Andolana originals

ದಸರಾ: ರಾಜಪಥದಲ್ಲಿ ಅಂಬಾರಿ ಸಂಚಾರ!

ಪ್ರಶಾಂತ್ ಎಸ್.

ಕೆಎಸ್‌ಟಿಡಿಸಿ ವತಿಯಿಂದ ವ್ಯವಸ್ಥೆ; ಪ್ರತಿನಿತ್ಯ ೩ ಟ್ರಿಪ್‌ಗಳಲ್ಲಿ ಪ್ರಯಾಣ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ‘ಅಂಬಾರಿ ಬಸ್’ ಸೇವೆ ಆರಂಭವಾಗಿದ್ದು, ದಸರಾ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ನಗರವನ್ನು ವಿಶಿಷ್ಟ ಅಲಂಕಾರದೊಂದಿಗೆ ಬೆಳಗುವ ದಸರಾ ದೀಪಾಲಂಕಾರವನ್ನು ನೋಡುವುದು, ಅದರಲ್ಲಿಯೂ ಡಬಲ್ ಡೆಕ್ಕರ್ ಬಸ್‌ನ ಚಾವಣಿಯಲ್ಲಿ ಕುಳಿತು ಅರಮನೆ ಹಾಗೂ ರಾಜಬೀದಿ ಅಂದವನ್ನು ಕಣ್ತುಂಬಿಕೊಳ್ಳುವುದೇ ಒಂದು ಅನುಭವ. ಹೀಗೆ ದಸರಾ ಬೆಳಕಿನಲ್ಲಿ ಮೈಸೂರಿನ ಸೌಂದರ್ಯವನ್ನು ಸವಿಯಲು ಪ್ರವಾಸಿಗರು ಕಾತರರಾಗಿರುವನಡುವೆಯೇ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ತೆರೆದ ಚಾವಣಿಯ ಡಬಲ್ ಡೆಕ್ಕರ್ ಅಂಬಾರಿ ಬಸ್‌ಗಳನ್ನು ಸೇವೆಗೆ ಒದಗಿಸಿದೆ.

೪ ಬಸ್‌ಗಳ ಸೇವೆ: ಕೆಎಸ್ ಟಿಡಿಸಿ ಬಳಿ ಒಟ್ಟು ಆರು ಅಂಬಾರಿ ಬಸ್‌ಗಳಿದ್ದು, ಸದ್ಯ ಒಂದು ಮೈಸೂರಿನಲ್ಲಿ ಹಾಗೂ ಬೆಂಗಳೂರಿನಲ್ಲಿ ಐದು ಬಸ್ಗಳು ಕಾರ್ಯನಿರ್ವಹಿಸುತ್ತಿವೆ

” ಪ್ರವಾಸ ಪ್ಯಾಕೇಜ್‌ಗಳು, ‘ಅಂಬಾರಿ’ ಬಸ್ ಸೇವೆ ಹಾಗೂ ಬುಕ್ಕಿಂಗ್ ಸಂಬಂಽತ ಮಾಹಿತಿಗಾಗಿ ಪ್ರವಾಸಿಗರು ಕೆಎಸ್‌ಟಿಡಿಸಿ ಸಹಾಯವಾಣಿ ಸಂಖ್ಯೆ ೦೮೦-೪೩೩೪ ೪೩೩೪/೩೫/೩೬/೪೨, ೦೮೨೧-೨೪೨೩೬೫೨ ಅಥವಾ ೮೯೭೦೬ ೫೬೪೦೦ನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ www.kstdc.co ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ info@kstdc.
co ಇ-ಮೇಲ್ ಮಾಡಬಹುದು”

” ದಸರಾ ವಿದ್ಯುತ್ ದೀಪಾಲಂಕಾರ ಇರುವಷ್ಟು ದಿನಗಳ ಕಾಲ ಅಂಬಾರಿ ಬಸ್‌ಗಳನ್ನು ಸಂಚರಿಸಲು ಕೆಎಸ್‌ಟಿಡಿಸಿ ಯೋಜಿಸಿದೆ. ಒಟ್ಟು ೪ ಬಸ್‌ಗಳನ್ನು ಮೈಸೂರಿನಲ್ಲಿ ಸೇವೆಗೆ ನಿಯೋಜಿಸಲು ಸಿದ್ಧತೆ ನಡೆಸಲಾಗಿದೆ.”

-ಕೆ.ಆರ್.ಮಧುರಾಜ್, ವ್ಯವಸ್ಥಾಪಕ, ಕೆಎಸ್‌ಟಿಡಿಸಿ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ದಸರಾ ಖರ್ಚಿನ ಭಾರ ಇಳಿಸಿದ ಟಿಕೆಟ್ ಮಾರಾಟದ ಆದಾಯ

ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…

7 mins ago

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

18 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

19 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

19 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

19 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

20 hours ago