ಎಂ.ನಾರಾಯಣ
ತಿ.ನರಸೀಪುರ: ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಎಲ್ಲೆಲ್ಲೂ ಸಂಭ್ರಮ- ಸಡಗರ. ಹಿರಿಯರು- ಕಿರಿಯರೆನ್ನದೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಎಲ್ಲೆಡೆ ಪಟಾಕಿ ಖರೀದಿ ಜೋರಾಗಿದೆ. ತಾಲ್ಲೂಕಿನಲ್ಲಿ ತುಂತುರು ಮಳೆ ಸುರಿಯುತ್ತಿದ್ದರೂ ಜನರು ಪಟಾಕಿ ಖರೀದಿಯಲ್ಲಿ ಉತ್ಸಾಹ ದಿಂದ ತೊಡಗಿರುವುದು ಕಂಡುಬಂತು.
ಕೊಳ್ಳೇಗಾಲ- ತಲಕಾಡು ಮುಖ್ಯ ರಸ್ತೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಮುಂಭಾಗವಿರುವ ಖಾಲಿ ನಿವೇಶನದ ಜಾಗದಲ್ಲಿ ತಾತ್ಕಾಲಿಕವಾಗಿ ಪಟಾಕಿ ಮಳಿಗೆಗಳನ್ನು ನಿರ್ಮಿಸಿದ್ದು, ಈ ಅಂಗಡಿಗಳಲ್ಲಿ ಖರೀದಿ ಜೋರಾಗಿದೆ.
ಈ ಬಾರಿ ಪಟಾಕಿಗಳ ಬೆಲೆ ಕಳೆದ ವರ್ಷಕ್ಕಿಂತ ಸ್ವಲ್ಪ ಜಾಸ್ತಿಯಾಗಿರುವುದು ಕಂಡುಬಂದಿದೆ. ಪ್ರತಿ ವರ್ಷ ಕಾವೇರಿ ಲಾಡ್ಜ್ ಮೈದಾನದಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಲಾಗುತ್ತಿತ್ತು. ಆದರೆ, ಈ ಬಾರಿ ಪುರಸಭೆಯು ಸೂಚಿಸಿರುವ ಪ್ರದೇಶದಲ್ಲಿ ಮಾತ್ರ ಪಟಾಕಿ ಮಾರಲು ಅವಕಾಶವಿದೆ. ಜನರು ಕೂಡ ಇಲ್ಲಿಂದ ಮಾತ್ರ ಖರೀದಿಸಬೇಕು ಎಂದು ಪುರಸಭಾ ಅಧಿಕಾರಿಗಳು ತಿಳಿಸಿದ್ದಾರೆ.
” ಬುಧವಾರ ಪಟಾಕಿಗಳ ಮಾರಾಟ ಹೆಚ್ಚಾಗುವ ನಿರೀಕ್ಷೆ ಇದೆ. ಗ್ರಾಮೀಣ ಭಾಗದಿಂದ ಜನರು ಪಟಾಕಿ ಖರೀದಿಗೆ ಬರುತ್ತಿದ್ದಾರೆ.”
-ಮಹದೇವಸ್ವಾಮಿ, ಪಟಾಕಿ ಮಾರಾಟಗಾರರು
ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ”…
ಬೆಂಗಳೂರು: ಜನವರಿ.16ರಂದು ನಾನು ದೆಹಲಿಗೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ…
ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು…
ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(45)…
ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…
ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ…