿ ಎಲ್ಲೆಂದರಲ್ಲಿ ಸುರಿದಿರುವ ಕಸದ ರಾಶಿ, ಮುಂಜಾನೆ ಶಾಲೆಗೆ ಬರುವ ಮಕ್ಕಳು ದುರ್ನಾತದಿಂದ ಮೂಗು ಮುಚ್ಚಿಕೊಂಡೇ ಬರುವ ದುಸ್ಥಿತಿ. ಇದು ನಗರದ ಚಾಮರಾಜಪುರಂ ರೈಲು ನಿಲ್ದಾಣದ ಹಿಂಬದಿಯಲ್ಲಿರುವ ಕ್ಯಾಪಿಟಲ್ ಆಂಗ್ಲ ಮಾಧ್ಯಮ ಶಾಲೆಯ ಬಳಿ ಕಂಡು ಬರುವ ದೃಶ್ಯಗಳು. ರೈಲ್ವೆ ಹಳಿ ಬದಿ ಕಸ ವಿಲೇವಾರಿ ಹಸಿ ಕಸ-ಒಣ ಕಸ, ಪ್ಲಾಸ್ಟಿಕ್, ಇತರೆ ತ್ಯಾಜ್ಯಗಳು ಸೇರಿದಂತೆ ಎಲ್ಲ ಕಸಗಳು ಸಹಾ ರೈಲು ಹಳಿಯ ಬದಿಯಲ್ಲಿ ಹಾಕಲಾಗುತ್ತಿದೆ. ಇತ್ತ ಕಾಲೇಜು ಸಂಪರ್ಕಿಸುವ ಮುಖ್ಯ ರಸ್ತೆಯ ಸುತ್ತಮುತ್ತ ಕಸದ ರಾಶಿಯೇ ತುಂಬಿದ್ದು, ಸೊಳ್ಳೆ ನೊಣಗಳ ಹಾವಳಿ ಮಿತಿ ಮೀರಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ತಾಣವಾಗಿ ಮಾರ್ಪಟ್ಟಿದೆ.

ಶಾಲೆ ಕಾಂಪೌಂಡ್ ಬಳಿ ಟ್ರಾನ್ಸ್-ರ್ಮರ್: ಶಾಲಾ ಕಾಂಪೌಂಡ್ ಬಳಿ ಬೃಹತ್ ಗಾತ್ರದ ಟ್ರಾನ್ಸ್‌ಫಾರ್ಮರ್ ಇದ್ದು, ವಿದ್ಯಾರ್ಥಿಗಳಿಗೆ ಜೀವ ಭಯ ಕಾಡುತ್ತಿದೆ. ಶಾಲಾ ಕಾಂಪೌಂಡ್ ಬಳಿಯೂ ಕಸದ ರಾಶಿಯೇ ಕಂಡು ಬಂದಿದ್ದು, ಈ ಬಗ್ಗೆ ನಗರ ಪಾಲಿಕೆ ಅಧಿಕಾರಿಗಳಿಗೆ ಹಲವಾರು ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಗರ ಪಾಲಿಕೆ ಅಧಿಕಾರಿಗಳು ಇದು ರೈಲ್ವೆ ಇಲಾಖೆ ವ್ಯಾಪ್ತಿಗೆ ಬರುತ್ತದೆ ಎನ್ನುತ್ತಾರೆ. ರೈಲ್ವೆ ಇಲಾಖೆ ಅದಿಕಾರಿಗಳ ಗಮನಕ್ಕೆ ತಂದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಪಾಲಿಕೆ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಸದ ರಾಶಿ ತೆರವಾಗದೇ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಸಂಬಂಧಪಟ್ಟ ಸಚಿವರು ಈ ಬಗ್ಗೆ ಗಮನ ಹರಿಸಿ ಕಸ ತೆರವು ಮಾಡುವಂತೆ ಕ್ಯಾಪಿಟಲ್ ಶಾಲೆಯ ಮುಖ್ಯಸ್ಥರು ಮನವಿ ಮಾಡಿದ್ದಾರೆ.

ಸ್ವಚ್ಛತೆಗೆ ಮನವಿ ಮಾಡಿ ಸಾಕಾಗಿದೆ: ಮುಖ್ಯ ಶಿಕ್ಷಕರು ಶಾಲೆ ಆರಂಭವಾದ ದಿನದಿಂದಲೂ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರು ಸುರಿಯುತ್ತಿರಿರುವ ತ್ಯಾಜ್ಯ ಶಾಲೆಯ ಆವರಣಕ್ಕೆ ಗಾಳಿ ಬೀಸಿದಾಗೆಲ್ಲ ಹಾರಿಬರುತ್ತಿದೆ. ತ್ಯಾಜ್ಯ ನಿರ್ವಹಣೆ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದಾಗ ಈ ರಸ್ತೆ ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ, ಇದು ರೈಲ್ವೆ ಇಲಾಖೆಯ ಆಸ್ತಿಯಾಗಿರುತ್ತದೆ, ನಾವು ಇಲ್ಲಿ ಸ್ವಚ್ಛತೆ ಮಾಡುವುದಿಲ್ಲ ಎಂದಿದ್ದರು. ರೈಲ್ವೆ ಅವರಿಗೆ ತಿಳಿಸಿದಾಗ ನಾವು ಈ ಬಗ್ಗೆ ದೆಹಲಿಗೆ ಪತ್ರ ಬರೆದು ಕೇಳಬೇಕು ಎನ್ನುತ್ತಾರೆ. ಒಟ್ಟಾರೆ ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಪೋಷಕರು ನಿತ್ಯ ಕೊಳಕು ರಸ್ತೆಯಲೇ ಓಡಾಡುವಂತಾಗಿದೆ. ರೈಲ್ವೆ ಇಲಾಖೆಯವರು ಈ ಬಗ್ಗೆ ಗಮನಿಸಿ ಸ್ವಚ್ಛತೆಗೆ ಕ್ರಮಕೈಗೊಂಡರೆ ಮಕ್ಕಳು ಹಾಗೂ ಶಿಕ್ಷಕರಿಗೆ ಒಳಿತಾಗುತ್ತದೆ.

– ಆನಿ ಜೋಸೆಫ್,ಮುಖ್ಯ ಶಿಕ್ಷಕರು, ಕ್ಯಾಪಿಟಲ್ ಶಾಲೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

14 mins ago

5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…

49 mins ago

ಸಾರ್ವಜನಿಕರ ಅಹವಾಲು ಸ್ವೀಕಾರ : ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ ಸಚಿವ ಮಹದೇವಪ್ಪ

ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…

54 mins ago

ಜಿಲ್ಲಾಸ್ಪತ್ರೆಗಳ ಮೇಲ್ದರ್ಜೆಗೆ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…

1 hour ago

India-New Zealand | ಮುಕ್ತ ವ್ಯಾಪಾರ ಒಪ್ಪಂದ : ಭಾರಿ ಪ್ರಮಾಣದ ಸುಂಕ ಕಡಿತ

ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…

1 hour ago

ಪ್ರಾಚ್ಯವಿದ್ಯಾ ಸಂಶೋಧನಾಲಯ ಉತ್ಕೃಷ್ಠ ಜ್ಞಾನ ಗ್ರಂಥಗಳನ್ನು ಪ್ರಕಟಿಸಲಿ : ಭಾರತೀ ಸ್ವಾಮೀಜಿ ಆಶಯ

ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…

1 hour ago