ಕೆ. ಬಿ. ರಮೇಶನಾಯಕ
ಮೈಸೂರು: ರಾಜ್ಯದ ಇತಿಹಾಸದಲ್ಲೇ ೧೬ನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆಗೆ ಪಾತ್ರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ತವರು ಜಿಲ್ಲೆಗೆ ಈ ಬಾರಿಯ ಆಯವ್ಯಯದಲ್ಲಿ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ.
ಆರೋಗ್ಯ, ಕ್ರೀಡೆ ಮತ್ತು ಪಾರಂಪರಿಕತೆಗೆ ಒತ್ತು ನೀಡುವ ಯೋಜನೆಗಳನ್ನು ಘೋಷಿಸುವ ಜತೆಗೆ ಸ್ವಕ್ಷೇತ್ರ ವರುಣ ವ್ಯಾಪ್ತಿಯ ತಗಡೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ೧೦೦ ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು ೧೦೦ ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಮತ್ತು ಮೈಸೂರು ವೈದ್ಯಕೀಯ ಕಾಲೇಜು ವ್ಯಾಪ್ತಿಯಲ್ಲಿ ೧೦೦ ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ ಕೇಂದ್ರಗಳನ್ನು ಆರಂಭಿಸುವ ಘೋಷಣೆ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಮಟ್ಟದ ಕೊಡುಗೆ ನೀಡಿದ್ದಾರೆ.
ತಮ್ಮ ರಾಜಕೀಯ ಗುರುಗಳಲ್ಲಿ ಒಬ್ಬರಾಗಿರುವ ಹಾಗೂ ರೈತ ನಾಯಕ ಪ್ರೊ ಎಂ. ಡಿ. ನಂಜುಂಡಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸು ವುದಾಗಿ ಘೋಷಣೆ ಮಾಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ ೨,೫೦೦ ಪ್ರಾಚೀನ ತಾಳೆಗರಿಯ ಹಸ್ತಪ್ರತಿಗಳ ಡಿಜಿಟಲೀಕರಣ ಯೋಜನೆಯನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಮೈಸೂರಿನ ಹೆಸರಾಂತ ರೆರ್ಪಟರಿ ಕರ್ನಾಟಕ ನಾಟಕ ರಂಗಾಯಣದ ಕಾರ್ಯ ಚಟುವಟಿಕೆಗಳಿಗೆ ಎರಡು ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ.
ರಾಜ್ಯದ ಸಂಸ್ಕ ತಿ, ನಾಗರಿಕತೆಯ ಉಗಮ, ವಿಕಾಸಗಳೂ ಸೇರಿದಂತೆ ಐತಿಹಾಸಿಕ, ಸಾಮಾಜಿಕ ಸಂಗತಿ ಗಳನ್ನು ಬಿಂಬಿಸುವ ರಾಜ್ಯ ಮಟ್ಟದ ವಸ್ತು ಸಂಗ್ರಹಾ ಲಯವನ್ನು ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗು ವುದು. ಯುವ ಸಬಲೀಕರಣ ಮತ್ತು ಕ್ರೀಡೆಯ ಬಹುವರ್ಷಗಳ ಬೇಡಿಕೆಯಾಗಿದ್ದ ಕುಸ್ತಿ, ವಾಲಿಬಾಲ್, ಖೋ ಖೋ ಅಕಾಡೆಮಿಗಳನ್ನು ಸ್ಥಾಪಿಸಲು ೨ ಕೋಟಿ ರೂ. ಮೀಸಲಿಡಲಾಗಿದೆ.
ಕಬಿನಿ ಮತ್ತು ಕೃಷ್ಣರಾಜಸಾಗರ ಜಲಾ ಶಯಗಳನ್ನು ಹೊಂದಿರುವ ಮೈಸೂರು ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಶುಚಿ-ರುಚಿ ಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್ ಮತ್ಸ್ಯ ದರ್ಶಿನಿಯನ್ನು ಪ್ರಾರಂಭಿಸುವುದು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ರಾಜ್ಯದ ಬುಡಕಟ್ಟು ಸಂಸ್ಕ ತಿಯನ್ನು ಪರಿಚಯಿಸಲು ಮೈಸೂರಿನಲ್ಲಿ ಇರುವ ಬುಡಕಟ್ಟು ಸಂಶೋಧನಾ ಕೇಂದ್ರದ ಆವರಣದಲ್ಲಿ ಬುಡಕಟ್ಟು ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲು ಉದ್ದೇಶಿಸಿರು ವುದರಿಂದ ಆದಿವಾಸಿಗಳ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ.
ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಯ ಭೂ ಸ್ವಾಽನಕ್ಕಾಗಿ ೩೧೯ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಇದಕ್ಕೆ ಅನುವಾಗುವಂತೆ ಯುಟಿಲಿಟಿ ಶಿಫ್ಟಿಂಗ್‌ಗೆ ಅಗತ್ಯ ಕ್ರಮವಹಿಸಲಾಗುವುದೆಂದು ಹೇಳಿರುವುದರಿಂದ ಕೈಗಾರಿಕೋದ್ಯಮ ವಲಯದಲ್ಲಿ ಸಂತಸ ಮೂಡಿಸಿದೆ. ಪೊಲೀಸ್ ಇಲಾಖೆಯ ಬಲವರ್ಧನೆಗಾಗಿ- ಮೈಸೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳನ್ನು ಸ್ಥಾಪಿಸಲಾಗುವುದು.
ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಬಾರ್ಡ್ ಸಹಯೋಗದಲ್ಲಿ ಸ್ಥಾಪಿಸಲು ಉದ್ಧೇಶಿಸಿದ್ದು,ಈಗ ಎಪಿಎಂಸಿ ಆವರಣದಲ್ಲಿ ನಡೆಯುತ್ತಿರುವ ತಾತ್ಕಾಲಿಕ ಮಾರುಕಟ್ಟೆಯನ್ನು ಮುಂದೆ ಸ್ಥಳಾಂತರಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವ ಕ್ಷೇತ್ರ ವರುಣ ವ್ಯಾಪ್ತಿಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು ೧೦೦ ಹಾಸಿಗೆಗಳ ಆಸ್ಪತೆಯನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಿರುವುದರಿಂದ ಕವಲಂದೆ, ಕಸಬಾ ಹೋಬಳಿಯ ಜನರಿಗೆ ತುಂಬಾ ಅನುಕೂಲವಾಗಲಿದೆ. ಮೈಸೂರಿನಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು ಎಂದು ಘೋಷಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ ೭೮ ಬುಡಕಟ್ಟು ವಸತಿ ಶಾಲೆಗಳಲ್ಲಿ ೨೦೨೫-೨೬ನೇ ಸಾಲಿನಿಂದ ೭ನೇ ತರಗತಿಯನ್ನು ಪ್ರಾರಂಭಿಸಲಾಗುವುದು. ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಐದು ವಸತಿ ಶಾಲೆಗಳನ್ನು ೧೨ನೇ ತರಗತಿಯವರೆಗೆ ಮೇಲ್ದರ್ಜೆಗೇ ರಿಸುವ ಕೊಡುಗೆ ನೀಡಲಾಗಿದೆ. ಮೈಸೂರಿನ ವರುಣಾದಲ್ಲಿನ ಜಿಟಿಟಿಸಿ ಬಹು ಕೌಶಲ ಅಭಿವೃದ್ಧಿ ಕೇಂದ್ರಕ್ಕೆ ನಬಾರ್ಡ್ ಸಹಯೋಗದಲ್ಲಿ ೬೦ ಕೋಟಿ ರೂ. ಅನುದಾನ ಒದಗಿಸಿ ಪ್ರಸಕ್ತ ವರ್ಷದಲ್ಲಿ ಸದರಿ ಕೇಂದ್ರಗಳನ್ನು ಕಾರ್ಯಾ ರಂಭ ಮಾಡಲಾಗುವುದು.
ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿರುವ ಕಾರ್ಯಕ್ರಮಗಳಾದ ಮೈಸೂರಿನ ನವೋದ್ಯಮ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸ ಲಾಗುವುದು. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ವಲಯದಲ್ಲಿ ಕರ್ನಾಟಕದ ನಾಯಕತ್ವವನ್ನು ಮತ್ತಷ್ಟು ಬಲಪಡಿಸಲು, ಕಿಯೋನಿಕ್ಸ್ ಮೂಲಕ ಗ್ಲೋಬಲ್ ಇನ್ನೊವೇಷನ್ ಡಿಸ್ಟ್ರಿಕ್ಟ್ ಅನ್ನು ಮೈಸೂರಿನಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಎಲೆಕ್ಟ್ರಾನಿಕ್ ಉತ್ಪಾದನೆಗೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸಲು ಮೈಸೂರಿನ ೧೫೦ ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಪ್ರಿಂಟೆಡ್‌ಸರ್ಕ್ಯೂಟ್ ಬೋರ್ಡ್‌ಪಾರ್ಕ್‌ಅನ್ನು (ಪಿಸಿಬಿ)ಅಭಿವೃದ್ಧಿ ಪಡಿಸಲಾ ಗುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಅಂತಾ ರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು ೫೦೦ ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು ೧೫೦ ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…