Andolana originals

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ

ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಪ್ರಸ್ತುತ ೩೧ ಘಟಕಗಳು ಚಾಲನೆಯಲ್ಲಿದ್ದು, ೧೬ ಘಟಕಗಳು ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ದೊರೆಯದೇ -ರೈಡ್‌ಯುಕ್ತ ನೀರನ್ನೇ ಕುಡಿಯುವುದು ಅನಿವಾರ್ಯವಾಗಿದೆ.

ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ : ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಮೂರು, ನಾಲ್ಕು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಮಾರ್ಟಳ್ಳಿ ಭಾಗದಲ್ಲಿ ಸಾವಿರ ಅಡಿ ಕೊಳವೆಬಾವಿ ಕೊರೆದರೂ ಶುದ್ಧ ನೀರು ಸಿಗದೇ ಇರುವುದರಿಂದ ಜನರು ಪ್ಲೋರೈಡ್ ಮಿಶ್ರಿತ ನೀರನ್ನೇ ಬಳಸುವುದು ಅನಿವಾರ್ಯವಾಗಿದೆ. ಅಂತೋಣಿಯಾರ್ ಕೋವಿಲ್ ಗ್ರಾಮದಲ್ಲಿನ ಕೊಳವೆ ಬಾವಿ ನೀರು ಕುಡಿಯಲು ಯೋಗ್ಯವಲ್ಲ ಎಂದು ಅಧಿಕಾರಿಗಳು ವರದಿ ನೀಡಿದ್ದರೂ ಸಂಬಂಧಪಟ್ಟವರು ಶುದ್ಧ ನೀರಿನ ಘಟಕವನ್ನು ಆರಂಭಿಸದೇ ಇರುವುದರಿಂದ ಗ್ರಾಮಸ್ಥರು ವಿಧಿಯಿಲ್ಲದೇ ಅದೇ ನೀರನ್ನೇ ಬಳಸುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ದುರಸ್ತಿಯಾಗದ ನೀರಿನ ಘಟಕಗಳು:

ಹನೂರು ತಾಲ್ಲೂಕಿನ ಅಜ್ಜೀಪುರ, ಚಿಕ್ಕಮಾಲಾಪುರ, ಮಹಾಲಿಂಗನ ಕಟ್ಟೆ, ಗೆಜ್ಜಲನತ್ತ, ಲೊಕ್ಕನಹಳ್ಳಿ, ಬಸಪ್ಪನ ದೊಡ್ಡಿ, ಗಂಗನ ದೊಡ್ಡಿ, ಪುದುನಗರ, ಬಸವನಗುಡಿ, ಉದ್ದಟ್ಟಿ ಹಾವಿನಮೂಲೆ, ರಾಮೇಗೌಡನಹಳ್ಳಿ ಗೊಲ್ಲರದಿಂಬ, ಮೇಟುತೆರು ಕೂಡ್ಲೂರು, ಬೈರನತ್ತ ಗ್ರಾಮಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಹಾಳಾಗಿ ವರ್ಷಗಳೇ ಕಳೆದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ದುರಸ್ತಿಗೆ ಕ್ರಮ ವಹಿಸದೇ ಇರುವುದರಿಂದ ಶುದ್ಧ ಕುಡಿಯವ ನೀರಿನ ಘಟಕಗಳಲ್ಲಿನ ಯಂತ್ರಗಳು ತುಕ್ಕು ಹಿಡಿಯುತ್ತಿವೆ.

೪ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಲ್ಲ: ಹನೂರು ತಾಲ್ಲೂಕಿನ ಮೀಣ್ಯಂ, ಬೈಲೂರು, ಎಲ್ಲೇಮಾಳ, ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಇಲ್ಲದೇ ಈ ಭಾಗದ ಜನರು ಕೊಳವೆಬಾವಿಗಳನ್ನೇ ಅವಲಂಬಿಸಿದ್ದು, -ರೈಡ್‌ಯುಕ್ತ ನೀರು ಕುಡಿದು ಅನಾರೋಗ್ಯಕ್ಕೀಡಾಗುತ್ತಿದ್ದಾರೆ.

ನೀರಿನ ಘಟಕಗಳಲ್ಲಿ ನಿರ್ವಹಣೆ ಕೊರತೆ: ತಾಲ್ಲೂಕಿನ ೨೧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೪೭ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು, ಇವುಗಳನ್ನು ಗ್ರಾಮ ಪಂಚಾಯಿತಿ, ಹಾಲು ಉತ್ಪಾದಕರ ಸಹಕಾರ ಸಂಘ, ಖಾಸಗಿ ಏಜೆನ್ಸಿ, ಪಿಆರ್‌ಇಡಿ, ಸಂಸ್ಥೆಯ ವತಿಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಸಕಾಲಕ್ಕೆ ನಿರ್ವಹಣೆ (ಸರ್ವಿಸಿಂಗ್) ಮಾಡದೇ ಇರುವುದರಿಂದ ನೀರಿನ ಘಟಕಗಳು ಹಾಳಾಗುತ್ತಿವೆ.

” ರಾಮಾಪುರ ಗ್ರಾಪಂ ವ್ಯಾಪ್ತಿಯ ಗೆಜ್ಜಲನತ್ತ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿ ಐದು ವರ್ಷಗಳೇ ಕಳೆದಿದ್ದು, ಸಂಬಂಧ ಪಟ್ಟವರು ದುರಸ್ತಿ ಮಾಡದೇ ಇರುವುದ ರಿಂದ ಜನರಿಗೆ ಶುದ್ಧ ಕುಡಿಯುವ ನೀರು ಸಿಗದೇ ಪರದಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ದುರಸ್ತಿ ಮಾಡಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು.”

 -ಅಶ್ವತ್ಥ್, ರಾಮಾಪುರ ನಿವಾಸಿ

ನಾಯಿಗಳ ಆವಾಸಸ್ಥಾನ: 

ಶುದ್ಧ ನೀರಿನ ಘಟಕಗಳು ಹಾಳಾಗಿರುವುದರಿಂದ ಹಾಗೂ ಬಾಗಿಲುಗಳು ಮುರಿದು ಹೋಗಿರುವುದರಿಂದ ನೀರಿನ ಘಟಕಗಳು ಬೀದಿ ನಾಯಿಗಳು ವಾಸ ಸ್ಥಾನವಾಗಿ ಮಾರ್ಪಾಟಾಗಿದೆ.

” ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಶುದ್ಧ ನೀರಿನ ಘಟಕಗಳು ಹಾಳಾಗಿದ್ದರೆ ಗ್ರಾಮೀಣ ನೀರು ಸರಬರಾಜು ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ನೀರಿನ ಘಟಕಗಳನ್ನು ದುರಸ್ತಿಪಡಿಸಲಾಗುವುದು.”

 -ಮೋನಾರೋತ್, ಜಿಲ್ಲಾ ಪಂಚಾಯಿತಿ ಸಿಇಒ

 

 

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

16 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

16 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

23 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

23 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

23 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

23 hours ago