ಮಂಡ್ಯ: ಮಂಡ್ಯ ತಾಲ್ಲೂಕಿನ ವಿ. ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಪರಾಮರ್ಶೆ ನಡೆಸಲು ರಚಿಸಿದ್ದ ಸಮಿತಿ ಹಲವು ಬಾರಿ ಸಭೆ ಸೇರಿ, ಸ್ಥಳ ಪರಿಶೀಲನೆ ನಡೆಸಿದ್ದು, ವಿ. ಸಿ. ಫಾರಂನಲ್ಲಿ ಕೃಷಿ ವಿ. ವಿ. ಸ್ಥಾಪಿಸಿದರೆ ಮೈಸೂರು ಕಂದಾಯ ವಿಭಾಗದ ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದೆ.
ಸಮಿತಿಯ ಅಧ್ಯಕ್ಷರಾದ ಬೆಂಗಳೂರು ಕೃಷಿ ವಿವಿ ವಿಶ್ರಾಂತ ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್, ಸದಸ್ಯರಾದ ಧಾರವಾಡ ಕೃಷಿ ವಿವಿ ಕುಲಪತಿ ಡಾ. ಪಿ. ಎಲ್. ಪಾಟೀಲ, ಬೆಂಗ ಳೂರು ಕೃಷಿ ವಿವಿ ನಿವೃತ್ತ ಕುಲಸಚಿವ ಡಾ. ಎ. ಬಿ. ಪಾಟೀಲ, ಬೆಂಗಳೂರು ಕೃಷಿ ವಿವಿ ನಿವೃತ್ತ ಆಡಳಿತಾಽಕಾರಿ ಡಾ. ಕೆ. ಎಂ. ಹರಿಣಿಕುಮಾರ, ಬೆಂಗಳೂರು ಸಿ. ಆ. ಸು. ಇ. ನಿವೃತ್ತ ಜಂಟಿ ಕಾರ್ಯದರ್ಶಿ ಚಂದ್ರಹಾಸ ಜಿ. ತಾಳೂಕರ, ಸದಸ್ಯ ಸಂಚಾಲಕ ಧಾರವಾಡ ಕೃಷಿ ವಿವಿ ಶಿಕ್ಷಣ ನಿರ್ದೇಶಕ ಡಾ. ವಿ. ಆರ್. ಕಿರೇಸೂರ ಅವರು ಬೆಂಗಳೂರಿನಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಬುಧವಾರ ಭೇಟಿ ಮಾಡಿ ವರದಿ ಸಲ್ಲಿಸಿದ್ದಾರೆ.
ಮೈಸೂರು ಕಂದಾಯ ವಿಭಾಗದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಒಳಪಡುತ್ತವೆ. ಈ ಜಿಲ್ಲೆಗಳಲ್ಲಿ ಪ್ರಮುಖ ಆಹಾರ ಧಾನ್ಯ ಗಳಾದ ಭತ್ತ, ರಾಗಿ, ಜೋಳ, ಮುಸುಕಿನ ಜೋಳ, ಸೂರ್ಯಕಾಂತಿ, ಶೇಂಗಾ, ಹತ್ತಿ, ಕಬ್ಬು ಅಲ್ಲದೇ ತೋಟಗಾರಿಕೆ ಬೆಳೆಗಳಾದ ತೆಂಗು, ಅಡಕೆ, ಕಾಫಿ, ಬಾಳೆ, ತರಕಾರಿ ಬೆಳೆಗಳು ಹಾಗೂ ರೇಷ್ಮೆ ಬೆಳೆಯಲಾಗುತ್ತಿದೆ. ಅರಣ್ಯ ಕೃಷಿ ಯಲ್ಲಿ ವಿಶೇಷವಾಗಿ ತೇಗ ಮತ್ತು ಶ್ರೀಗಂಧದ ಮರಗಳನ್ನು ಬೆಳೆಯಲಾಗುತ್ತಿದೆ ಎಂದಿದೆ. ಸಮಾನತೆ ಸಾಽಸಬಹುದು: ಮೈಸೂರು ಕಂದಾಯ ವಿಭಾಗವು ೨೦ ಲಕ್ಷ ಹೆಕ್ಟೇರ್ ಕೃಷಿ ಭೂಮಿಯನ್ನು ಹೊಂದಿದೆ.
ರಾಜ್ಯದ ಮೂರು ಕಂದಾಯ ವಿಭಾಗಗಳಲ್ಲಿ ಕೃಷಿ ಮತ್ತು ಕೃಷಿ ಸಂಬಂಽತ ವಿಶ್ವವಿದ್ಯಾಲಯಗಳು ಇರುವುದಿಲ್ಲ. ಆದ್ದರಿಂದ ಮೈಸೂರು ಕಂದಾಯ ವಿಭಾಗದಲ್ಲಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದರಿಂದ ರಾಜ್ಯಾದ್ಯಂತ ಸಮಾನತೆಯನ್ನು ಸಾಽಸಿದಂತಾಗುತ್ತದೆ ಎಂದು ತಿಳಿಸಲಾಗಿದೆ. ಪ್ರಸ್ತುತ ಸಾಲಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶದ ಆಕಾಂಕ್ಷಿಗಳಾಗಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಲು ರಾಜ್ಯದ ಸಾರ್ವಜನಿಕ ವಲಯದಲ್ಲಿ ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ಮತ್ತು ಕೃಷಿ ಸಂಬಂಽತ ವಿಶ್ವವಿದ್ಯಾಲಯ ಗಳನ್ನು ಪ್ರಾರಂಭಿಸುವುದರಿಂದ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಯನ್ನು ಹೆಚ್ಚಿಸಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಸಮಿತಿ ಹೇಳಿದೆ. ರಾಜ್ಯದಲ್ಲಿ ಆರು ಕೃಷಿ ಮತ್ತು ಕೃಷಿ ಸಂಬಂಽತ ವಿಶ್ವವಿದ್ಯಾಲಯಗಳಿದ್ದು, ಇವುಗಳಡಿಯಲ್ಲಿ ೩೯ ಕೃಷಿ, ತೋಟಗಾರಿಕೆ ಹಾಗೂ ಪಶುವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲ ಮಹಾವಿದ್ಯಾಲಯಗಳೂ
ಸೇರಿ ರಾಜ್ಯದಲ್ಲಿ ವಿವಿಧ ಸ್ನಾತಕ ಪದವಿಗಳಿಗೆ ೪ ಸಾವಿರ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕೃಷಿ ವಿವಿಗೆ ಪೂರಕ ಅಂಶಗಳು: ರಾಜ್ಯದಲ್ಲಿ ಮಂಡ್ಯ ಜಿಲ್ಲೆಯು ಕೃಷಿಯಲ್ಲಿ ಸಮೃದ್ಧ ಜಿಲ್ಲೆಯಾಗಿದೆ. ಸಮಗ್ರ ಕೃಷಿಯ ಅಳವಡಿಕೆಗೆ ಹೆಚ್ಚು ಒತ್ತು ನೀಡುವ ಅವಶ್ಯಕತೆ ಇದೆ. ಜಿಲ್ಲೆಯ ಒಟ್ಟು ಭೌಗೋಳಿಕ ಪ್ರದೇಶ ೪,೯೮,೨೪೪ ಹೆಕ್ಟೇರ್. ಅದರಲ್ಲಿ ೨,೪೮,೮೨೫ ಹೆಕ್ಟೇರ್ ಬಿತ್ತನೆಯ ಪ್ರದೇಶ ವಾಗಿದೆ. ಅರ್ಧಕ್ಕಿಂತ ಹೆಚ್ಚಿನ ಭೂ ಪ್ರದೇಶವು ಕೃಷಿಯಲ್ಲಿ ತೊಡಗಿದೆ. ಒಟ್ಟು ನೀರಾವರಿ ಪ್ರದೇಶ ೧,೧೬,೯೦೧ ಹೆಕ್ಟೇರ್. ಇದರಲ್ಲಿ ಸುಮಾರು ೮೮,೦೦೦ ಹೆಕ್ಟೇರ್ ಪ್ರದೇಶದಲ್ಲಿ ಕೆ. ಆರ್. ಸಾಗರ ಜಲಾಶಯದಿಂದ ನೀರಾವರಿ ಮಾಡಲಾಗುತ್ತಿದೆ ಮತ್ತು ಸುಮಾರು ೧೬,೦೦೦ ಹೆಕ್ಟೇರ್ ಪ್ರದೇಶದಲ್ಲಿ ಹೇಮಾವತಿ ಜಲಾಶಯದಿಂದ ಕೃಷಿ ಮಾಡಲಾಗುತ್ತಿದೆ.
8 ಜಿಲ್ಲೆಗಳಿಗೆ ಅನುಕೂಲ
ಮಂಡ್ಯ ತಾಲ್ಲೂಕಿನ ವಿ. ಸಿ. ಫಾರಂನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಿದರೆ ಮೈಸೂರು ಕಂದಾಯ ವಿಭಾಗದ ೮ ಜಿಲ್ಲೆಗಳಿಗೆ ಅನು ಕೂಲವಾಗಲಿದೆ ಎಂದು ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ವರದಿ ಸಲ್ಲಿಸಿದ್ದು, ಮಂಡ್ಯ ಪ್ರಧಾನ ಜಿಲ್ಲೆಯಾದ್ದರಿಂದ ಸಮಿತಿಯ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿ, ಅವರ ಒಪ್ಪಿಗೆ ಪಡೆದು ವಿ. ಸಿ. ಫಾರಂನಲ್ಲಿ ನೂತನ ಕೃಷಿ ವಿವಿ ಸ್ಥಾಪಿಸಲಾಗು ವುದು. ಇದರಿಂದ ಸಮಗ್ರ ಕೃಷಿ ಅಳವಡಿಕೆಗೆ ಹೆಚ್ಚು ಒತ್ತು ನೀಡುವುದಲ್ಲದೆ, ವಿದ್ಯಾರ್ಥಿಗಳಿಗೂ ನ್ಯಾಯ ದೊರಕಿದಂತಾಗುತ್ತದೆ.
– ಎನ್. ಚಲುವರಾಯಸ್ವಾಮಿ, ಕೃಷಿ ಸಚಿವರು
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…