Andolana originals

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ

ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣದೊಂದಿಗೆ ಮಳೆಯೂ ಆಗುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಆತಂಕ ಎದುರಾಗಿದ್ದು, ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರಿದಿದ್ದು, ಕೆಲ ದಿನಗಳಲ್ಲಿ ಬಿಸಿಲಿನ ವಾತಾವರಣ ಮತ್ತೆ ಕೆಲ ದಿನ ಮಳೆಯ ವಾತಾವರಣ ಕಂಡುಬರುತ್ತಿದೆ. ಮಳೆಯಿಂದ ಅಲ್ಲಲ್ಲಿ ನೀರು ಸಂಗ್ರಹ ವಾಗುವುದರಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಒಂದೇ ಕಡೆ ನೀರು ನಿಲ್ಲುವುದರಿಂದ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತದೆ.

ಆದ್ದರಿಂದ ನೀರು ನಿಲ್ಲದಂತೆ ಗಮನ ಹರಿಸಬೇಕು. ತೆಂಗಿನ ಚಿಪ್ಪು, ಟೈಯರ್, ಒಡೆದ ಬಕೆಟ್‌ಗಳಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಪರಿಸರ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮನವಿ ಮಾಡಿದ್ದಾರೆ.

ಸೊಳ್ಳೆಗಳಿಂದ ಡೆಂಗ್ಯು , ಮಲೇರಿಯಾ, ಚಿಕೂನ್ ಗುನ್ಯಾ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸಬೇಕಿದೆ. ಸದ್ಯ ಜಿಲ್ಲೆಯಲ್ಲಿ ಮಲೇರಿಯಾ, ಚಿಕೂನ್ ಗುನ್ಯಾ ಮತ್ತಿತರ ಸಾಂಕ್ರಾಮಿಕ ರೋಗಗಳು ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರನ್ನು ಕುದಿಸಿ ಅಥವಾ ಶುದ್ಧೀಕರಿಸಿ ಬಳಸಬೇಕು. ಆಹಾರವನ್ನು ಸ್ವಚ್ಛವಾಗಿ ತಯಾರಿಸಿ, ಬಿಸಿ ಆಹಾರವನ್ನೇ ಸೇವಿಸಬೇಕು. ತೆರೆದ ಸ್ಥಳದಲ್ಲಿ ಮಾರಾಟವಾಗುವ ಆಹಾರ ಹಾಗೂ ಕಲುಷಿತ ನೀರನ್ನು ಸೇವಿಸುವುದನ್ನು ತಪ್ಪಿಸಬೇಕು. ಸೊಳ್ಳೆಗಳ ನಿಯಂತ್ರಣಕ್ಕಾಗಿ ಮನೆ ಹಾಗೂ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರಿನ ಟ್ಯಾಂಕ್‌ಗಳು ಮತ್ತು ಪಾತ್ರೆಗಳನ್ನು ಮುಚ್ಚಿಡಬೇಕು. ಸೊಳ್ಳೆ ಪರದೆ, ಸೊಳ್ಳೆ ನಿವಾರಕ ಕ್ರೀಮ್ ಅಥವಾ ಸೊಳ್ಳೆ ಪರದೆ ಬಳಸುವುದು ಸೂಕ್ತ.

ಸಾರ್ವಜನಿಕರು ಆಗಾಗ್ಗೆ ಕೈಗಳನ್ನು ಸಾಬೂನು ಬಳಸಿ ತೊಳೆಯಬೇಕು. ಜ್ವರ, ಕೆಮ್ಮು, ಶೀತ, ವಾಂತಿ, ಭೇದಿ, ಮೈಕೈ ನೋವು ಅಥವಾ ಇತರೆ ಸೋಂಕಿನ ಲಕ್ಷಣಗಳು ಕಂಡುಬಂದರೆ ಸ್ವಯಂ ಔಷಧ ಸೇವನೆ ಮಾಡದೆ ಸಮೀಪದ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಬೇಕು.

” ಸೊಳ್ಳೆಗಳಿಂದ ಡೆಂಗ್ಯು , ಮಲೇರಿಯಾ, ಚಿಕೂನ್ ಗುನ್ಯಾ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಆದ್ದರಿಂದ ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕಿದೆ. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ, ೧,೬೩೪ ಡೆಂಗ್ಯು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ೨೯ ಡೆಂಗ್ಯು ಪ್ರಕರಣಗಳು ದೃಢಪಟ್ಟಿದ್ದು, ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ.”

-ಡಾ.ಸತೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಮುನ್ನೆಚ್ಚರಿಕಾ ಕ್ರಮಗಳು: 

* ಸದಾ ಕಾಯಿಸಿ ಆರಿಸಿದ ನೀರನ್ನು ಮಾತ್ರ ಕುಡಿಯಿರಿ

* ಬಿಸಿ ಮತ್ತು ತಾಜಾ ಆಹಾರ ಸೇವಿಸಿ

* ಆಗಾಗ್ಗೆ ಸಾಬೂನಿನಿಂದ ಕೈಗಳನ್ನು ಚೆನ್ನಾಗಿ ತೊಳೆಯಿರಿ

* ಟೈಯರ್, ತೆಂಗಿನ ಚಿಪ್ಪು ಮತ್ತು ಹೂಕುಂಡಗಳಲ್ಲಿ ನೀರು ಸಂಗ್ರಹವಾಗಲು ಬಿಡಬೇಡಿ

* ಮಲಗುವಾಗ ಸೊಳ್ಳೆಪರದೆ ಬಳಸಿ

* ಮನೆಯ ಸುತ್ತಮುತ್ತ ಗಿಡಗಂಟಿಗಳನ್ನು ಕಡಿದು ಶುಚಿಯಾಗಿಟ್ಟುಕೊಳ್ಳಿ

 

 

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

18 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

18 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

18 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

18 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

18 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

18 hours ago