Andolana originals

ದಸರಾ: ಸಿಂಗಾರಗೊಳ್ಳುತ್ತಿರುವ ಸಾಂಸ್ಕೃತಿಕ ನಗರಿ

ಪ್ರಮುಖ ವೃತ್ತಗಳಿಗೆ ಸುಣ್ಣ-ಬಣ್ಣ, ದೀಪಾಲಂಕಾರ; ರಸ್ತೆ,ಫುಟ್‌ಪಾತ್‌ಗಳ ದುರಸ್ತಿ ಕಾರ್ಯ ಚುರುಕು

ಮೈಸೂರು: ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆಯೇ ಅರಮನೆ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.

ಅರಮನೆ ಸುತ್ತಮುತ್ತಲ ಪ್ರದೇಶಗಳಲ್ಲಿ ಅರಮನೆ ನಗರಿಯನ್ನು ಸುಂದರಗೊಳಿಸುವ ಕಾಮಗಾರಿಯನ್ನು ಮೈಸೂರು ನಗರಪಾಲಿಕೆ ಶುರು ಮಾಡಿದೆ. ಅರಮನೆ ಆವರಣದ ಜಯಮಾರ್ತಾಂಡ ದ್ವಾರ, ಬಲರಾಮ ದ್ವಾರ, ಅರಮನೆ ಮಂಡಳಿ ಕಚೇರಿ ಎದುರು, ಆನೆಗೆ ಅಂಬಾರಿ ಕಟ್ಟುವ ಜಾಗದಲ್ಲಿ ಅಳವಡಿಸಿರುವ ಗ್ರಿಲ್‌ಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದೆ. ಹಾಗೆಯೇ ಉದ್ಯಾನವನದಲ್ಲಿ ಹೊಸ ಹೂವಿನ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ.

ದಸರಾ ಉದ್ಘಾಟನೆ ಹೊತ್ತಿಗೆ ಅರಮನೆಯ ಎದುರಿನ ಅಂಗಳ, ಉದ್ಯಾನವನ್ನು ಹೂವುಗಳ ರಾಶಿಯಿಂದ ಕಂಗೊಳಿಸುವಂತೆ ಮಾಡುವ ಕೆಲಸ ನಡೆಯುತ್ತಿದೆ. ಅದೇ ರೀತಿ ಜಯ ಮಾರ್ತಾಂಡ ದ್ವಾರ ಮೊದಲಾದ ಕಡೆಗಳಲ್ಲಿ ಕೆಟ್ಟು ಹೋಗಿರುವ ವಿದ್ಯುತ್ ಬಲ್ಬ್‌ಗಳನ್ನು ಬದಲಿಸಿ ಹೊಸದಾಗಿ ಅಳವಡಿಸುವುದು, ಗೋಪುರಗಳಿಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

೯ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ: ನಗರದ ಸೌಂದರ್ಯಕ್ಕೆ ಪ್ರಮುಖ ಪಾತ್ರ ವಹಿಸಿರುವ ನಗರ ಪಾಲಿಕೆಯು ೯ ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಆರಂಭಿಸಿದೆ. ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಬನ್ನಿಮಂಟಪ ರಸ್ತೆ, ಕೋಟೆ ಮಾರಮ್ಮ ದೇವಸ್ಥಾನದ ರಸ್ತೆ, ಹಾರ್ಡಿಂಜ್ ವೃತ್ತ, ಮೈಸೂರು ವಿವಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಕಲಾಮಂದಿರದ ರಸ್ತೆ, ಚಾಮುಂಡಿವಿಹಾರ ಕ್ರೀಡಾಂಗಣದ ರಸ್ತೆ ಬದಿಗಳಲ್ಲಿ ಇರುವ ಫುಟ್‌ಪಾತ್‌ಗಳ ದುರಸ್ತಿ, ಬಣ್ಣ ಬಳಿಯುವ ಕೆಲಸ ಮಾಡಲಾಗುತ್ತಿದೆ.

ನಗರದ ಪ್ರಮುಖ ವೃತ್ತಗಳಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಚಾಮರಾಜೇಂದ್ರ ಒಡೆಯರ್ವೃತ್ತ, ಜಯಚಾಮರಾಜ ಒಡೆಯರ್ ವೃತ್ತಗಳಿಗೆ ಬಣ್ಣ ಬಣ್ಣದ ದೀಪಾಲಂಕಾರ ಮಾಡಲು ಕಾರ್ಮಿಕರು ಕಾಮಗಾರಿ ಆರಂಭಿಸಿ ಪಕ್ಷಿಗಳು ಕಟ್ಟಿದ್ದ ಗೂಡುಗಳನ್ನು ತೆಗೆದು ಶುಚಿಗೊಳಿಸಿ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ

” ನಗರದಲ್ಲಿ ಅಂದ ಚೆಂದದಿಂದ ಕಣ್ಮನ ಸೆಳೆಯುವ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯದಲ್ಲಿ ೨೦೦ಕ್ಕೂ ಹೆಚ್ಚು ಕಾರ್ಮಿಕರು ತೊಡಗಿದ್ದಾರೆ. ಚಾಮರಾಜ ಜೋಡಿ ರಸ್ತೆ, ಹಾರ್ಡಿಂಜ್ ವೃತ್ತ, ರಾಮಸ್ವಾಮಿ ವೃತ್ತ, ಲಲಿತಮಹಲ್ ರಸ್ತೆ,ಸಯ್ಯಾಜಿರಾವ್ ರಸ್ತೆಯಲ್ಲಿರುವ ಮರಗಳಿಗೆ ದೀಪಾಲಂಕಾರ ಮಾಡಲಾಗುತ್ತಿದೆ. ಬಹುಬೇಗನೆ ಕೆಲಸ ಮುಗಿಸಲು ಸಣ್ಣ ಸಣ್ಣ ಮೊತ್ತದಿಂದ ದೊಡ್ಡ ಮೊತ್ತದವರೆಗೂ ಪ್ರತ್ಯೇಕ ಟೆಂಡರ್ ನೀಡಲಾಗಿದೆ. ಇದರಿಂದಾಗಿ ತಮಗೆ ಸಿಕ್ಕ ಪ್ರದೇಶಗಳಲ್ಲಿ ಗುತ್ತಿಗೆದಾರರು ಲೈಟಿಂಗ್ಸ್ ಅಳವಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.”

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago