ಎಚ್.ಎಸ್.ದಿನೇಶ್‌ಕುಮಾರ್
ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ ವರ್ತುಲ ರಸ್ತೆಯ ಸೌಂದರ್ಯ ಹೆಚ್ಚಿಸಲು ಮಹಾನಗರ ಪಾಲಿಕೆ ಆಡಳಿತ ಮುಂದಾಗಿದೆ.
ನಗರದಲ್ಲಿನ ಸುಮಾರು ೪೩ ಕಿಮೀ ಇರುವ ವರ್ತುಲ ರಸ್ತೆಯ ಎರಡೂ ಬದಿಗಳಲ್ಲಿ ಸುರಿದಿರುವ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹಾಗೂ ಅನುಪಯುಕ್ತ ವಸ್ತುಗಳ ತೆರವು ಸಂಬಂಧ ನಗರಪಾಲಿಕೆಯು ಇದೇ ಶನಿವಾರ ಹಾಗೂ ಭಾನುವಾರದಂದು ಬೃಹತ್ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿದೆ.
ನಗರದ ವರ್ತುಲ ರಸ್ತೆಯು ಹುಣಸೂರು, ಬೆಂಗಳೂರು, ಗುಂಡ್ಲುಪೇಟೆ, ಮಳವಳ್ಳಿ, ಎಚ್.ಡಿ.ಕೋಟೆಯ ಮುಖ್ಯ ರಸ್ತೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಇಲ್ಲಿ ಪ್ರತಿನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಹೀಗಾಗಿ ವರ್ತುಲ ರಸ್ತೆಯ ಸ್ವಚ್ಛತೆಗೆ ಆದ್ಯತೆ ನೀಡಬೇಕಾದುದು ಸ್ಥಳೀಯ ಸಂಸ್ಥೆಗಳ ಕರ್ತವ್ಯ, ವರ್ತುಲ ರಸ್ತೆಯ ಸುತ್ತಮುತ್ತಲಿನ ನಿವಾಸಿಗಳು ಕಸ, ಅನುಪಯುಕ್ತ ವಸ್ತುಗಳು ಹಾಗೂ ಕಟ್ಟಡ ತ್ಯಾಜ್ಯವನ್ನು ರಾತ್ರಿ ವೇಳೆ ಸುರಿದು ಹೋಗುವುದು ಸರ್ವೇ ಸಾಮಾನ್ಯ.
ಇದರಿಂದ ರಸ್ತೆಯ ಅಂದಗೆಡುವುದು ಮಾಮೂಲು. ಇದನ್ನು ಗಮನಿಸಿದ ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರು, ಇಡೀ ವರ್ತುಲ ರಸ್ತೆಯನ್ನು ಸ್ವಚ್ಛಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ.
” ಈ ಸಂಬಂಧ ಒಂದು ವಾರದಿಂದ ಸತತವಾಗಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಇದರ ಜೊತೆಗೆ ವರ್ತುಲ ರಸ್ತೆಗೆ ಹೊಂದಿಕೊಂಡಂತೆ ಇರುವ ಬೋಗಾದಿ, ಶ್ರೀರಾಂಪುರ, ಹೂಟಗಳ್ಳಿ, ಕಡಕೊಳ, ಸಿದ್ದಲಿಂಗಪುರ ಪಟ್ಟಣ ಪಂಚಾಯ್ತಿ, ನಗರಸಭೆ, ಗ್ರಾಪಂಗಳ ಸಹಯೋಗವನ್ನು ಪಡೆಯಲಾಗುತ್ತಿದೆ. ಅಲ್ಲಿನ ಸಿಬ್ಬಂದಿಗಳು, ಗುತ್ತಿಗೆದಾರರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.
೫೦ ಜೆಸಿಬಿ, ೩೦ ಲಾರಿ, ಟಿಪ್ಪರ್‌ಗಳು, ಸುಮಾರು ೫೦೦ ಮಂದಿ ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಸಂಗ್ರಹವಾಗುವ ತ್ಯಾಜ್ಯವನ್ನು ವಿದ್ಯಾರಣ್ಯಪುರಂನಲ್ಲಿರುವ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಹಾಗೂ ಕಟ್ಟಡ ತ್ಯಾಜ್ಯವನ್ನು ಸಾತಗಳ್ಳಿಯ ಘಟಕಕ್ಕೆ ಸುರಿಯುವ ವ್ಯವಸ್ಥೆ ಮಾಡಲಾಗಿದೆ. ಎರಡು ದಿನಗಳ ಈ ಸ್ವಚ್ಛತಾ ಅಭಿಯಾನದಲ್ಲಿ ಆಸಕ್ತರು ಭಾಗವಹಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಮೈಸೂರಿನ ದೊಡ್ಡಕೆರೆ ಮೈದಾನದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ದೊರಕಲಿದೆ. ಇದಕ್ಕಾಗಿ ನಗರಪಾಲಿಕೆಯ ಎಲ್ಲಾ ೯ ವಲಯ ಕಚೇರಿಗಳ ಸಹಾಯಕ ಆಯುಕ್ತರು, ಅಭಿವೃದ್ಧಿ ಅಧಿಕಾರಿಗಳು, ಪರಿಸರ ಇಂಜಿನಿಯರುಗಳು ಹಾಗೂ ನೌಕರರು ಭಾಗಿಯಾಗಲಿದ್ದಾರೆ.
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ…
ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ…
ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…
ಆದಿತ್ಯ ಧರ್ ನಿರ್ದೇಶನದ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ…