ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ದಶಮಂಟಪಗಳ ಶೋಭಾಯಾತ್ರೆ ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿರುವ ಆರೋಪದಡಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಮಿತಿಗಳ ಸುಮಾರು ೬೨ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಸಂಬಂಧ ದಶಮಂಟಪ ಸಮಿತಿ ಕಾನೂನು ಹೋರಾಟಕ್ಕೆ ಮುಂದಾಗಿದೆ.
ಐತಿಹಾಸಿಕ ಮಡಿಕೇರಿ ದಸರಾಕ್ಕೆ ವರ್ಣರಂಜಿತವಾಗಿ ತೆರೆ ಬಿದ್ದಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ರಾಜ್ಯದ ನಾನಾ ಭಾಗಗಳಿಂದ ಮಡಿಕೇರಿ ದಸರಾಕ್ಕೆ ಆಗಮಿಸುವ ಪ್ರವಾಸಿಗರು ದಶ ದೇವಾಲಯಗಳಿಂದ ಸಿದ್ಧಪಡಿಸುವ ಮಂಟಪಗಳಲ್ಲಿನ ಪೌರಾಣಿಕ ಕಥಾ ಸಾರಾಂಶ ನೋಡಲು ಮುಗಿಬೀಳುತ್ತಾರೆ. ಅಲ್ಲದೇ ಡಿಜೆ ಸೌಂಡ್‌ಗೆ ಹೆಜ್ಜೆ ಹಾಕಿ ಖುಷಿಪಡುತ್ತಾರೆ. ಆದರೆ ಈ ಬಾರಿ ಮಡಿಕೇರಿ ದಸರಾಕ್ಕೆ ಡಿಜೆ ಬಳಸಬಾರದು ಎಂದು ಪೊಲೀಸ್ ಇಲಾಖೆ ಮೊದಲೇ ಸೂಚಿಸಿತ್ತು. ಅದರಂತೆ ಈ ಬಾರಿ ಡಿಜೆ ಬಳಕೆಯನ್ನು ಕಡಿಮೆ ಮಾಡಲಾಗಿತ್ತು. ಇದರಿಂದ ಯುವ ಸಮೂಹ ನಿರಾಸೆಗೊಂಡಿತು.
ಈ ನಡುವೆ ರಾತ್ರಿ ೧೦ ಗಂಟೆ ನಂತರ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಧ್ವನಿವರ್ಧಕ ಬಳಸಬಾರದೆಂಬ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅ.೨ರಂದುದಶಮಂಟಪ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಸಲಾಗಿದೆ ಎಂದು ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನು ಓದಿ : ಹೊಂಗನೂರು: ಸಮರ್ಪಕ ರಸ್ತೆ, ಕುಡಿಯುವ ನೀರಿಲ್ಲದೆ ಸಾರ್ವಜನಿಕರ ಪರದಾಟ
ಮಡಿಕೇರಿ ನಗರದ ಪೇಟೆ ಶ್ರೀರಾಮಮಂದಿರ, ದೇಚೂರು ಶ್ರೀರಾಮ ಮಂದಿರ, ದಂಡಿನ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಕೋದಂಡ ರಾಮ ದೇವಾಲಯ ಮಂಟಪ ಸಮಿತಿಗಳ ತಲಾ ೬ ಮಂದಿ, ಕರವಲೆ ಭಗವತಿ, ಕೋಟೆ ಮಾರಿಯಮ್ಮ ಮಂಟಪ ಸಮಿತಿಗಳ ತಲಾ ೭ ಮಂದಿ, ಕೋಟೆ ಗಣಪತಿಯ ೮ ಮಂದಿ, ಚೌಡೇಶ್ವರಿ ಹಾಗೂ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ ಮಂಟಪ ಸಮಿತಿಯ ತಲಾ ೫ ಮಂದಿ ವಿರುದ್ಧ ಸೆಕ್ಷನ್ ೩೭, ೧೦೯, ಅಡಿ ಪ್ರಕರಣಗಳು ದಾಖಲಾಗಿವೆ.
ಈ ಸಂಬಂಧ ಇದೀಗ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಮುಂದಾಗಿದೆ. ಈಗಾಗಲೇವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ಪೊಲೀಸರು ನೀಡಿದ ನೋಟೀಸ್ ಅನ್ನು ಕೂಡ ಸ್ವೀಕರಿಸಿರುವ ಪದಾಧಿಕಾರಿಗಳು ವಕೀಲರ ಸಲಹೆಯಂತೆ ಕಾನೂನು ಹೋರಾಟ ನಡೆಸಲಿದ್ದಾರೆ.
” ೧೦ ಗಂಟೆಯವರೆಗೆ ಪೊಲೀಸ್ ಇಲಾಖೆ ಸಮಯ ನೀಡಿತ್ತು. ಆದರೆ, ಶೋಭಾಯಾತ್ರೆಗೆ ಧ್ವನಿವರ್ಧಕದ ಅವಶ್ಯವಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ೨ ಗಂಟೆ ಹೆಚ್ಚಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಅವರು ೭೦ ಡೆಸಿಬಲ್ ಬಳಸುವಂತೆ ಸೂಚನೆ ನೀಡಿದ್ದರು. ಅದನ್ನು ಪಾಲಿಸಲಾಗಿದೆ. ಆದರೂ ಡಿಜೆ ಬಳಸದ ಮಂಟಪಗಳಿಗೂ ನೋಟಿಸ್ ನೀಡಲಾಗಿದೆ. ಈ ಸಂಬಂಧ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಸಜ್ಜಾಗಿದ್ದು, ವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ವಕೀಲರ ಸೂಚನೆಯಿಂದ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.”
-ಹರೀಶ್ ಅಣ್ವೇಕರ್, ದಸರಾ ದಶಮಂಟಪ ಸಮಿತಿ ಅಧ್ಯಕ್ಷರು
” ಶೋಭಾಯಾತ್ರೆ ಸಂದರ್ಭದಲ್ಲಿ ಸರ್ಕಾರದ ಆದೇಶವನ್ನು ಪಾಲನೆ ಮಾಡಿದ್ದೇವೆ. ಆದರೂ ನೋಟಿಸ್ ನೀಡಲಾಗಿದೆ. ದಶಪಮಂಟಪ ಎಂಬುದು ದೊಡ್ಡ ಸಮಿತಿಯಿದೆ. ಪ್ರತಿ ಬಾರಿ ತಾಳ್ಮೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈಗಲೇ ಸರಿಮಾಡಿದರೆ ಉತ್ತಮ. ಇಲ್ಲದಿದ್ದರೆ ಮುಂಬರುವ ವರ್ಷ ತಕ್ಕ ಉತ್ತರ ನೀಡಬೇಕಾಗುತ್ತದೆ.”
-ಬಿ.ಎಂ.ರಾಜೇಶ್, ದಶಮಂಟಪ ಸಮಿತಿ ಗೌರವ ಅಧ್ಯಕ್ಷ
–ಎಸ್.ಎ.ಹುಸೇನ್
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…