Andolana originals

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ

೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ 

ಮಡಿಕೇರಿ: ಡಿ.೨೦ ಮತ್ತು ೨೧ರಂದು ಮಡಿಕೇರಿಯಲ್ಲಿ ಕೂರ್ಗ್ ಕಾರ್ನಿವಲ್ ಎಂಬ ಪ್ರವಾಸಿ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಕೊಡಗು ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಾಥ್ ನೀಡಿದೆ.

ಮಡಿಕೇರಿಯ ಕಿಂಬರ್ಲಿ ಕೂರ್ಗ್ ಎಂಬ ಸಂಸ್ಥೆ ೨ನೇ ಬಾರಿಗೆ ಕೊಡಗಿನಲ್ಲಿ ಕೂರ್ಗ್ ಕಾರ್ನಿವಲ್ ಆಯೋಜಿಸುತ್ತಿದ್ದು, ಕೊಡಗು ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಈಬಾರಿ ಉತ್ಸವದ ಸಂಪೂರ್ಣ ಪ್ರಾಯೋಜಕತ್ವವನ್ನು ವಹಿಸಿಕೊಂಡಿದೆ.

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು, ಸಣ್ಣ ಮತ್ತು ಮಧ್ಯಮಉದ್ಯಮಿಗಳ ಅನುಕೂಲಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಡಿಜೆ, ಸಂಗೀತ, ಸ್ಟಾಂಡ್ ಅಪ್ ಕಾಮಿಡಿ ಸೇರಿದಂತೆ ಹಲವು ವೈವಿಧ್ಯಗಳು ಇರಲಿವೆ ಎಂದು ಕಿಂಬರ್ಲಿ ಕೂರ್ಗ್ ಮುಖ್ಯಸ್ಥ ಕೆ.ಜಿ. ಮದನ್ ತಿಳಿಸಿದ್ದಾರೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ ಈ ಬಾರಿ ೨ನೇ ವರ್ಷದ ಕೂರ್ಗ್ ಕಾರ್ನಿವಲ್ ಹಮ್ಮಿಕೊಳ್ಳಲಾಗುತ್ತಿದೆ. ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಕೈಜೋಡಿಸಿರುವುದರಿಂದ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ನಿರೀಕ್ಷೆಯಿದೆ.

ಉತ್ಸವದಲ್ಲಿ ನಾನಾ ಬಗೆಯ ಸ್ಟಾಲ್‌ಗಳನ್ನು ತೆರೆಯಲಾಗುತ್ತಿದ್ದು, ಸ್ಥಳೀಯ ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ ತಿಂಗಳು ಪ್ರವಾಸಿ ಸೀಜನ್ ಆಗಿರುವುದರಿಂದ ಅದನ್ನೇ ಬಳಸಿಕೊಳ್ಳಲು ಆಯೋಜಕರು ಮುಂದಾಗಿದ್ದಾರೆ. ಇನ್ಸ್ಟಾಗ್ರಾಂ, ಫೇಸ್‌ಬುಕ್, ವಾಟ್ಸಾಪ್, ಯೂ ಟ್ಯೂಬ್ ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರ ನಡೆಸುತ್ತಿದ್ದು, ಈ ಕಾರ್ಯಕ್ರಮಕ್ಕಾಗಿಯೇ ಹೆಚ್ಚು ಪ್ರವಾಸಿಗರು ಜಿಲ್ಲೆಗೆ ಬರುವಂತೆ ಮಾಡಬೇಕೆಂಬ ಅಭಿಲಾಷೆ ಹೊಂದಿದ್ದಾರೆ. ಫುಡ್ ಫೆಸ್ಟಿವಲ್, ಹೋಂ ಮೇಡ್ ವಸ್ತುಗಳ ಪ್ರದರ್ಶನ, ಗೇಮ್ಸ್, ಕಾರ್ಯಾಗಾರಗಳು ಮತ್ತು ರಾಕ್ ಬ್ಯಾಂಡ್ ಮ್ಯೂಸಿಕ್ ಕಾರ್ಯಕ್ರಮದ ವಿಶೇಷತೆಗಳಲ್ಲಿ ಒಂದಾಗಿದೆ.

ಜನದಟ್ಟಣೆ ನಿಯಂತ್ರಿಸುವ ಸಲುವಾಗಿ ಉಚಿತ ಪ್ರವೇಶ ನೀಡದಿರಲು ಆಯೋಜಕರು ನಿರ್ಧರಿಸಿದ್ದಾರೆ. ೯೦ ರೂ. ಟಿಕೆಟ್ ದರ ನಿಗದಿಪಡಿಸಿ, ಪ್ರವೇಶ ಪಡೆಯುವ ವ್ಯವಸ್ಥೆ ಮಾಡಲಾಗಿದ್ದು, ಒಂದು ಟಿಕೆಟ್ ಒಬ್ಬರಿಗೆ ಮತ್ತು ಒಂದು ದಿನದ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿರಲಿದೆ. ಯಾವುದೇ ರೀತಿಯ ಮುಂಗಡ ಬುಕ್ಕಿಂಗ್‌ಗೆ ಅವಕಾಶವಿರುವುದಿಲ್ಲ. ನೇರವಾಗಿ ಬಂದು ಟಿಕೆಟ್ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದು ಆಯೋಜಕರಾದ ಮದನ್ ತಿಳಿಸಿದ್ದಾರೆ.

ಸರ್ಕಾರ ಪ್ರವಾಸಿ ಉತ್ಸವ ಆಯೋಜಿಸಲಿ:  ಸರ್ಕಾರ ಪ್ರವಾಸಿ ಉತ್ಸವ ಆಯೋಜಿಸಬೇಕೆಂಬ ನಿಟ್ಟಿನಲ್ಲಿ ಹೋಟೆಲ್ ಅಸೋಸಿಯೇಷನ್ ಮತ್ತು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಹಲವು ವರ್ಷಗಳಿಂದ ಪ್ರಯತ್ನ ನಡೆಸುತ್ತಿವೆ. ಆದರೆ ನಾನಾ ಕಾರಣಗಳಿಂದ ಇದು ಸಾಕಾರಗೊಳ್ಳುತ್ತಿಲ್ಲ. ೨೦೧೯ರಲ್ಲಿ ನಡೆಸಿದ್ದ ಪ್ರವಾಸಿ ಉತ್ಸವದಿಂದ, ಪ್ರವಾಸೋದ್ಯಮದ ಚೇತರಿಕೆಗೆ ಅನುಕೂಲವಾಗಿತ್ತು. ಪ್ರತಿ ವರ್ಷ ಪ್ರವಾಸೋದ್ಯಮ ಇಲಾಖೆಯಿಂದ ಕೊಡಗು ಉತ್ಸವವನ್ನು ಹಮ್ಮಿಕೊಂಡು ಇಲ್ಲಿನ ಸಂಸ್ಕೃತಿ, ಆಚಾರ ವಿಚಾರ, ಪಾರಂಪರಿಕತೆ, ಪ್ರಾಕೃತಿಕ ಮಹತ್ವವನ್ನು ಪಸರಿಸಬೇಕು. ಆ ಮೂಲಕ ಪರಿಸರ ಸ್ನೇಹಿ, ಸುಸ್ಥಿರ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಹಕರಿಸಬೇಕು ಎಂಬುದು ಪ್ರವಾಸೋದ್ಯಮಿಗಳ ಆಗ್ರಹವಾಗಿದೆ.

” ಜಿಲ್ಲೆಯಲ್ಲಿ ಪ್ರವಾಸಿ ಉತ್ಸವದಂತಹ ಕಾರ್ಯಕ್ರಮಗಳನ್ನು ವರ್ಷಕ್ಕೊಮ್ಮೆಯಾದರೂಹಮ್ಮಿಕೊಳ್ಳಬೇಕು. ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ಸ್ಥಳೀಯ ಸಣ್ಣ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಜತೆಗೂಡಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ.”

-ಮದನ್ ಕೆ.ಜಿ, ಕಿಂಬರ್ಲಿ ಮುಖ್ಯಸ್ಥ

” ಡಿ.೨೦ ಮತ್ತು ೨೧ರಂದು ಕೂರ್ಗ್ ಕಾರ್ನಿವಲ್ ಎಂಬ ಪ್ರವಾಸಿ ಉತ್ಸವವನ್ನು ಹಮ್ಮಿಕೊಂಡಿದ್ದೇವೆ. ಫುಡ್ ಫೆಸ್ಟ್,ರಾಕ್ ಬ್ಯಾಂಡ್, ವೈವಿಧ್ಯಮಯ ವಸ್ತು ಪ್ರದರ್ಶನ ಸೇರಿ ಹಲವು ಕಾರ್ಯಕ್ರಮಗಳು ನಡೆಯಲಿವೆ. ಸ್ಟಾಲ್‌ಗಳು, ಕಾರ್ಯಾಗಾರಗಳು ಸೇರಿದಂತೆ ನಾನಾ ವಿಶೇಷತೆಗಳು ಈ ಉತ್ಸವದಲ್ಲಿರಲಿವೆ.”

-ದಿನೇಶ್ ಕಾರ್ಯಪ್ಪ, ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ 

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

11 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

12 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

13 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

13 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

14 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

16 hours ago