Andolana originals

ಕಾನೂನು ಹೋರಾಟಕ್ಕೆ ಮುಂದಾದ ದಶಮಂಟಪ ಸಮಿತಿ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ದಶಮಂಟಪಗಳ ಶೋಭಾಯಾತ್ರೆ ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿರುವ ಆರೋಪದಡಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಮಿತಿಗಳ ಸುಮಾರು ೬೨ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಸಂಬಂಧ ದಶಮಂಟಪ ಸಮಿತಿ ಕಾನೂನು ಹೋರಾಟಕ್ಕೆ ಮುಂದಾಗಿದೆ.

ಐತಿಹಾಸಿಕ ಮಡಿಕೇರಿ ದಸರಾಕ್ಕೆ ವರ್ಣರಂಜಿತವಾಗಿ ತೆರೆ ಬಿದ್ದಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ರಾಜ್ಯದ ನಾನಾ ಭಾಗಗಳಿಂದ ಮಡಿಕೇರಿ ದಸರಾಕ್ಕೆ ಆಗಮಿಸುವ ಪ್ರವಾಸಿಗರು ದಶ ದೇವಾಲಯಗಳಿಂದ ಸಿದ್ಧಪಡಿಸುವ ಮಂಟಪಗಳಲ್ಲಿನ ಪೌರಾಣಿಕ ಕಥಾ ಸಾರಾಂಶ ನೋಡಲು ಮುಗಿಬೀಳುತ್ತಾರೆ. ಅಲ್ಲದೇ ಡಿಜೆ ಸೌಂಡ್‌ಗೆ ಹೆಜ್ಜೆ ಹಾಕಿ ಖುಷಿಪಡುತ್ತಾರೆ. ಆದರೆ ಈ ಬಾರಿ ಮಡಿಕೇರಿ ದಸರಾಕ್ಕೆ ಡಿಜೆ ಬಳಸಬಾರದು ಎಂದು ಪೊಲೀಸ್ ಇಲಾಖೆ ಮೊದಲೇ ಸೂಚಿಸಿತ್ತು. ಅದರಂತೆ ಈ ಬಾರಿ ಡಿಜೆ ಬಳಕೆಯನ್ನು ಕಡಿಮೆ ಮಾಡಲಾಗಿತ್ತು. ಇದರಿಂದ ಯುವ ಸಮೂಹ ನಿರಾಸೆಗೊಂಡಿತು.

ಈ ನಡುವೆ ರಾತ್ರಿ ೧೦ ಗಂಟೆ ನಂತರ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಧ್ವನಿವರ್ಧಕ ಬಳಸಬಾರದೆಂಬ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅ.೨ರಂದುದಶಮಂಟಪ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಸಲಾಗಿದೆ ಎಂದು ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿ :  ಹೊಂಗನೂರು: ಸಮರ್ಪಕ ರಸ್ತೆ, ಕುಡಿಯುವ ನೀರಿಲ್ಲದೆ ಸಾರ್ವಜನಿಕರ ಪರದಾಟ

ಮಡಿಕೇರಿ ನಗರದ ಪೇಟೆ ಶ್ರೀರಾಮಮಂದಿರ, ದೇಚೂರು ಶ್ರೀರಾಮ ಮಂದಿರ, ದಂಡಿನ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಕೋದಂಡ ರಾಮ ದೇವಾಲಯ ಮಂಟಪ ಸಮಿತಿಗಳ ತಲಾ ೬ ಮಂದಿ, ಕರವಲೆ ಭಗವತಿ, ಕೋಟೆ ಮಾರಿಯಮ್ಮ ಮಂಟಪ ಸಮಿತಿಗಳ ತಲಾ ೭ ಮಂದಿ, ಕೋಟೆ ಗಣಪತಿಯ ೮ ಮಂದಿ, ಚೌಡೇಶ್ವರಿ ಹಾಗೂ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ ಮಂಟಪ ಸಮಿತಿಯ ತಲಾ ೫ ಮಂದಿ ವಿರುದ್ಧ ಸೆಕ್ಷನ್ ೩೭, ೧೦೯, ಅಡಿ ಪ್ರಕರಣಗಳು ದಾಖಲಾಗಿವೆ.

ಈ ಸಂಬಂಧ ಇದೀಗ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಮುಂದಾಗಿದೆ. ಈಗಾಗಲೇವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ಪೊಲೀಸರು ನೀಡಿದ ನೋಟೀಸ್ ಅನ್ನು ಕೂಡ ಸ್ವೀಕರಿಸಿರುವ ಪದಾಧಿಕಾರಿಗಳು ವಕೀಲರ ಸಲಹೆಯಂತೆ ಕಾನೂನು ಹೋರಾಟ ನಡೆಸಲಿದ್ದಾರೆ.

” ೧೦ ಗಂಟೆಯವರೆಗೆ ಪೊಲೀಸ್ ಇಲಾಖೆ ಸಮಯ ನೀಡಿತ್ತು. ಆದರೆ, ಶೋಭಾಯಾತ್ರೆಗೆ ಧ್ವನಿವರ್ಧಕದ ಅವಶ್ಯವಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ೨ ಗಂಟೆ ಹೆಚ್ಚಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಅವರು ೭೦ ಡೆಸಿಬಲ್ ಬಳಸುವಂತೆ ಸೂಚನೆ ನೀಡಿದ್ದರು. ಅದನ್ನು ಪಾಲಿಸಲಾಗಿದೆ. ಆದರೂ ಡಿಜೆ ಬಳಸದ ಮಂಟಪಗಳಿಗೂ ನೋಟಿಸ್ ನೀಡಲಾಗಿದೆ. ಈ ಸಂಬಂಧ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಸಜ್ಜಾಗಿದ್ದು, ವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ವಕೀಲರ ಸೂಚನೆಯಿಂದ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.”

-ಹರೀಶ್ ಅಣ್ವೇಕರ್, ದಸರಾ ದಶಮಂಟಪ ಸಮಿತಿ ಅಧ್ಯಕ್ಷರು

” ಶೋಭಾಯಾತ್ರೆ ಸಂದರ್ಭದಲ್ಲಿ ಸರ್ಕಾರದ ಆದೇಶವನ್ನು ಪಾಲನೆ ಮಾಡಿದ್ದೇವೆ. ಆದರೂ ನೋಟಿಸ್ ನೀಡಲಾಗಿದೆ. ದಶಪಮಂಟಪ ಎಂಬುದು ದೊಡ್ಡ ಸಮಿತಿಯಿದೆ. ಪ್ರತಿ ಬಾರಿ ತಾಳ್ಮೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈಗಲೇ ಸರಿಮಾಡಿದರೆ ಉತ್ತಮ. ಇಲ್ಲದಿದ್ದರೆ ಮುಂಬರುವ ವರ್ಷ ತಕ್ಕ ಉತ್ತರ ನೀಡಬೇಕಾಗುತ್ತದೆ.”

-ಬಿ.ಎಂ.ರಾಜೇಶ್, ದಶಮಂಟಪ ಸಮಿತಿ ಗೌರವ ಅಧ್ಯಕ್ಷ

ಎಸ್.ಎ.ಹುಸೇನ್

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago