ಪ್ರಮುಖ ವೃತ್ತಗಳಿಗೆ ಸುಣ್ಣ-ಬಣ್ಣ, ದೀಪಾಲಂಕಾರ; ರಸ್ತೆ,ಫುಟ್‌ಪಾತ್‌ಗಳ ದುರಸ್ತಿ ಕಾರ್ಯ ಚುರುಕು
ಮೈಸೂರು: ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆಯೇ ಅರಮನೆ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.
ಅರಮನೆ ಸುತ್ತಮುತ್ತಲ ಪ್ರದೇಶಗಳಲ್ಲಿ ಅರಮನೆ ನಗರಿಯನ್ನು ಸುಂದರಗೊಳಿಸುವ ಕಾಮಗಾರಿಯನ್ನು ಮೈಸೂರು ನಗರಪಾಲಿಕೆ ಶುರು ಮಾಡಿದೆ. ಅರಮನೆ ಆವರಣದ ಜಯಮಾರ್ತಾಂಡ ದ್ವಾರ, ಬಲರಾಮ ದ್ವಾರ, ಅರಮನೆ ಮಂಡಳಿ ಕಚೇರಿ ಎದುರು, ಆನೆಗೆ ಅಂಬಾರಿ ಕಟ್ಟುವ ಜಾಗದಲ್ಲಿ ಅಳವಡಿಸಿರುವ ಗ್ರಿಲ್‌ಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದೆ. ಹಾಗೆಯೇ ಉದ್ಯಾನವನದಲ್ಲಿ ಹೊಸ ಹೂವಿನ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ.
ದಸರಾ ಉದ್ಘಾಟನೆ ಹೊತ್ತಿಗೆ ಅರಮನೆಯ ಎದುರಿನ ಅಂಗಳ, ಉದ್ಯಾನವನ್ನು ಹೂವುಗಳ ರಾಶಿಯಿಂದ ಕಂಗೊಳಿಸುವಂತೆ ಮಾಡುವ ಕೆಲಸ ನಡೆಯುತ್ತಿದೆ. ಅದೇ ರೀತಿ ಜಯ ಮಾರ್ತಾಂಡ ದ್ವಾರ ಮೊದಲಾದ ಕಡೆಗಳಲ್ಲಿ ಕೆಟ್ಟು ಹೋಗಿರುವ ವಿದ್ಯುತ್ ಬಲ್ಬ್‌ಗಳನ್ನು ಬದಲಿಸಿ ಹೊಸದಾಗಿ ಅಳವಡಿಸುವುದು, ಗೋಪುರಗಳಿಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿರುವುದನ್ನು ಕಾಣಬಹುದಾಗಿದೆ.
೯ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ: ನಗರದ ಸೌಂದರ್ಯಕ್ಕೆ ಪ್ರಮುಖ ಪಾತ್ರ ವಹಿಸಿರುವ ನಗರ ಪಾಲಿಕೆಯು ೯ ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಆರಂಭಿಸಿದೆ. ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಬನ್ನಿಮಂಟಪ ರಸ್ತೆ, ಕೋಟೆ ಮಾರಮ್ಮ ದೇವಸ್ಥಾನದ ರಸ್ತೆ, ಹಾರ್ಡಿಂಜ್ ವೃತ್ತ, ಮೈಸೂರು ವಿವಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಕಲಾಮಂದಿರದ ರಸ್ತೆ, ಚಾಮುಂಡಿವಿಹಾರ ಕ್ರೀಡಾಂಗಣದ ರಸ್ತೆ ಬದಿಗಳಲ್ಲಿ ಇರುವ ಫುಟ್‌ಪಾತ್‌ಗಳ ದುರಸ್ತಿ, ಬಣ್ಣ ಬಳಿಯುವ ಕೆಲಸ ಮಾಡಲಾಗುತ್ತಿದೆ.
ನಗರದ ಪ್ರಮುಖ ವೃತ್ತಗಳಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಚಾಮರಾಜೇಂದ್ರ ಒಡೆಯರ್ವೃತ್ತ, ಜಯಚಾಮರಾಜ ಒಡೆಯರ್ ವೃತ್ತಗಳಿಗೆ ಬಣ್ಣ ಬಣ್ಣದ ದೀಪಾಲಂಕಾರ ಮಾಡಲು ಕಾರ್ಮಿಕರು ಕಾಮಗಾರಿ ಆರಂಭಿಸಿ ಪಕ್ಷಿಗಳು ಕಟ್ಟಿದ್ದ ಗೂಡುಗಳನ್ನು ತೆಗೆದು ಶುಚಿಗೊಳಿಸಿ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ
” ನಗರದಲ್ಲಿ ಅಂದ ಚೆಂದದಿಂದ ಕಣ್ಮನ ಸೆಳೆಯುವ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯದಲ್ಲಿ ೨೦೦ಕ್ಕೂ ಹೆಚ್ಚು ಕಾರ್ಮಿಕರು ತೊಡಗಿದ್ದಾರೆ. ಚಾಮರಾಜ ಜೋಡಿ ರಸ್ತೆ, ಹಾರ್ಡಿಂಜ್ ವೃತ್ತ, ರಾಮಸ್ವಾಮಿ ವೃತ್ತ, ಲಲಿತಮಹಲ್ ರಸ್ತೆ,ಸಯ್ಯಾಜಿರಾವ್ ರಸ್ತೆಯಲ್ಲಿರುವ ಮರಗಳಿಗೆ ದೀಪಾಲಂಕಾರ ಮಾಡಲಾಗುತ್ತಿದೆ. ಬಹುಬೇಗನೆ ಕೆಲಸ ಮುಗಿಸಲು ಸಣ್ಣ ಸಣ್ಣ ಮೊತ್ತದಿಂದ ದೊಡ್ಡ ಮೊತ್ತದವರೆಗೂ ಪ್ರತ್ಯೇಕ ಟೆಂಡರ್ ನೀಡಲಾಗಿದೆ. ಇದರಿಂದಾಗಿ ತಮಗೆ ಸಿಕ್ಕ ಪ್ರದೇಶಗಳಲ್ಲಿ ಗುತ್ತಿಗೆದಾರರು ಲೈಟಿಂಗ್ಸ್ ಅಳವಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.”
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…