ಮಹಾದೇಶ್ ಎಂ.ಗೌಡ
ಸರ್ಕಾರದಿಂದ ಹಣ ಬಿಡುಗಡೆಯಾಗದೆ ಕಾಮಗಾರಿ ಸ್ಥಗಿತ; ವಾಹನ ಸವಾರರಿಗೆ ನರಕಯಾತನೆ
ಹನೂರು: ತಾಲ್ಲೂಕಿನ ರಾಮಾಪುರ ಹೋಬಳಿ ಕೇಂದ್ರ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ-ನಾಲ್ ರೋಡ್ ನಡುವಿನ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸು ವಂತೆ ಸಾರ್ವಜನಿಕರು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.
ತಾಲ್ಲೂಕು ಕೇಂದ್ರದಿಂದ ಅಜ್ಜೀಪುರ, ರಾಮಾಪುರ, ನಾಲ್ ರೋಡ್, ಗರಿಕೆಕಂಡಿ ಮೂಲಕ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಬಹಳ ಹದಗೆಟ್ಟು, ವಾಹನ ಸವಾರರಿಗೆ ತೀವ್ರ ತೊಂದರೆಯಾಗಿ ಹಲವಾರು ಪ್ರತಿಭಟನೆಗಳು ಕೂಡ ನಡೆದಿದ್ದವು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಾ.ದಳ ಅಭ್ಯರ್ಥಿಯಾಗಿದ್ದ ಮಂಜುನಾಥ್ರವರು ನಾನು ಶಾಸಕನಾಗಿ ಆಯ್ಕೆಯಾದರೆ ಮೊದಲು ಅಂತರರಾಜ್ಯ ರಸ್ತೆ ಅಭಿವೃದ್ಧಿಗೆ ಕ್ರಮವಹಿಸುತ್ತೇನೆಂದು ಭರವಸೆ ನೀಡಿದ್ದರು. ಈಗ ಅವರು ಶಾಸಕರಾಗಿದ್ದು, ಕೊಟ್ಟ ಮಾತಿನಂತೆ ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ರಾಮಾಪುರ ಗ್ರಾಮದಿಂದ ನಾಲ್ ರೋಡ್ ಗರಿಕೆಕಂಡಿ ಮಾರ್ಗದ ರಸ್ತೆ ಅಭಿವೃದ್ಧಿಗೆ ೨೫ ಕೋಟಿ ರೂ. ವೆಚ್ಚದಲ್ಲಿ ೨೦೨೪ರ ಮಾ.೧೧ರಂದು ಭೂಮಿಪೂಜೆ ನೆರವೇರಿಸಿದ್ದರು. ಆದರೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿಲ್ಲದಿದ್ದರಿಂದ ಕಾಮಗಾರಿ ತಡವಾಗಿ ಪ್ರಾರಂಭವಾಯಿತು.
ಕಳೆದ ಆರು ತಿಂಗಳಿನಿಂದ ಕಾಮಗಾರಿ ಪ್ರಗತಿಯಲ್ಲಿದ್ದರೂ ಸರ್ಕಾರದಿಂದ ಹಣಬಿಡುಗಡೆಯಾಗಿಲ್ಲ ಎಂಬ ನೆಪವೊಡ್ಡಿ ಗುತ್ತಿಗೆದಾರ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದು, ನಿತ್ಯ ವಾಹನ ಸವಾರರು, ದ್ವಿಚಕ್ರ ವಾಹನ ಸವಾರರಿಗೆ ಕಿತ್ತು ಹೋಗಿರುವ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆಯಾಗಿದೆ. ನಾಲ್‌ರೋಡ್-ಗರಿಕೆಕಂಡಿವರೆಗಿನ ಸುಮಾರು ೩ ಕಿ.ಮೀ. ರಸ್ತೆ ಅಭಿವೃದ್ಧಿಯಾಗಿದೆ. ಆದರೆ ನಾಲ್‌ರೋಡ್ ಗ್ರಾಮದಿಂದ ರಾಮಾಪುರ ಗ್ರಾಮದವರೆಗಿನ ರಸ್ತೆ ಕಾಮಗಾರಿ ನಡೆಯದೆ ಇರುವುದರಿಂದ ತೊಂದರೆಯಾಗುತ್ತಿದೆ.
ಹಲವಾರು ವರ್ಷಗಳಿಂದ ಚಾ.ನಗರ, ಮೈಸೂರು, ಬೆಂಗಳೂರು, ಹಾಸನ ಮತ್ತಿತರ ಜಿಲ್ಲೆಗಳಿಂದ ತಮಿಳುನಾಡಿಗೆ ಹೋಗುವ ವಾಹನಗಳು ಬಣ್ಣಾರಿ ರಸ್ತೆಯ ಮೂಲಕಸಂಚರಿಸುತ್ತಿದ್ದವು. ಆದರೆ ಚೆನ್ನೈ ಕೋರ್ಟ್ ಆ ಮಾರ್ಗದಲ್ಲಿ ಅಧಿಕ ಬಾರದ ವಾಹನಗಳ ಸಂಚಾರವನ್ನು ನಿರ್ಬಂಽಸಿರುವುದರಿಂದ ವಾಣಿಜ್ಯ ಸರಕು ಸಾಗಣೆ ವಾಹನಗಳು ಹನೂರು- ರಾಮಾಪುರ- ಗರಿಕೆಕಂಡಿ ಮಾರ್ಗವಾಗಿ ತಮಿಳುನಾಡಿಗೆ ಸಂಚರಿಸುತ್ತಿವೆ. ಇದರಿಂದ ರಸ್ತೆಗಳು ಮತ್ತಷ್ಟು ಹದಗೆಟ್ಟಿವೆ.
ರಾಮಾಪುರದಿಂದ ನಾಲ್‌ರೋಡ್ ಗ್ರಾಮದವರೆಗೆ ಸುಮಾರು ೪ ಕಿ.ಮೀ.ಗೂ ಹೆಚ್ಚು ದೂರದ ರಸ್ತೆ ಅಭಿವೃದ್ಧಿ ಆಗದೆ ಇರುವುದರಿಂದ ಸವಾರರು ಪರದಾಡುವಂತಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಈ ರಸ್ತೆಯ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕೆಂದು ವಾಹನ ಸವಾರರು ಮನವಿ ಮಾಡಿದ್ದಾರೆ.
” ರಾಮಾಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಗೆ ೨೫ ಕೋಟಿ ರೂ. ವೆಚ್ಚದಲ್ಲಿ ಭೂಮಿಪೂಜೆ ಸಲ್ಲಿಸಲಾಗಿತ್ತು. ಆದರೆ ಹೆಚ್ಚುವರಿ ೧೦ ಕೋಟಿ ರೂ. ಅನುದಾನ ಅವಶ್ಯವಿರುವುದರಿಂದ ಲೋಕೋಪಯೋಗಿ ಇಲಾಖೆಯ ಸಚಿವರಿಗೆ ಪತ್ರ ಬರೆದಿದ್ದೇನೆ. ಅನುದಾನ ಬಿಡುಗಡೆಯಾದ ನಂತರ ರಸ್ತೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರಿಗೆ ಅನುಕೂಲವಾಗಲಿದೆ.”
-ಎಂ.ಆರ್.ಮಂಜುನಾಥ್, ಶಾಸಕರು
” ರಾಮಾಪುರದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಸಂಪೂರ್ಣ ಹಾಳಾಗಿತ್ತು. ಶಾಸಕ ಮಂಜುನಾಥ್ರವರು ರಸ್ತೆ ಅಭಿವೃದ್ಧಿಗೆ ಅನುದಾನ ನೀಡಿದ್ದಾರೆ. ಬಾಕಿ ಉಳಿದಿರುವ ರಸ್ತೆಯನ್ನು ಅಭಿವೃದ್ಧಿಪಡಿಸಿದರೆ ಹೆಚ್ಚಿನ ಅನುಕೂಲವಾಗಲಿದೆ.”
-ರಾಜೇಶ್, ವಾಹನ ಚಾಲಕ
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…