Andolana originals

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ

ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ 

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಫಿಕೊಯ್ಲು ಬಹುತೇಕ ಮುಕ್ತಾಯಗೊಂಡಿದ್ದು, ಬೆಳೆಗಾರರೀಗ ಹೂ ಮಳೆಗಾಗಿ ಆಕಾಶ ನೋಡುತ್ತಿದ್ದಾರೆ. ಕೆಲವೆಡೆ ಮಳೆಯಾಗಿರುವುದರಿಂದ ಬೆಳೆಗಾರರು ಸಂತಸಗೊಂಡಿದ್ದರೆ, ಮಳೆಯಾಗದ ಪ್ರದೇಶಗಳಲ್ಲಿ ಸ್ಪ್ರಿಂಕ್ಲರ್ ಮೂಲಕ ನೀರು ಒದಗಿಸುವ ಕೆಲಸ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಕಾಫಿ ಕೊಯ್ಲು ಬಹುತೇಕ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಹೂ ಮಳೆಯಾದರೆ ಮುಂದಿನ ವರ್ಷದ ಫಸಲಿಗೆ ಅನುಕೂಲವಾಗುತ್ತದೆ. ಇಲ್ಲವಾದರೆ ಸ್ಪ್ರಿಂಕ್ಲರ್ಗಳ ಮೂಲಕ ನೀರು ಒದಗಿಸುವುದು ಅನಿವಾರ್ಯವಾಗಲಿದೆ. ದಕ್ಷಿಣ ಕೊಡಗಿನ ಕೆಲ ಭಾಗಗಳಲ್ಲಿ ಜನವರಿ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಕಾಫಿ ಗಿಡಗಳಲ್ಲಿ ಮೊಗ್ಗು ಕಾಣಿಸಿಕೊಂಡಿದ್ದು, ಈಗಾಗಲೇ ಬ್ಯಾಕಿಂಗ್‌ಗಾಗಿ ಬೆಳೆಗಾರರು ಸ್ಪ್ರಿಂಕ್ಲರ್ ಮೊರೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಮಳೆ ಬಿದ್ದರೇ ಬೆಳೆಗಾರರಿಗೆ ಭಾರೀ ಅನುಕೂಲವಾಗಲಿದ್ದು, ಎಲ್ಲರೂ ಈಗ ಮಳೆಗಾಗಿ ಆಕಾಶವನ್ನು ನೋಡುತ್ತಿದ್ದಾರೆ.

ಕಾಫಿ ಗಿಡಗಳಲ್ಲಿ ಜನವರಿ-ಫೆಬ್ರವರಿಯಲ್ಲಿ ಮೊಗ್ಗುಗಳು ಬಿಡುತ್ತವೆ. ಆದರೆ ಅವು ಅರಳಿ ಹೂ ಬಿಡಲು ಮಳೆಯ ಅವಶ್ಯವಿದೆ. ಈಮಳೆಯನ್ನು ಬ್ಲಾಸಮ್ ಶವರ್ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಮಾರ್ಚ್ ತಿಂಗಳ ಕೊನೆಯ ವಾರದಿಂದ ಏಪ್ರಿಲ್ ಮೊದಲಾರ್ಧದೊಳಗೆ ೨೫- ೪೦ ಮಿ.ಮೀ. ಮಳೆ ಬಿದ್ದರೆ ಹೂವು ಸಮಾನವಾಗಿ ಅರಳುತ್ತದೆ. ಮಳೆ ತಡವಾದರೆ ಅಥವಾ ಸರಿಯಾಗಿ ಆಗದಿದ್ದರೆ ಹೂ ಬಿಡುವಿಕೆ ಅಸಮತೋಲನವಾಗುತ್ತದೆ. ಇದರಿಂದ ಕಾಯಿ ಕಟ್ಟುವ ಪ್ರಮಾಣ ಕಡಿಮೆಯಾಗುತ್ತದೆ.

ಬ್ಲಾಸಮ್ ಮಳೆಯ ನಂತರ ೧೦ – ೧೫ ದಿನಗಳಲ್ಲಿ ಮತ್ತೊಂದು ಸಮರ್ಪಕ ಮಳೆ ಅಗತ್ಯವಿದೆ. ಇದನ್ನು ಬ್ಯಾಕಿಂಗ್ ಶವರ್ ಎನ್ನುತ್ತಾರೆ. ಇದು ಹೂವು ಕಾಯಿ ಆಗಿ ಪರಿವರ್ತನೆಗೊಳ್ಳಲು ಸಹಾಯ ಮಾಡುತ್ತದೆ. ಮೊದಲ ಮಳೆಯ ಬಳಿಕ ಬಿಸಿಲು ಹೆಚ್ಚಾಗಿ, ಎರಡನೇ ಮಳೆ ಬಾರದಿದ್ದರೆ ಹೂಗಳು ಒಣಗಿ ಬೀಳುವ ಸಾಧ್ಯತೆ ಇರುತ್ತದೆ. ಇದರಿಂದ ಉತ್ಪಾದನೆ ಶೇ.೨೦ ರಿಂದ ೩೦ ರಷ್ಟು ಕುಸಿಯುವ ಸಾಧ್ಯತೆ ಇರುತ್ತದೆ. ನೀರಿನ ಮೂಲ ಇಲ್ಲದ ಸಣ್ಣ ರೈತರಿಗೆ ಇದು ಕಷ್ಟ. ಹೀಗಾಗಿ ಮಳೆ ಮೇಲಿನ ಅವಲಂಬನೆ ಇನ್ನೂ ಮುಂದುವರಿದಿದೆ.

ಮಳೆ ಮುನ್ಸೂಚನೆ…

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಭಾಗಗಳಲ್ಲಿ ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಸೆಕೆಯ ವಾತಾವರಣ ಮುಂದುವರಿಯಲಿದೆ. ಮಲೆನಾಡಿನ ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಇದೇ ವಾತಾವರಣವು ಫೆ.೨೭ರ ತನಕವೂ ಮುಂದುವರಿಯುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

” ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಇದೇ ವಾತಾವರಣವು ಫೆ.೨೭ರ ತನಕವೂ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡಿನ ಮೈಸೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪೂರ್ವಕ್ಕೆ ಚಲಿಸಿ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿ ಕ್ರಮೇಣ ವಾತಾವರಣದ ಉಷ್ಣತೆ ಹೆಚ್ಚಾಗಬಹುದು.”

-ಡಾ.ಸುಮಂತ್ ಕುಮಾರ್, ತಾಂತ್ರಿಕ ಅಧಿಕಾರಿ, ಕೃಷಿ ಹವಾಮಾನ ಘಟಕ, ನಾಗನಹಳ್ಳಿ, ಮೈಸೂರು

” ಕಳೆದ ತಿಂಗಳು ಸುರಿದ ಮಳೆಯಿಂದ ಕೆಲವೆಡೆ ಕಾಫಿ ಗಿಡಗಳು ಹೂಬಿಟ್ಟಿವೆ. ಈಗಾಗಲೇ ಬ್ಯಾಕಿಂಗ್ ನೀಡಲಾಗುತ್ತಿದೆ. ಆದರೆ ಬಹುತೇಕ ಕಡೆ ಬ್ಲಾಸಂ ಶವರ್ ಆಗಬೇಕಾಗಿದೆ. ಇದಕ್ಕಾಗಿ ಬೆಳೆಗಾರರು ಸ್ಪ್ರಿಂಕ್ಲರ್ ಮೊರೆ ಹೋಗಿದ್ದು, ಇದು ಬಹು ವೆಚ್ಚದ ಕೆಲಸವಾಗಿರುವುದರಿಂದ ಈಗ ಮಳೆ ಬಂದರೆ ಭಾರೀ ಅನುಕೂಲ.”

-ಮನು ಸೋಮಯ್ಯ, ಬೆಳೆಗಾರ, ಜಿಲ್ಲಾ ರೈತ ಸಂಘದ ಅಧ್ಯಕ್ಷ

 

 

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

2 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

3 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

3 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

3 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

3 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

8 hours ago