6 ತಿಂಗಳಲ್ಲೇ 24 ಪ್ರಕರಣ ತಂದಿರುವ ಆತಂಕ
• ಪ್ರಸಾದ್ ಲಕ್ಕೂರು
ಚಾಮರಾಜನಗರ: ‘ಆಡೋ ಕಂದನಿಗೆ ಕಾಡೋ ಕಂದ.. ಇದು ಹೆಣ್ಣುಮಕ್ಕಳನ್ನು ಶಾಲೆಗೆ ಕರೆ ನಿಯಂತ್ರಣಕ್ಕೆ ಅರಿವು ಕಾರ್ಯಕ್ರಮ ತರಲು ಕೆಲ ವರ್ಷಗಳ ಹಿಂದೆ ರಾಜ್ಯ ಸರ್ಕಾರದ ಜಾಗೃತಿ ಕಾರ್ಯಕ್ರಮದ ಘೋಷಣಾ ವಾಕ್ಯವಾಗಿತ್ತು. ಆದರೆ, ಈಗಲೂ ಕೆಲವೆಡೆ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸದೆ ಬಾಲ್ಯದಲ್ಲೇ ವಿವಾಹ ಮಾಡುವ ಪ್ರಕರಣಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಅದರಿಂದ ಬಾಲ ಗರ್ಭಿಣಿಯರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ ಎಂಬ ಆತಂಕ ಎದುರಾಗಿದೆ.
ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, ಬಾಲ್ಯ ವಿವಾಹ ಇನ್ನು ಜೀವಂತವಾಗಿದೆ ಎಂಬ ಅನುಮಾನ ಉಂಟಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕಳವಳ ವ್ಯಕ್ತವಾಗಿದೆ.
ಬಾಲ ಗರ್ಭಿಣಿ ಪ್ರಕರಣಗಳ ನಿಯಂತ್ರಣಕ್ಕೆ ಅರಿವು ಕಾರ್ಯಕ್ರಮ
ಬಾಲಕಿಯರು ಗರ್ಭಿಣಿ ಆಗುವುದನ್ನು ತಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಾಕಷ್ಟು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರದ ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆ, ಪೋಕ್ಸ್ ಕಾಯ್ದೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕವೂ ತಿಳಿವಳಿಕೆ ನೀಡಲಾಗುತ್ತಿದೆ.
ಮಂಜುನಾಥ್, ಉಪ ನಿರ್ದೇಶಕರು, ಮಹಿಳಾ
ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ
ಆರೋಗ್ಯ ಇಲಾಖೆಯಲ್ಲಿ ದಾಖಲಾಗಿರುವ ಪ್ರಕರಣಗಳು
2023-24; 68 ಪ್ರಕರಣ
2024-25; 24 ಪ್ರಕರಣ
2024 ಏ.1 ರಿಂದ ಸೆ.30 ರವರೆಗೆ
ಮಕ್ಕಳ ರಕ್ಷಣಾ ಘಟಕದಲ್ಲಿ ದಾಖಲಾದ ಪ್ರಕರಣಗಳು
2020-21; 1 ಪ್ರಕರಣ
2022-23; 5 ಪ್ರಕರಣ
2023-24; 1 ಪ್ರಕರಣ
2024-24; 19 ಪ್ರಕರಣ
2024 ಏ.1 ರಿಂದ ಸೆ.25 ರವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (2012) ಜಾರಿಗೊಂಡ ನಂತರ ಅಪ್ರಾಪ್ತ ಗರ್ಭಿಣಿ ಪ್ರಕರಣಗಳು ಬಯಲಾಗುತ್ತಿವೆ.
ಇದಲ್ಲದೆ ಕಾನೂನು ಮತ್ತು ಆರೋಗ್ಯದ ಬಗೆಗಿನ ಅರಿವು ಕಡಿಮೆ ಇರುವ ಕಾರಣ ಬಾಲ್ಯ ವಿವಾಹಗಳು ನಿಯಂತ್ರಣಕ್ಕೆ ಬಂದಿಲ್ಲ. ಅದರಿಂದ ಬಾಲ (ಅಪ್ರಾಪ್ತ) ಗರ್ಭಿಣಿಯರ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ಹೇಳಲಾಗಿದೆ. ಹೆಣ್ಣು ಮಕ್ಕಳು ಋತುಮತಿಯಾದ ಬಳಿಕ ಮದುವೆ ಮಾಡಿಬಿಡಬೇಕು ಎಂಬ ಹೆತ್ತವರ ನಂಬಿಕೆಯು ಬಾಲ್ಯ ವಿವಾಹಗಳು ಹೆಚ್ಚಾಗಲು ಕಾರಣ ಎಂಬ ಆರೋಪ ಇದೆ. ಇದಲ್ಲದೆ ಆಸೆ, ಆಮಿಷಗಳಿಗೆ ಒಳಗಾಗಿ ಅಪ್ರಾಪ್ತ ಹೆಣ್ಣು ಮಕ್ಕಳು ಲೈಂಗಿಕ ಶೋಷಣೆಗೆ ಒಳಗಾಗುವ ಪ್ರಕರಣಗಳಿಂದಲೂ ಬಾಲ ಗರ್ಭಿಣಿಯರ ಪ್ರಮಾಣ ಏರುತ್ತಿದೆ ಎಂದು ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಬೆಟ್ಟಗುಡ್ಡ ಪ್ರದೇಶಗಳಲ್ಲಿ ವಾಸ ಇರುವ, ಸಾಮಾಜಿಕವಾಗಿ ನಿರ್ಲಕ್ಷಿಸಲ್ಪಟ್ಟ ಸಮುದಾಯಗಳಲ್ಲೇ 18 ವಯಸ್ಸು ತುಂಬಿರದ ಹೆಣ್ಣುಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಗರ್ಭಿಣಿಯರಾಗುತ್ತಿರುವುದು ಕಂಡುಬಂದಿದೆ. ಇತರೆ ಸಮುದಾಯಗಳಲ್ಲಿ ಈ ಪ್ರಮಾಣ ಕಡಿಮೆ ಇದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಳೆದ ವರ್ಷದಿಂದ ಬಾಲ ಗರ್ಭಿಣಿಯರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಚಿದಂಬರ ತಿಳಿಸಿದ್ದಾರೆ.
ಕಿಶೋರಿಯಾಗಿದ್ದಾಗಲೇ ಗರ್ಭವತಿಯಾದವರನ್ನು ಕಾನೂನಿನ ಭಯದಿಂದ ಪೋಷಕರು ತಿರಸ್ಕರಿಸುತ್ತಿದ್ದಾರೆ. ಹಾಗೇ ತಿರಸ್ಕೃತರಾದವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾ ಘಟಕದ ವಶಕ್ಕೆ ನೀಡಲಾಗುತ್ತದೆ. ಇಂತಹ ಪ್ರಕರಣಗಳಲ್ಲಿಯೂ ಏರಿಕೆ ಕಂಡಿದೆ ಎಂದು ಘಟಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೋಕ್ಸೋದಿಂದ ಪ್ರಕರಣ ಬಯಲು
ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (2012) ಯು ಜಾರಿಗೊಂಡ ನಂತರ ಅಪ್ರಾಪ್ತ ಗರ್ಭಿಣಿ ಪ್ರಕರಣಗಳು ಬಯಲಾಗುತ್ತಿವೆ. ಬಾಲ್ಯ ವಿವಾಹವಾದ ಹೆಣ್ಣು ಮಕ್ಕಳು ಗರ್ಭಿಣಿಯರಾಗಿ ಆಸ್ಪತ್ರೆಗಳಿಗೆ ಹೆರಿಗೆಗೆ ದಾಖಲಾಗುತ್ತಾರೆ. ಆ ವೇಳೆಯಲ್ಲಿ ದಾಖಲೆಗಳನ್ನು ಪರಿಶೀಲಿಸಿದಾಗ ಅಪ್ರಾಪ್ತರು ಎಂಬುದು ಗೊತ್ತಾದರೆ, ಅದನ್ನು ವೈದ್ಯಾಧಿಕಾರಿಗಳು ಪೊಲೀಸ್ ಇಲಾಖೆಯ ಗಮನಕ್ಕೆ ತಂದು ಪ್ರಕರಣ ದಾಖಲಿಸುತ್ತಾರೆ. ಇನ್ನು ಲೈಂಗಿಕ ಶೋಷಣೆಗೆ ಒಳಗಾದ, ಆಸೆ, ಆಮಿಷಕ್ಕೆ ಒಳಗಾಗಿ ಗರ್ಭಿಣಿಯಾದ ಬಾಲಕಿಯರ ಬಗ್ಗೆಯೂ ಪ್ರಕರಣಗಳು ದಾಖಲಾಗುತ್ತಿವೆ.
ಜಾಗೃತಿ ಅಗತ್ಯ:
ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳಲ್ಲಿ ಬಾಲ್ಯ ವಿವಾಹ, ಅನಕ್ಷರತೆ, ಸಂಪ್ರದಾಯಗಳ ಕಾರಣಗಳಿಂದ ಅಪ್ರಾಪ್ತ ವಯಸ್ಸಿನಲ್ಲೇ ಹೆಣ್ಣು ಮಕ್ಕಳು ಗರ್ಭಿಣಿಯರಾಗುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಮತ್ತು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಗಳು ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ನಡೆಯುವ ಸಮುದಾಯಗಳಿಗೆ ಬಾಲ ಗರ್ಭಿಣಿಯರಾದರೆ ಎದುರಾಗುವ ಸಮಸ್ಯೆಗಳ ಕುರಿತು ಅರಿವು ಮೂಡಿಸಬೇಕು.
ಡಾ.ಸಿ.ಮಾದೇಗೌಡ, ಆದಿವಾಸಿ ಮುಖಂಡರು, ಬಿಳಿಗಿರಿರಂಗನ ಬೆಟ್ಟ.
ಅಂಗನವಾಡಿ ಕಾರ್ಯಕರ್ತೆಯರಿಂದ ಅರಿವು:
ಶಾಲಾ ಕಾಲೇಜು, ಹೆಣ್ಣುಮಕ್ಕಳ ಹಾಸ್ಟೆಲ್‌ಗಳಲ್ಲಿ, ಗ್ರಾಮೀಣ ಹಾಗೂ ನಗರ ಪ್ರದೇಶಗಳು, ಗಿರಿಜನರ ಪೋಡುಗಳು, ಲಂಬಾಣಿ ತಾಂಡಾಗಳಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪೋಕ್ಸ್ ಕಾಯ್ದೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಅಲ್ಲದೆ, ಬಾಲ ಗರ್ಭಿಣಿ ಆಗುವುದರಿಂದ ಎದುರಾಗಬಹುದಾದ ಆರೋಗ್ಯ ಸಮಸ್ಯೆಗಳನ್ನು ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ಡಾ.ಎಸ್.ಚಿದಂಬರ, ಡಿಎಚ್‌ಒ
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…