Andolana originals

ಸುರಕ್ಷತೆಯ ಗ್ಯಾರಂಟಿ ಇಲ್ಲದ ಶಾಲಾ ವಾಹನಗಳಲ್ಲಿ ಮಕ್ಕಳ ಪ್ರಯಾಣ!

ಮಹದೇಶ್ ಎಂ.ಗೌಡ

ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ

ಹನೂರು: ಗುಜರಿಗೆ ಸೇರಬೇಕಾದ, ಸುರಕ್ಷತೆಗೆ ಗ್ಯಾರಂಟಿ ಇಲ್ಲದ ಕನಿಷ್ಠ ವಿಮಾ ಸೌಲಭ್ಯವೂ ಹೊಂದದ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಪಟ್ಟಣದ ವಿವಿಧ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳು ವಿಮೆ ಹಾಗೂ ಮಾಲಿನ್ಯ ಪರೀಕ್ಷೆ, ವಾಹನದ ಕ್ಷಮತಾ ಪ್ರಮಾಣಪತ್ರ ಅವಧಿ ಮುಕ್ತಾಯವಾಗಿದ್ದರೂ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಮೂಲಕ ಮಕ್ಕಳ ಪ್ರಾಣದ ಜೊತೆ ಚೆಲ್ಲಾಟ ಆಡುಡುತ್ತಿದ್ದರೆ, ಸಂಬಂಧಪಟ್ಟ ಸಾರಿಗೆ ಇಲಾಖೆ ಜಾಣಕುರುಡು ಪ್ರದರ್ಶನ ಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪ್ರತಿಷ್ಠಿತ ಸಂಸ್ಥೆಗಳಿಂದಲೇ ನಿರ್ಲಕ್ಷ್ಯ: ಪಟ್ಟಣ ವ್ಯಾಪ್ತಿಯ ಶ್ರೀ ವಿವೇಕಾನಂದ, ಗೌತಮ್ ಶಾಲೆ, ಕ್ರಿಸ್ತರಾಜ, ಹೋಲಿ ಎಂಜಲೀಸ್, ದರ್ಶ ಸ್ಕೂಲ್ ಆಫ್ ಎಕ್ಸಲೆನ್ಸ್, ರಿಪಬ್ಲಿಕ್ ಇಂಟರ್ ನ್ಯಾಷನಲ್ ಶಾಲೆಗಳಿಗೆ ಹನೂರು ತಾಲ್ಲೂಕಿನ ಶಾಗ್ಯ, ಬಂಡಳ್ಳಿ, ಮಣಗಳ್ಳಿ, ಹಲಗಾಪುರ, ಚಂಗವಾಡಿ, ನಾಗನತ್ತ, ಭೈರನತ್ತ, ತೋಮಿಯಾರ್ ಪಾಳ್ಯ, ಪುಷ್ಪಾಪುರ, ಮರಿಯಮಂಗಲ, ಎಲ್ಲೇಮಾಳ, ಇನ್ನಿತರ ಗ್ರಾಮಗಳಿಂದ ವಿದ್ಯಾರ್ಥಿಗಳು ಶಾಲಾ ವಾಹನದ ಮೂಲಕ ಆಗಮಿಸುತ್ತಿದ್ದಾರೆ. ಆದರೆ ಬಹುತೇಕ ವಾಹನಗಳಿಗೆ ವಿಮೆ ಹಾಗೂ ವಾಹನದ ಕ್ಷಮತಾ ಪ್ರಮಾಣ ಪತ್ರ ಅವಧಿ ಮುಗಿದಿದ್ದರೂ ಶಾಲಾ ಮಕ್ಕಳನ್ನು ಕರೆತರುತ್ತಿದ್ದಾರೆ. ಯಾವುದಾದರೂ ಅನಾಹುತ ಸಂಭವಿಸಿದರೆ ಇದಕ್ಕೆ ಯಾರು ಹೊಣೆ ಎಂದು ಸ್ಥಳೀಯ ನಾಗರಿಕರು ಪ್ರಶ್ನಿಸುತ್ತಿದ್ದಾರೆ.

ಅಲ್ಲದೆ, ಖಾಸಗಿ ಬಸ್, ಟೆಂಪೋ ಹಾಗೂ ಆಟೋಗಳಲ್ಲಿ ಕುರಿ ತುಂಬಿಕೊಂಡು ಹೋಗುವಂತೆ ಶಾಲಾ ವಿದ್ಯಾರ್ಥಿಗಳನ್ನು ವಾಹನಗಳಲ್ಲಿ ಕರೆದೊಯ್ಯುತ್ತಿದ್ದರೂ ಸಾರಿಗೆ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಬಸ್ ಕೊರತೆ: ತಾಲ್ಲೂಕು ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಬೆಳಿಗ್ಗೆ, ಸಂಜೆ ವೇಳೆ ವಿದ್ಯಾರ್ಥಿಗಳು ಆಟೋ, ಜೀಪು, ಖಾಸಗಿ ಬಸ್ಸು ಮುಂತಾದ ವಾಹನಗಳಿಗೆ ಜೋತುಬಿದ್ದು ಪ್ರಯಾಣಿಸುತ್ತಿದ್ದಾರೆ. ಮಣಗಳ್ಳಿ, ಬಂಡಳ್ಳಿ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಬಸ್ ಟಾಪಿನ ಮೇಲೆ ಕುಳಿತು ಪ್ರಯಾಣಿಸುವ ದೃಶ್ಯ ನಿತ್ಯವೂ ಕಂಡುಬರುತ್ತದೆ.

ಗ್ರಾಮಾಂತರ ಪ್ರದೇಶದ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿರುವುದು, ಅಗತ್ಯತೆಗಿಂತ ಹೆಚ್ಚು ವಿದ್ಯಾರ್ಥಿಗಳು ಖಾಸಗಿ ವಾಹನದಲ್ಲಿ ಪ್ರಯಾಣಿಸುತ್ತಿರುವುದು, ಅನೇಕ ಶಾಲೆಗಳು ದುರಸ್ತಿಗೆ ಬಂದಿರುವ ವಾಹನಗಳನ್ನೇ ಬಳಸಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇನ್ನಾದರೂ, ಸುಸ್ಥಿತಿಯಲ್ಲಿರುವ ಶಾಲಾ ವಾಹನಗಳಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

” ಹನೂರು ಪಟ್ಟಣದ ಹೊರವಲಯದ ರಿಪಬ್ಲಿಕ್ ಇಂಟರ್‌ನ್ಯಾಷನಲ್ ವಸತಿ ಶಾಲೆಗೆ ಸೇರಿದ ಟಿಟಿ ವಾಹನದ ವಿಮೆ ಅವಧಿ ಪೂರ್ಣಗೊಂಡು ಎರಡು ವರ್ಷಗಳಾಗಿದೆ. ಇದೇ ವಾಹನ ಶುಕ್ರವಾರ ಸಂಜೆ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರನ ಕಾಲು ಮುರಿದಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ಇದೇ ವೇಳೆ ದ್ವಿಚಕ್ರ ವಾಹನ ಸವಾರ ಶಾಲಾ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಚರಂಡಿಗೆ ಬಿದ್ದು ಗಾಯಗೊಂಡಿದ್ದಾನೆ. ವಾಹನದಲ್ಲಿದ್ದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಚಿನ ಸಂಖ್ಯೆಯಲ್ಲಿ ಗಾಯಗೊಂಡಿದ್ದರೆ ಯಾರು ಹೊಣೆ ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕಿದೆ.”

” ರಾಜ್ಯದಲ್ಲಿ ಎರಡು ಶಾಲಾ ವಾಹನಗಳು ಅಪಘಾತವಾದ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಡಿಪಿಐ, ಕ್ಷೇತ್ರ ಶಿಕ್ಷಣಾಧಿಕಾರಿ, ಸ್ಥಳೀಯ ಇನ್‌ಸ್ಪೆಕ್ಟರ್‌ಗಳಿಗೆ ಶಾಲಾ ವಾಹನಗಳ ಸುರಕ್ಷತೆ ಹಾಗೂ ವಿಮೆ, ಸಮರ್ಪಕ ದಾಖಲಾತಿಗಳ ಪರಿಶೀಲನೆ ನಡೆಸುವಂತೆ ಸೂಚನೆ ನೀಡಲಾಗಿದೆ. ನಾವು ಸಹ ಭೇಟಿ ನೀಡಿ ವಾಹನಗಳನ್ನು ತಪಾಸಣೆ ನಡೆಸಲಿದ್ದೇವೆ.”

-ಗಾಯತ್ರಿ, ಆರ್‌ಟಿಒ, ಚಾಮರಾಜನಗರ

” ಹನೂರು ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿರುವ ಶಾಲೆಗಳಿಗೆ ಖಾಸಗಿ ವಾಹನ ಚಾಲಕರು ಹಾಗೂ ಆಟೋ ಮಾಲೀಕರು ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಕುರಿಗಳಂತೆ ತುಂಬಿಕೊಂಡು ಹೋಗುತ್ತಿದ್ದಾರೆ. ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿಲ್ಲ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು.”

-ಪ್ರದೀಪ್, ಹನೂರು ಪಟ್ಟಣದ ನಿವಾಸಿ

 

 

 

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

13 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

16 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

16 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

16 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

16 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

16 hours ago