ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಸಂಕಷ್ಟ
ವಾಸು ವಿ. ಹೊಂಗನೂರು
ಮೈಸೂರು: ನಗರದ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ರಸ್ತೆ ವಿಭಜಕದ ಮಧ್ಯ ಭಾಗದಲ್ಲಿ ಅಳವಡಿಸಿರುವ ಎರಡು ವಿದ್ಯುತ್ ಕಂಬಗಳು ಬೀಳುವ ಸ್ಥಿತಿಯಲ್ಲಿದ್ದರೂ ವಿದ್ಯುತ್ ಇಲಾಖೆಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಧಿಕಾರಿಗಳು ಅದನ್ನು ಸರಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.
ಮೈಸೂರು-ಕೊಡಗು ಪ್ರಮುಖ ಹೆದ್ದಾರಿಯಾದ ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ವಾಹನ ಸವಾರರ ಮೇಲೇನಾದರೂ ವಿದ್ಯುತ್ ಕಂಬಗಳು ಬಿದ್ದರೆ ಅನಾಹುತ ಸಂಭವಿಸುವ ಅಪಾಯವಿದೆ.
ದಸರಾ ಹಬ್ಬಕ್ಕಾಗಿ ಕೋಟ್ಯಂತರ ರೂ. ಖರ್ಚು ಮಾಡುವ ಅಧಿಕಾರಿಗಳು ವಿದ್ಯುತ್ ಕಂಬವನ್ನು ಸರಿಪಡಿಸದೇ ಜನರ ಪ್ರಾಣದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ವಿದ್ಯುತ್ ದೀಪಗಳಿಲ್ಲ: ಈ ರಸ್ತೆಯಲ್ಲಿರುವ ಎಲ್ಲಾ ವಿದ್ಯುತ್ ಕಂಬಗಳಲ್ಲಿಯೂ ಬಲ್ಬ್‌ಗಳು ಕಾಣೆಯಾಗಿವೆ. ರಾತ್ರಿ ವೇಳೆ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಅಪಘಾತವಾದರೆ ಯಾರು ಹೊಣೆ ಎಂಬಂತಾಗಿದೆ.
ಅದ್ದೂರಿ ದಸರಾ ಆಚರಣೆಗಾಗಿ ಸರ್ಕಾರ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ. ನಗರದಾದ್ಯಂತ ಬೀದಿ ದೀಪ, ರಸ್ತೆ ಮೊದಲಾದ ಮೂಲ ಸೌಕರ್ಯಗಳ ಬಗ್ಗೆಯೂ ಗಮನ ಹರಿಸಿದರೆ
ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ಶಿವರಾಜ್, ಮೈಸೂರು
ನಗರದ ವಿಜಯನಗರ ಮೊದಲ ಹಂತ, ಕೆಆರ್ ಸಾಗರ ರಸ್ತೆ ಮುಂತಾದ ಕಡೆಗಳಲ್ಲಿ ವಿದ್ಯುತ್ ಕಂಬಗಳು ವಾಲಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧಿಕಾರಿಗಳು ಕೂಡಲೇ ವಿದ್ಯುತ್ ಕಂಬಗಳನ್ನು ಬದಲಿಸಲು ಕ್ರಮ ಕೈಗೊಳ್ಳಬೇಕಾಗಿದೆ.
• ದಿನೇಶ್ ಗೌಡ, ಸ್ಥಳೀಯರು
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…