Andolana originals

ಕಾಫಿ ಬೆಳೆಗೆ ಕಾಯಿಕೊರಕ ಕೀಟದ ಹಾವಳಿ

ಲಕ್ಷ್ಮಿಕಾಂತ್ ಕೊಮಾರಪ್ಪ

ಕಾಫಿ ಬೀಜದ ಗುಣಮಟ್ಟದಲ್ಲಿ ವ್ಯತ್ಯಾಸ, ಇಳುವರಿ ಕುಂಠಿತ; ಕೀಟದ ಸಮಗ್ರ ಹತೋಟಿಗೆ ಕೆವಿಕೆ ಸಲಹೆ

ಸೋಮವಾರಪೇಟೆ: ಜಿಲ್ಲೆಯಲ್ಲಿ ಕಾಫಿ ಕಾಯಿಕೊರಕ (ಬರ್ರಿ ಬೋರರ್) ಕೀಟದ ಹಾವಳಿ ಹೆಚ್ಚಾಗಿದ್ದು, ಕಾಫಿ ಬೀಜದಗುಣಮಟ್ಟದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಜೊತೆಗೆ ಬೆಳೆಯ ಇಳುವರಿಯಲ್ಲಿ ಕುಂಠಿತ ಕಂಡುಬಂದಿದೆ. ಆದ್ದರಿಂದ ಗೋಣಿಕೊಪ್ಪಲುವಿನ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಈ ಕೀಟದ ಸಮಗ್ರ ಹತೋಟಿಯ ಬಗ್ಗೆ ರೈತರಿಗೆ ಸಲಹೆ ನೀಡಿದೆ.

ಕಾಫಿ ಕಾಯಿಕೊರಕ (ಹೈಪೋತೆನಮಸ್ ಹ್ಯಾಂಪಿ) ವಿಶ್ವದೆಲ್ಲೆಡೆ ಕಾಫಿ ಬೆಳೆಯನ್ನು ಹೆಚ್ಚಾಗಿ ಬಾಽಸುವ ಪ್ರಮುಖ ಕೀಟವಾಗಿದೆ. ಭಾರತದಲ್ಲಿ ಪ್ರಥಮವಾಗಿ ಈ ಕೀಟದ ಬಾಧೆಯು ೧೯೯೦ರಲ್ಲಿ ತಮಿಳುನಾಡಿನ ನೀಲಗಿರಿ ಪ್ರದೇಶದ ಕೆಲವು ತೋಟಗಳಲ್ಲಿ ಕಾಣಿಸಿಕೊಂಡಿತು. ನಂತರ ಕೇರಳದ ವಯನಾಡು ಮತ್ತು ಕಾನೂರಲ್ಲಿ ಕಾಣಿಸಿಕೊಂಡು ಕರ್ನಾಟಕದ ದಕ್ಷಿಣ ಕೊಡಗಿನ ತೋಟಗಳಿಗೂ ಈ ಕೀಟದ ಬಾಧೆ ವಿಸ್ತಾರವಾಯಿತು. ಈ ಕೀಟದ ಬಾಧೆಗೆ ಬಲಿಯುವ ಹಾಗೂ ಬಲಿತ ಕಾಫಿ ಕಾಯಿಗಳು ಹಾನಿಗೆ ತುತ್ತಾಗುತ್ತವೆ. ಪ್ರಾರಂಭದಲ್ಲಿ ಕೀಟವು ಬಲಿಯುವ ಹಾಗೂ ಬಲಿತ ಕಾಯಿಗಳ ಮೂಲಕ ಒಳಸೇರುತ್ತದೆ. ಇದರಿಂದ ಬಾಧೆಗೂಳಗಾದ ಕಾಫಿ ಕಾಯಿಗಳ ಮುಂಭಾಗದಲ್ಲಿ ಕೊರೆದಿರುವ ರಂಧ್ರ ಕಾಣಿಸುತ್ತದೆ. ನಂತರ ಕಾಯಿಯ ಒಳಭಾಗಕ್ಕೆ ಹೋಗಿ ಒಳಗಿನ ಸಾರವನ್ನೆಲ್ಲಾ ತಿಂದು ಹಾಳುಮಾಡುತ್ತದೆ.

ಕೀಟಗಳು ಎಳೆಯ ಕಾಯಿಯೊಳಗೆ ಸಂತಾನಾಭಿವೃದ್ದಿ ಮಾಡಲಾಗದಿದ್ದರೂ ಕೂಡ ಇದರ ಬಾಧೆಗೆ ತುತ್ತಾದ ಕಾಯಿಗಳು ಗಾಯದ ಪರಿಣಾಮವಾಗಿ ಉದುರುತ್ತವೆ. ಬಲಿತ ಕಾಯಿಯೊಳಗಿನ ಗಟ್ಟಿಗೊಂಡ ಬೀಜದಳದಲ್ಲಿ ಮಾತ್ರ ಇದರ ಸಂತಾನೋತ್ಪತ್ತಿ ಕಾರ್ಯ ನಡೆಯುತ್ತದೆ. ಕೆಲವು ಸಂದರ್ಭದಲ್ಲಿ ಈ ಕೀಟದ ಬಾಧೆ ತೀವ್ರವಾಗಿದ್ದರೆ ಶೇ.೩೦ರಿಂದ ೮೦ರಷ್ಟು ಕಾಯಿಗಳು ಕೂಡ ಹಾನಿಗೆ ತುತ್ತಾಗುತ್ತವೆ.

ಒಮ್ಮೆ ಕಾಫಿ ತೋಟಗಳಿಗೆ ಇದು ದಾಳಿ ಮಾಡಲಾರಂಭಿಸಿದರೆ ನಂತರ ಆ ತೋಟವನ್ನು ಸದಾ ಪೀಡಿಸುತ್ತಲೇ ಇರುತ್ತದೆ. ಈ ಕೀಟದ ಬಾಧೆಗೆ ತುತ್ತಾದ ಕಾಫಿಯು ತನ್ನ ಗುಣಮಟ್ಟವನ್ನು ಕಳೆದುಕೂಂಡು ಬೆಳೆಗಾರರಿಗೆ ಗಣನೀಯ ಪ್ರಮಾಣದಲ್ಲಿ ನಷ್ಟವನ್ನುಂಟು ಮಾಡುತ್ತದೆ.

” ಇತ್ತೀಚಿನ ದಿನಗಳಲ್ಲಿ ಕಾಫಿ ಬೆಳೆಗೆ ಕಾಯಿಕೊರಕದ (ಬರ್ರಿ ಬೋರರ್) ಹಾವಳಿ ತೀವ್ರಗತಿಯಲ್ಲಿ ಹರಡಿದ್ದು, ಮುಂದಿನ ಸಾಲಿನ ಫಸಲು ಮತ್ತು ಕಾಫಿಯ ಗುಣಮಟ್ಟಕ್ಕೆ ತೀವ್ರ ಹಾನಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಈ ಕೀಟದ ಬಾಧೆಯನ್ನು ತಡೆಗಟ್ಟಲು ಸೂಕ್ತ ನಿಯಂತ್ರಣ ಕ್ರಮಗಳನ್ನು ಸಕಾಲದಲ್ಲಿ ಅನುಸರಿಸಿ ಕಾಫಿ ಕೃಷಿಯನ್ನು ಇನ್ನೂ ಹೆಚ್ಚು ಲಾಭದಾಯಕ ಕೃಷಿಯನ್ನಾಗಿ ಮಾಡಬೇಕಾಗಿದೆ. ಸೂಕ್ತ ಬೇಸಾಯ ಪದ್ಧತಿಗಳು, ಜೈವಿಕ ಮತ್ತು ರಾಸಾಯನಿಕ ಹತೋಟಿ ಕ್ರಮಗಳೂ ಸೇರಿದಂತೆ ಸಮಗ್ರ ನಿರ್ವಹಣಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಅಳವಡಿಸುವಿಕೆಯಿಂದ ಈ ಕೀಟದ ಬಾಧೆಯನ್ನು ಕಡಿಮೆಗೊಳಿಸಲು ಸಾಧ್ಯವಾಗುತ್ತದೆ.”

-ಡಾ.ಕೆ.ವಿ.ವೀರೇಂದ್ರ ಕುಮಾರ್, ವಿಜ್ಞಾನಿ, ಸಸ್ಯ ಸಂರಕ್ಷಣೆ ವಿಭಾಗ, ಕೃಷಿ ವಿಜ್ಞಾನ ಕೇಂದ್ರ

ಪ್ರಮುಖ ಹತೋಟಿ ಕ್ರಮಗಳು…

ಗಿಡಗಳಲ್ಲಿರುವ ಅಕಾಲಿಕ ಕಾಯಿ ಮತ್ತು ಹಿಂದಿನ ವರ್ಷ ಕುಯ್ಯದೆ ಉಳಿದುಕೊಂಡಿರುವ ಹಣ್ಣುಗಳನ್ನು ಪೂರ್ತಿಯಾಗಿ ಕಿತ್ತು ನಾಶಪಡಿಸಬೇಕು. ಇವುಗಳಲ್ಲಿರುವ ಕೀಟದ ಸಂತತಿ ಮುಂದಿನ ಬಾರಿಯೂ ಹರಡಲು ಕಾರಣವಾಗುತ್ತದೆ. ಹಣ್ಣುಗಳನ್ನು ಕೊಯ್ಲು ಮಾಡುವಾಗ ನೆಲದ ಮೇಲೆ ಪಿಕ್ಕಿಂಗ್ ಮ್ಯಾಟ್ ಅಥವಾ ಪಾಲಿಥೀನ್ ಹಾಳೆಗಳನ್ನು ಹರಡಿ ಹಣ್ಣುಗಳು ನೆಲಕ್ಕೆ ಬೀಳದಂತೆ ತಡೆಯುವುದು ಮತ್ತು ಗಿಡಗಳಲ್ಲಿ ಯಾವುದೇ ಹಣ್ಣನ್ನು ಉಳಿಸದೆ ಪೂರ್ತಿಯಾಗಿ ಕೊಯ್ಲು ಮಾಡಬೇಕು. ಹಾನಿಗೊಳಗಾದ ಕಾಫಿ ಹಣ್ಣುಗಳನ್ನು ಕುದಿಯುವ ನೀರಿನಲ್ಲಿ ಒಂದರಿಂದ ಎರಡು ನಿಮಿಷಗಳವರೆಗೆ ಅದ್ದಿ ತೆಗೆದು ಒಣಗಿಸಬೇಕು. ಬೆವೇರಿಯಾ ಬಾಸ್ಸಿಯಾನ ಎಂಬ ರೋಗಕಾರಕ ಶಿಲೀಂಧ್ರವನ್ನು ಜುಲೈ- ಅಕ್ಟೋಬರ್ ತಿಂಗಳ ಅವಧಿಯಲ್ಲಿ ಕಾಯಿ ಕೊರಕದ ಹತೋಟಿಗೆ ೧.೫ ಕೆ.ಜಿ.ಯನ್ನು ೨೦೦ ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಕಾಯಿಗಳ ಮೇಲೆ ಸಿಂಪಡಿಸಬೇಕು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

32 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

34 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

36 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

40 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

44 mins ago