ಎಸ್.ಪ್ರಶಾಂತ್
ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಚಿಕಿತ್ಸೆ ವ್ಯವಸ್ಥೆ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ
ಮೈಸೂರು: ದಸರಾ ಮಹೋತ್ಸವ ವೀಕ್ಷಿಸಲು ವಿವಿಧೆಡೆಗಳಿಂದ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅರಿವು ಮೂಡಿಸುತ್ತಿದೆ.
ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ, ಮೃಗಾಲಯ, ಅಂಬಾವಿಲಾಸ ಅರಮನೆ, ಚಾಮುಂಡಿಬೆಟ್ಟ ಸೇರಿದಂತೆ ಹಲವೆಡೆ ಜನರು ಸೇರುವುದು ಸಹಜ. ಇಂತಹ ಸ್ಥಳಗಳಲ್ಲಿ ಪ್ರವಾಸಿಗರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದಲ್ಲದೆ, ಸುತ್ತಾಟದ ವೇಳೆ ಯಾರಾದರೂ ಅಸ್ವಸ್ಥಗೊಂಡರೆ ಅಥವಾ ಅನಾರೋಗ್ಯಕ್ಕೆ ಒಳಗಾದರೆ ಅಂತಹವರಿಗೆ ಪ್ರಥಮ ಚಿಕಿತ್ಸೆ ನೀಡಲಾಗುತ್ತದೆ.
ಅಧಿಕ ರಕ್ತದೊತ್ತಡ, ಮಧುಮೇಹ, ಮೂತ್ರಪಿಂಡ ವೈಫಲ್ಯದಂತಹಕಾಯಿಲೆಗಳಿಗೆ ಮನುಷ್ಯನ ಜೀವನಶೈಲಿಯಲ್ಲಿ ಆಗಿರುವ ಬದಲಾವಣೆ ಕಾರಣ ಎಂಬುದರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.
ಅಂಗಾಂಗ ದಾನದ ಮಾಹಿತಿ: ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಳಿಗೆಯಲ್ಲಿ ಅಂಗಾಂಗ ದಾನ ಮಾಡುವ ಬಗ್ಗೆ ಅರಿವು ಮೂಡಿಸುವುದು, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಪುನೀತ್ ರಾಜ್‌ಕುಮಾರ್ ಹೃದಯ ಸಂಜೀವಿನಿ ಯೋಜನೆಗಳ ಕುರಿತು ಹಾಗೂ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬೆಟ್ಟದ ಪರಿಸರದಲ್ಲಿ ವಾಸ ಮಾಡುವ ಜನರಿಗೆ ತಕ್ಷಣ ಆರೋಗ್ಯ ಸೇವೆ ಲಭ್ಯವಾಗಬೇಕು ಎಂಬ ದೃಷ್ಟಿಯಿಂದ ಹತ್ತಿರದ ಆಸ್ಪತ್ರೆಗಳಲ್ಲಿ ಟಿವಿ ಮೆಡಿಸನ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.
ಉಚಿತ ತಪಾಸಣೆ: ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣ, ಮೃಗಾಲಯ, ಚಾಮುಂಡಿ ಬೆಟ್ಟ, ಜೆ.ಕೆ.ಮೈದಾನ, ರೈಲು ನಿಲ್ದಾಣ, ನಗರ ಬಸ್ ನಿಲ್ದಾಣ ಹಾಗೂ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಅಂಗಾಂಗ ದಾನ, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಪುನೀತ್ ರಾಜ್ ಕುಮಾರ್ ಹೃದಯ ಸಂಜೀವಿನಿ ಯೋಜನೆಗಳ ಕುರಿತು ಮಾಹಿತಿ ನೀಡಲಾಗುತ್ತಿದೆ.
” ದಸರಾ ನೋಡಲು ಸಹಸ್ರಾರು ಪ್ರವಾಸಿಗರು ಮೈಸೂರು ನಗರಕ್ಕೆ ಬರುವುದರಿಂದ ಸೂಕ್ತ ಸ್ಥಳಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಇನ್ನಿತರೆ ಕಾಯಿಲೆಗಳ ಗುಣಲಕ್ಷಣಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.”
ಡಾ.ಪಿ.ಸಿ.ಕುಮಾರಸ್ವಾಮಿ, ಡಿಎಚ್‌ಒ
” ದಸರಾ ಸಂದರ್ಭದಲ್ಲಿ ಬೇರೆ ಬೇರೆ ರಾಜ್ಯ ಹಾಗೂ ದೇಶ, ವಿದೇಶಗಳಿಂದ ಮೈಸೂರಿಗೆ ಬರುವವರಿಗೆ ಹಾಗೂ ಸ್ಥಳೀಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಅಗತ್ಯವಿದ್ದಲ್ಲಿ ಪ್ರಥಮ ಚಿಕಿತ್ಸೆ ಒದಗಿಸುವ ಆರೋಗ್ಯ ಇಲಾಖೆಯ ಪ್ರಯೋಗ ವಿಶೇಷವಾಗಿದ್ದು, ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು.”
-ಶಾರದಾ ಮಂಜು, ಸ್ಥಳೀಯರು
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…