ಆಂದೋಲನ ಫೋನ್-ಇನ್‌ನಲ್ಲಿ ವಿಷ್ಣುವರ್ಧನ್ ಭರವಸೆ
ಮೈಸೂರು: ಗ್ರಾಮೀಣ ಪ್ರದೇಶಗಳ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟದ ದಂಧೆ, ಜೂಜಾಟ, ಕಳ್ಳತನ, ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳು ಮುಂತಾದ ವಿಷಯಗಳೇ ಫೋನ್ ಇನ್ ಕಾರ್ಯಕ್ರಮದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಧ್ವನಿಸಿದವು.ಮೈಸೂರು: ಗ್ರಾಮೀಣ ಪ್ರದೇಶಗಳ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟದ ದಂಧೆ, ಜೂಜಾಟ, ಕಳ್ಳತನ, ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳು ಮುಂತಾದ ವಿಷಯಗಳೇ ಫೋನ್ ಇನ್ ಕಾರ್ಯಕ್ರಮದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಧ್ವನಿಸಿದವು.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಅವರೊಂದಿಗೆ ‘ಆಂದೋಲನ’ ಗುರುವಾರ ಆಯೋಜಿಸಿದ್ದ ಫೋನ್-ಇನ್ ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದಿಂದ ಬಂದ ಬಹುತೇಕ ಕರೆಗಳು ಅಕ್ರಮ ಮದ್ಯ ಮಾರಾಟದ ದೂರುಗಳನ್ನೇ ಕುರಿತದ್ದಾಗಿದ್ದವು.
ತಾಳ್ಮೆ, ಸಂಯಮದಿಂದ ನಾಗರಿಕರ ಅಹವಾಲುಗಳನ್ನು ಆಲಿಸಿದ ಎನ್. ವಿಷ್ಣುವರ್ಧನ್, ಅವುಗಳಿಗೆ ಪ್ರತಿಕ್ರಿಯಿಸಿ ಶೀಘ್ರದಲ್ಲೇ ಹಳ್ಳಿಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವುದಾಗಿ ಭರವಸೆ ನೀಡಿದರಲ್ಲದೆ, ಪೊಲೀಸರು, ಅಬಕಾರಿ ಇಲಾಖೆ ಅಬಕಾರಿಗಳ ಕಣ್ತಪ್ಪಿಸಿ ಮದ್ಯ ಮಾರಾಟ ಮಾಡುವವರನ್ನು ಪತ್ತೆಹಚ್ಚಲು ವಿಶೇಷ ತಂಡ ರಚನೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದರು.
ಫೋನ್-ಇನ್‌ನಲ್ಲಿ ವಿಷ್ಣುವರ್ಧನ್ ಅವರು ಒಂದು ಗಂಟೆಗೂ ಹೆಚ್ಚು ಕಾಲ ಜಿಲ್ಲೆಯ ನಾನಾ ಭಾಗಗಳಿಂದ ಬಂದ ಜನಸಾಮಾನ್ಯರ ಕರೆಗಳನ್ನು ಸ್ವೀಕರಿಸಿ ಪ್ರತಿಕ್ರಿಯಿಸಿದರು. ನಾಗರಿಕರು ಕೇಳಿದ ಪ್ರಶ್ನೆಗಳಿಗೆ ಸಮಾಧಾನದ ಉತ್ತರ ನೀಡುವ ಜತೆಗೆ ಮುಂದಿನ ದಿನಗಳಲ್ಲಿ ಇಲಾಖೆಯಿಂದ ಕೈಗೊಳ್ಳುವ ಕ್ರಮಗಳ ಕುರಿತು ಭರವಸೆಯ ಮಾತುಗಳನ್ನಾಡಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ದರೋಡೆ, ಕಳ್ಳತನ, ದೌರ್ಜನ್ಯಗಳ ಜೊತೆಗೆ ಬಡ, ಮಧ್ಯಮ ವರ್ಗಗಳ ಸಂಸಾರವನ್ನು ಹಾಳು ಮಾಡುವಂತಹ ಮದ್ಯ ಮಾರಾಟ ದಂಧೆಯಿಂದ ಬೇಸತ್ತು ಹೋಗಿದ್ದ ಹಳ್ಳಿಯ ಜನರು, . ತಮ್ಮೂರಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರನ್ನು ಪ್ರಶ್ನಿಸಲಾಗದ ಸಂಕಷ್ಟದಿಂದ ‘ ಆಂದೋಲನ’ ನೇರ ಫೋನ್-ಇನ್ ಕಾರ್ಯಕ್ರಮವನ್ನು ಸಮರ್ಥವಾಗಿ ಬಳಸಿಕೊಂಡರು.
ಬೆಳಿಗ್ಗೆ ೯ ಗಂಟೆಯಿಂದಲೇ ದೂರವಾಣಿ ಕರೆಗಳು ಬರಲಾರಂಭಿಸಿದ್ದವು. ಆದರೆ, ನಿಗದಿಯಂತೆ ಬೆಳಿಗ್ಗೆ ೧೧ಕ್ಕೆ ಕಾರ್ಯಕ್ರಮ ಶುರುವಾಗುತ್ತಿದ್ದಂತೆ ಬಿಡುವು ಇಲ್ಲದಂತೆ ನಿರಂತರವಾಗಿ ಕರೆಗಳು ಬಂದವು . ಕರೆ ಮಾಡಿದ ಬಹುತೇಕ ಮಂದಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ನಾವು ಅರ್ಜಿ ಕೊಟ್ಟು ಬಂದ ಮೇಲೆ ನಮ್ಮ ಮೇಲೆ ಧಮಕಿ ಹಾಕುತ್ತಾರೆ. ಹಲವೆಡೆ ಪೊಲೀಸರು, ಅಬಕಾರಿ ಇಲಾಖೆ ಅಬಕಾರಿಗಳಿಗೆ ವಿಷಯ ಗೊತ್ತಿದ್ದರೂ ಸುಮ್ಮನಾಗಿದ್ದಾರೆ ಎಂದು ದೂರಿದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ಎಸ್‌ಪಿ, ಈಗಾಗಲೇ ಸಾಕಷ್ಟು ದೂರುಗಳು ಬಂದಿವೆ. ಹಳ್ಳಿಗಳಲ್ಲಿ ಮದ್ಯ ಮಾರಾಟ ಮಾಡುವವರು ನಗರ ಪ್ರದೇಶದಿಂದಲೇ ಖರೀದಿಸಿ ಹೋಗುತ್ತಾರೆ. ಹಾಗಾಗಿ ಮುಂದೆ ಪ್ರತಿಯೊಂದು ಚೆಕ್‌ಪೋಸ್ಟ್, ಗ್ರಾಮ ಠಾಣೆಯ ಬಳಿ ಗಸ್ತು ಮಾಡಿ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ನಂತರ, ಕೆಲವರು ಸೈಬರ್ ಕ್ರ್ತ್ಯೈಂ ಬಗ್ಗೆ ದೂರಿತ್ತರು. ಅನಾಮಧೇಯ ಕರೆಗಳನ್ನು ಸ್ವೀಕರಿಸಿದ ತಕ್ಷಣ ನಮ್ಮ ಖಾತೆಯಿಂದ ಹಣ ಕಡಿತವಾಗುತ್ತದೆ. ನಮಗೆ ದೂರು ಕೊಡುವುದು ಗೊತ್ತಿಲ್ಲ, ಇದಕ್ಕೆ ಪರಿಹಾರ ಇಲ್ಲವೇ ಎಂದು ಪ್ರಶ್ನಿಸಿದಾಗ, ಅಪರಿಚಿತ ಕರೆಗಳನ್ನು ಸ್ವೀಕರಿಸಬಾರದು. ಒಂದು ವೇಳೆ ಸ್ವೀಕರಿಸಿದರೂ ಯಾವ ಮಾಹಿತಿ ಹಂಚಿಕೊಳ್ಳಬಾರದೆಂದು ಸಲಹೆ ನೀಡಿದರು.
ಸಮಸ್ಯೆ ಎದುರಾದರೆ ೧೧೨ ಸಂಪರ್ಕಿಸಿ
ಯಾವುದೇ ರೀತಿಯ ಸಮಸ್ಯೆ ಕಂಡು ಬಂದರೆ ತಕ್ಷಣವೇ ೧೧೨ ಸಂಖ್ಯೆಗೆ ಕರೆ ಮಾಡಿ. ಪೊಲೀಸರು ತಕ್ಷಣ ಸ್ಥಳಕ್ಕೆ ಬರುವರು. ದೂರು ನೀಡಿದ ವರ ಹೆಸರನ್ನು ಗೌಪ್ಯವಾಗಿಡಲಾಗುವುದು. ಉಚಿತ ಸಹಾಯವಾಣಿ ೧೧೨ಅನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು. -ಎನ್. ವಿಷ್ಣುವರ್ಧನ್
ರಸ್ತೆಯಲ್ಲಿ ಒಕ್ಕಣೆ ಮಾಡಿದರೆ ಕ್ರಮ
ವೆಂಕಟೇಶ್, ವಿಜಯನಗರ: ರಸ್ತೆಯಲ್ಲಿ ಧಾನ್ಯ ಒಕ್ಕಣೆಯನ್ನು ಪೊಲೀಸರು ತಡೆಯಬೇಕು.
ಎಸ್‌ಪಿ: ರಸ್ತೆಯಲ್ಲಿ ಒಕ್ಕಣೆ ಮಾಡದಂತೆ ರೈತರಿಗೆ ತಿಳಿ ಹೇಳಲಾಗುತ್ತಿದೆ. ಮಾತು ಕೇಳದವರ ವಿರುದ್ಧ ಕ್ರಮ ಜರುಗಿಸುತ್ತೇವೆ.
ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ರೇವಣ್ಣ…
ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…
ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…
ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು…
ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…