Andolana originals

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ

-ನವೀನ್ ಡಿಸೋಜ

ಮಡಿಕೇರಿ : ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕ್ರೀಡಾ ಸಂಕೀರ್ಣ ಯೋಜನೆಗೆ ಇದೀಗ ಬಜೆಟ್ ಬಲ ಸಿಕ್ಕಂತಾಗಿದ್ದು, ಸದ್ಯದಲ್ಲಿಯೇ ವಿರಾಜಪೇಟೆಯಲ್ಲಿ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ಕ್ರೀಡಾ ಜಿಲ್ಲೆ ಎಂದು ಕರೆಸಿಕೊಳ್ಳುವ ಕೊಡಗಿ ನಿಂದ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಗುರುತಿಸಿಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಕಿ, ಬಾಡ್ಮಿಂಟನ್, ಅಥ್ಲೆಟಿಕ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಕೊಡಗಿನವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇಂತಹವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಮಕ್ಕಳಿಗೆ ವೈಜ್ಞಾನಿಕ ತರಬೇತಿಯ ಕೊರತೆ ಇದಕ್ಕೆ ಕಾರಣ ಎಂಬುದು ಹಿರಿಯ ಕ್ರೀಡಾಪಟುಗಳು ಮತ್ತು ಕ್ರೀಡಾ ತಜ್ಞರ ಅಭಿಪ್ರಾಯವಾಗಿದೆ.

ಮೂಲ ಸೌಲಭ್ಯಗಳ ಕೊರತೆಯೇ ಈ ಹಿನ್ನಡೆಗೆ ಕಾರಣವಾಗಿದ್ದು, ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಈಗ ಪ್ರಯತ್ನಗಳು ನಡೆದಿವೆ. ವಿರಾಜಪೇಟೆಯಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಯೋಜನೆ ಸಿದ್ಧಗೊಂಡು ಜಾಗವನ್ನೂ ಗುರುತಿಸಲಾಗಿದೆ. ಅದಕ್ಕೀಗ ಬಜೆಟ್‌ನಲ್ಲಿ ಅನುದಾನದ ಭರವಸೆ ಸಿಕ್ಕಿದೆ.

ಜಿಲ್ಲೆಯ ವಿರಾಜಪೇಟೆ ತಾಲ್ಲೂಕು ವಿ.ಬಾಡಗ ಗ್ರಾಮದಲ್ಲಿ ವಿವಿಧ ಕ್ರೀಡೆಗಳ ತರಬೇತಿ ಕೇಂದ್ರಗಳನ್ನೊಳಗೊಂಡ ಸಂಕೀರ್ಣವೊಂದರ ನಿರ್ಮಾಣಕ್ಕೆ ಜಾಗವನ್ನು ಗುರುತಿಸಲಾಗಿದೆ. ಶಾಸಕ ಎ.ಎಸ್.ಪೊನ್ನಣ್ಣ ಮತ್ತು ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಅವರ ಪ್ರಯತ್ನದಿಂದ ಸುಸಜ್ಜಿತ ಕ್ರೀಡಾ ಸಂಕೀರ್ಣ ತಲೆಯೆತ್ತಲಿದೆ. ಇದಕ್ಕಾಗಿ ವಿ.ಬಾಡಗದಲ್ಲಿ 11. 5 ಎಕರೆ ಜಾಗವನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಈಗಾಗಲೇ ಪೂರ್ವ ಸಿದ್ಧತೆಗಳು ಆರಂಭವಾಗಿವೆ.

11.5 ಎಕರೆ ವಿಸ್ತೀರ್ಣದ ಕ್ರೀಡಾ ಸಂಕೀರ್ಣದಲ್ಲಿ ಹಾಕಿ ಟರ್ಫ್, ವಾಲಿಬಾಲ್ ಕೋರ್ಟ್, ಟೆನ್ನಿಸ್ ಕೋರ್ಟ್, ಅಥ್ಲೆಟಿಕ್ ಟ್ರಾಕ್, ಒಲಿಂಪಿಕ್ ಅಳತೆಯ ಸ್ವಿಮ್ಮಿಂಗ್ ಪೂಲ್ ಸೇರಿದಂತೆ ವಿವಿಧ ಕ್ರೀಡಾ ಕೋರ್ಟ್‌ಗಳು ಇರಲಿದ್ದು, ಎಲ್ಲಾ ಕ್ರೀಡೆಗಳ ತರಬೇತಿಯನ್ನು ನೀಡಲಾಗುತ್ತದೆ.

ಕೊಡಗಿನ ಸಂಸ್ಕೃತಿಯ ಭಾಗವಾಗಿರುವ ಶೂಟಿಂಗ್‌ ಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿಯೂ ಚಿಂತನೆ ನಡೆದಿದ್ದು, ಶೂಟಿಂಗ್ ಅಭ್ಯಾಸಕ್ಕಾಗಿ ಶೂಟಿಂಗ್ ಕೂಡ ಇಲ್ಲೇ ನಿರ್ಮಾಣವಾಗಲಿದೆ. ಇದರೊಂದಿಗೆ ಆರ್ಚರಿ ಕ್ರೀಡೆಯ ಅಭ್ಯಾಸಕ್ಕೂ ಅವಕಾಶ ಕಲ್ಪಿಸಲು ಚಿಂತಿಸಲಾಗುತ್ತಿದೆ.

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಕನಿಷ್ಠ 40 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ. ಇದಕಾಗಿ ರಾಜ್ಯ ಸರ್ಕಾರದಿಂದ ಅನುದಾನಕ್ಕೆ ಬೇಡಿಕೆ ಇಡಲಾಗಿತ್ತು. ಅದರಂತೆ ಈಗ ಬಜೆಟ್‌ನಲ್ಲಿ ಘೋಷಣೆಯಾಗಿರುವುದರಿಂದ ಅನುದಾನದ ಭರವಸೆ ಸಿಕ್ಕಂತಾಗಿದೆ. ಇದರ ಜತೆಗೆ ಕೇಂದ್ರ ಸರ್ಕಾರದಿಂದಲೂ ಅನುದಾನ ತರಲು ಪ್ರಯತ್ನಿಸಲಾಗುತ್ತಿದೆ.

ಇದಲ್ಲದೆ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವ ಮಾಜಿ ಕೇಂದ್ರ ಕ್ರೀಡಾ ಸಚಿವ ಅಜಯ್ ಮಾಕನ್ ಅವರೂ ನೆರವಾಗುವ ಭರವಸೆ ನೀಡಿದ್ದಾರೆ. ಹಿಂದೆ ರಾಜ್ಯಸಭೆ ಕಲಾಪದ ವೇಳೆ ಕೊಡಗಿನ ಕ್ರೀಡಾ ಚಟುವಟಿಕೆ, ಕೊಡವ ಕೌಟುಂಬಿಕ ಹಾಕಿ ವಿಶ್ವದಾಖಲೆಯ ಬಗ್ಗೆ ಶ್ಲಾಘಿಸಿದ್ದ ಅವರು, ಇಲ್ಲಿ ಹೈ ಆಟಿಟ್ಯೂಡ್ ಕ್ರೀಡಾ ತರಬೇತಿ ಕೇಂದ್ರ ನಿರ್ಮಾಣವಾಗಬೇಕು ಎಂದೂ ಹೇಳಿದ್ದರು. ಅವರನ್ನು ಜಿಲ್ಲೆಯ ಜನಪ್ರತಿನಿಧಿಗಳು ಸಂಪರ್ಕಿಸಿದ್ದು, ಸಕಾರಾತ್ಮಕ ವಾಗಿ ಸ್ಪಂದಿಸಿ ಅನುದಾನ ಒದಗಿಸಿಕೊಡುವ ಭರವಸೆ ನೀಡಿದ್ದಾರೆ.

ವಿ.ಬಾಡಗದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯಸಭಾ ಸದಸ್ಯರಿಂದ ಅನುದಾ ನದ ಭರವಸೆ ಸಿಕ್ಕಿದೆ. ಇದರೊಂದಿಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ವಸತಿ ನಿಲಯ ನಿರ್ಮಾಣದ ಕುರಿತು ಘೋಷಣೆ ಮಾಡಿದೆ. ಇದರಿಂದ ಜಿಲ್ಲೆಯಲ್ಲಿ ಕ್ರೀಡಾ ಉತ್ತೇಜನಕ್ಕೆ ಸಹಕಾರಿಯಾಗಲಿದೆ. -ಎ. ಟಿ. ವಿಸ್ಮಯಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

14 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

14 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

19 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago