Mysore
21
broken clouds

Social Media

ಗುರುವಾರ, 10 ಅಕ್ಟೋಬರ್ 2024
Light
Dark

ಅಪಾಯಕಾರಿಯಾಗಿರುವ ವಿದ್ಯುತ್ ಕಂಬಗಳು

ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಸಂಕಷ್ಟ

ವಾಸು ವಿ. ಹೊಂಗನೂರು

ಮೈಸೂರು: ನಗರದ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ರಸ್ತೆ ವಿಭಜಕದ ಮಧ್ಯ ಭಾಗದಲ್ಲಿ ಅಳವಡಿಸಿರುವ ಎರಡು ವಿದ್ಯುತ್ ಕಂಬಗಳು ಬೀಳುವ ಸ್ಥಿತಿಯಲ್ಲಿದ್ದರೂ ವಿದ್ಯುತ್ ಇಲಾಖೆಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಧಿಕಾರಿಗಳು ಅದನ್ನು ಸರಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.

ಮೈಸೂರು-ಕೊಡಗು ಪ್ರಮುಖ ಹೆದ್ದಾರಿಯಾದ ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ವಾಹನ ಸವಾರರ ಮೇಲೇನಾದರೂ ವಿದ್ಯುತ್‌ ಕಂಬಗಳು ಬಿದ್ದರೆ ಅನಾಹುತ ಸಂಭವಿಸುವ ಅಪಾಯವಿದೆ.

ದಸರಾ ಹಬ್ಬಕ್ಕಾಗಿ ಕೋಟ್ಯಂತರ ರೂ. ಖರ್ಚು ಮಾಡುವ ಅಧಿಕಾರಿಗಳು ವಿದ್ಯುತ್‌ ಕಂಬವನ್ನು ಸರಿಪಡಿಸದೇ ಜನರ ಪ್ರಾಣದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ವಿದ್ಯುತ್ ದೀಪಗಳಿಲ್ಲ: ಈ ರಸ್ತೆಯಲ್ಲಿರುವ ಎಲ್ಲಾ ವಿದ್ಯುತ್ ಕಂಬಗಳಲ್ಲಿಯೂ ಬಲ್ಬ್‌ಗಳು ಕಾಣೆಯಾಗಿವೆ. ರಾತ್ರಿ ವೇಳೆ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಅಪಘಾತವಾದರೆ ಯಾರು ಹೊಣೆ ಎಂಬಂತಾಗಿದೆ.

ಅದ್ದೂರಿ ದಸರಾ ಆಚರಣೆಗಾಗಿ ಸರ್ಕಾರ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ. ನಗರದಾದ್ಯಂತ ಬೀದಿ ದೀಪ, ರಸ್ತೆ ಮೊದಲಾದ ಮೂಲ ಸೌಕರ್ಯಗಳ ಬಗ್ಗೆಯೂ ಗಮನ ಹರಿಸಿದರೆ
ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ಶಿವರಾಜ್, ಮೈಸೂರು

ನಗರದ ವಿಜಯನಗರ ಮೊದಲ ಹಂತ, ಕೆಆರ್ ಸಾಗರ ರಸ್ತೆ ಮುಂತಾದ ಕಡೆಗಳಲ್ಲಿ ವಿದ್ಯುತ್‌ ಕಂಬಗಳು ವಾಲಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧಿಕಾರಿಗಳು ಕೂಡಲೇ ವಿದ್ಯುತ್‌ ಕಂಬಗಳನ್ನು ಬದಲಿಸಲು ಕ್ರಮ ಕೈಗೊಳ್ಳಬೇಕಾಗಿದೆ.
• ದಿನೇಶ್ ಗೌಡ, ಸ್ಥಳೀಯರು

 

Tags: