Andolana originals

ಸರಗೂರು ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ

ದಾಸೇಗೌಡ ಸರಗೂರು

ಅಸಮರ್ಪಕ ವ್ಯವಸ್ಥೆಯಿಂದ ನೀರು ಪೋಲು;ನಿರ್ವಹಣೆಯಿಲ್ಲದ ಶೌಚಾಲಯ, ಕಸದ ರಾಶಿ ತಾಂಡವ

ಸರಗೂರು: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಹೋಟೆಲ್ಗಳಿಗೆ ನೀರು ಪೂರೈಕೆ ಮಾಡುವ ವ್ಯವಸ್ಥೆಯಲ್ಲಿ ಎರಡು ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ ಆಗಿರುವ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರತಿ ದಿನ ಸಾವಿರಾರು ಲೀಟರ್ ನೀರು ಪೋಲಾಗುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀರು ಹರಿಯುತ್ತಾ ಪಾಚಿ ಕಟ್ಟಿರುವುದರಿಂದ ಎಷ್ಟೋ ಬಾರಿ ಪ್ರಯಾಣಿಕರು ಓಡಾಡುವಾಗ ಜಾರಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ. ಹತ್ತು ವರ್ಷಗಳ ಹಳೆಯದಾದ ಶೌಚಾಲಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ದುರ್ವಾಸನೆ ಬರುತ್ತಿದೆ. ಕೆಲವು ಶೌಚಾಲಯದ ಬಾಗಿಲುಗಳಿಗೆ ಯಾವುದೇ ಚಿಲಕಗಳು ಇಲ್ಲ. ಮುಖ್ಯ ರಸ್ತೆಯ ಎರಡು ಭಾಗಗಳಲ್ಲೂ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ನೀರು ಬಸ್ ನಿಲ್ದಾಣದ ಒಳಗೆ ಹರಿದುಬರುತ್ತಿದೆ.

ಇಲ್ಲಿನ ಪ್ಲಾಟ್‌ಫಾರಂಗಳಂತೂ ಗುಂಡಿಗಳಿಂದ ಕೂಡಿದ್ದು, ಪ್ರಯಾಣಿಕರು ಬಸ್ ಹತ್ತಲು ಹೋಗುವಾಗ, ಇಳಿಯುವಾಗ ಗಾರೆ ಇಲ್ಲದೆ ರಾಡುಗಳು ಪ್ರಯಾಣಿಕರಿಗೆ ತಗುಲಿ ಗಾಯಗಳಾಗುತ್ತಿವೆ.

ಬಸ್ ನಿಲ್ದಾಣದ ನೀರು ಮುಖ್ಯ ಚರಂಡಿಗೆ ಸೇರಿದಾಗ ಮಾತ್ರ ಸಮಸ್ಯೆ ಬಗೆಹರಿಯುತ್ತದೆ ಎನ್ನುತ್ತಾರೆ ಪ್ರಯಾಣಿಕ ಲಕ್ಷ್ಮಣ್ ಅವರು. ಈ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಿರುವ ಕಾಂಪೌಂಡ್ ಪಕ್ಕದ ರಸ್ತೆಯ ಬದಿಯಲ್ಲಿ ಅಂಗಡಿ ನಡೆಸುತ್ತಿದ್ದು, ಕಸದ ರಾಶಿ, ಹೋಟೆಲ್‌ಗಳಿಂದ ಬರುವ ತ್ಯಾಜ್ಯದ ನೀರಿನಿಂದ ದುರ್ವಾಸನೆ ಉಂಟಾಗಿ ನಮ್ಮ ಅಂಗಡಿ ಒಳಗಡೆ ಕೂರಲು ಆಗುವುದಿಲ್ಲ ಎಂದು ಅಂಗಡಿ ಮಾಲೀಕರು ತಿಳಿಸುತ್ತಾರೆ.

” ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಸಮರ್ಪಕ ವ್ಯವಸ್ಥೆ ಇಲ್ಲದೆ ನೆಲದ ಮೇಲೆಯೇ ಕುಳಿತುಕೊಳ್ಳುತ್ತಾರೆ. ಕುಡಿಯುವ ನೀರಿನ ಫಿಲ್ಟರ್ ವ್ಯವಸ್ಥೆ ಇಲ್ಲ. ಇಲ್ಲಿನ ಟಿ ಸಿಕೊಠಡಿ ಮುಂಭಾಗ ಬಲ್ಬ್‌ಗಳೆಲ್ಲ ಕೆಟ್ಟು ಹೋಗಿದ್ದು ಅದನ್ನು ಸರಿಪಡಿಸಿಲ್ಲ. ಜನರೇಟರ್, ಸಿಸಿಟಿವಿ ವ್ಯವಸ್ಥೆ ಇಲ್ಲ.”

-ಚಿ.ಕು.ಗೋವಿಂದರಾಜು, ಪ್ರಯಾಣಿಕರು

” ಸದ್ಯದಲ್ಲೇ ಕೇಂದ್ರ ಕಚೇರಿಗೆ ಸಮಸ್ಯೆ ಕುರಿತು ಮಾಹಿತಿ ಕಳುಹಿಸುತ್ತೇವೆ. ಅಲ್ಲಿಂದ ಉತ್ತರ ಬಂದ ತಕ್ಷಣ ಕ್ರಮ ಕೈಗೊಳ್ಳುತ್ತೇವೆ.”

-ವೀರೇಶ್, ಸಾರಿಗೆ ನಿಯಂತ್ರಣಾಧಿಕಾರಿ

” ಬಸ್ ನಿಲ್ದಾಣದಲ್ಲಿನ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುತ್ತದೆ.”

-ತ್ಯಾಗರಾಜು, ಹೆಚ್.ಡಿ ಕೋಟೆ ಸಾರಿಗೆ ಘಟಕ ವ್ಯವಸ್ಥಾಪಕರು

 

 

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

10 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

10 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

11 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

11 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

12 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

15 hours ago