Andolana originals

ನಾಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿದ ಸ್ವಚ್ಛ ಮನಸ್ಸುಗಳು

ಮಂಡ್ಯ:ನಗರದ ವಿವಿಧ ಬಡಾವಣೆಗಳನ್ನು ಹಾದು ಬೇಲೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ೮ನೇ ವಿತರಣಾ ನಾಲೆಯ ದುಸ್ಥಿತಿ ಬಗ್ಗೆ ‘ಆಂದೋಲನ’ ಪತ್ರಿಕೆಯಲ್ಲಿ ಪ್ರಕಟಗೊಂಡ ಸಚಿತ್ರ ವರದಿಯಿಂದ ಎಚ್ಚೆತ್ತ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ವರದಿಗೆ ಓಗೊಟ್ಟ ಬಡಾವಣೆಗಳ ಮುಖಂಡರು ತ್ಯಾಜ್ಯವನ್ನು ತೆರವುಗೊಳಿಸಿದ್ದಾರೆ.

ಹನಿ ಹನಿ ನೀರೂ ಅಮೂಲ್ಯ ಎನ್ನುವ ಸರ್ಕಾರದ ಜಾಗೃತಿ ಫಲಕಗಳನ್ನು ಅಪಹಾಸ್ಯ ಮಾಡುವಂತೆ…..ಸ್ವಚ್ಛ ಪರಿಸರವನ್ನು ಕಾಪಾಡಿ ಎಂಬ ಪ್ರಚಾರವನ್ನು ಅಣಕಿಸುವಂತೆ ಹಲವರು ತಮ್ಮ ಮನೆಯ ಪ್ಲಾಸ್ಟಿಕ್ ತ್ಯಾಜ್ಯವನ್ನು ರಸ್ತೆಯೋ, ಖಾಲಿ ನಿವೇಶನವೋ, ಚರಂಡಿಯೋ ಎಲ್ಲೆಂದರಲ್ಲಿ ಬಿಸಾಡುತ್ತಿರುವ ಬಗ್ಗೆ ‘ಆಂದೋಲನ’ ಪತ್ರಿಕೆ ವರದಿ ಮಾಡಿತ್ತು.

ಮಂಡ್ಯದ ಮರೀಗೌಡ ಬಡಾವಣೆ, ದ್ವಾರಕಾನಗರ,ಅನ್ನಪೂರ್ಣೇಶ್ವರಿ ನಗರ, ಶ್ರೀರಾಮನಗರದ ಮೂಲಕ ಹಾದು ಬೇಲೂರು ಗ್ರಾಪಂ ವ್ಯಾಪ್ತಿಯಲ್ಲಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ೮ನೇ ವಿತರಣಾ ನಾಲೆ ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಉಸಿರು ಕಟ್ಟಿ ಸಾಯುತ್ತಿರುವಂತೆ ಭಾಸವಾಗುತ್ತಿದೆ.

ಸುಮಾರು ೧೦ ಕ್ಯೂಸೆಕ್ಸ್ ಸಾಮರ್ಥ್ಯದ ಈ ನಾಲೆ ಸುಮಾರು ೬೦ ಎಕರೆ ಪ್ರದೇಶಕ್ಕೆ ನೀರುಣಿಸುತ್ತದೆ. ನೀರು ನಿಂತ ಬಳಿಕ ಅಕ್ಷರಶಃ ದೊಡ್ಡ ಮೋರಿಯಂತೆ ಕಾಣುವ ಈ ನಾಲೆ ಇಲ್ಲಿನ ನಿವಾಸಿಗಳಿಗೆ ಕಸ ಎಸೆಯುವ ತೊಟ್ಟಿಯಂತೆ ಭಾಸವಾದಂತಿದೆ. ನಾಲೆ ಉದ್ದಕ್ಕೂ ಮರುಬಳಕೆಯಾಗುವ ಪ್ಲಾಸ್ಟಿಕ್, ಏಕಬಳಕೆಯ ಪ್ಲಾಸ್ಟಿಕ್ ಕವರ್‌ಗಳೂ ಸೇರಿದಂತೆ ಅನೇಕ ತ್ಯಾಜ್ಯಗಳು ಯಥೇಚ್ಛವಾಗಿ  ಸಂಗ್ರಹವಾಗುತ್ತಿರುವ ಕುರಿತು ಸಚಿತ್ರ ವರದಿ ಪ್ರಕಟವಾಗಿತ್ತು.

ಈ ವರದಿಯಿಂದ ಎಚ್ಚೆತ್ತುಕೊಂಡ ಬೇಲೂರು ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಸ್ಥಳೀಯ ಬಡಾವಣೆಗಳ ಮುಖಂಡರು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಿ, ನಾಲೆಯಲ್ಲಿ ನೀರು ಸ್ವಚ್ಛತೆಯಿಂದ ಹರಿಯುವಂತೆ ಶ್ರಮ ವಹಿಸಿದ ಪರಿಣಾಮ ಇಂದು ಈ ಬಡಾವಣೆಗಳ ಉದ್ದಕ್ಕೂ ಸ್ವಚ್ಛವಾಗಿ,ಸರಾಗವಾಗಿ ನೀರು ಹರಿಯುತ್ತಿದೆ. ಮಾತ್ರವಲ್ಲ, ಪ್ಲಾಸ್ಟಿಕ್ ತ್ಯಾಜ್ಯಗಳ ರಾಶಿಗಳನ್ನೂ ಅಲ್ಲಿಂದ ತೆರವುಗೊಳಿಸಿ, ಪೊಲೀಸರಿಂದ ಎಚ್ಚರಿಕೆಯ ಫಲಕಗಳನ್ನೂ ಅಳವಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

9 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

9 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

9 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

9 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

13 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

13 hours ago