ಚಾಮರಾಜನಗರ: ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದಲೇ ತಿಳಿದುಕೊಳ್ಳಲು ಅರ್ಧ ದಿನವಿಡೀ ಓಡಾಡಿದ ಜಿಲ್ಲಾಮಟ್ಟದ ಅಧಿಕಾರಿಗಳು ಕೊನೆಗೂ ಗ್ರಾಮಸ್ಥರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾದರು.
‘ಮತಗಟ್ಟೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿಗಳನ್ನು ಮಾತ್ರ ವಶಕ್ಕೆ ಪಡೆದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡಿರುವ 6 ಆರೋಪಿಗಳು ಶರಣಾಗಬೇಕು. ಬಳಿಕ ಜೈಲಿನಲ್ಲಿರುವ ತಂದೆ, ತಾಯಂದಿರ ಪಟ್ಟಿ ಮಾಡಲಾಗುವುದು. ಈ ಸಂಬಂಧ ಡಿವೈಎಸ್ಪಿ ಧರ್ಮೇಂದ್ರ ಅವರು ಕ್ರಮ ವಹಿಸುವರು. ಗ್ರಾಮದ ಯಾರೊಬ್ಬರೂ ಭಯಪಡುವುದು ಬೇಡ, ಹೊರಗಡೆ ಇರುವವರು ಗ್ರಾಮಕ್ಕೆ ಮರಳಬೇಕು’ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
‘ಗ್ರಾಮದ ಮನೆ ಮನೆಗೂ ಭೇಟಿ ನೀಡಿ ಕುಟುಂಬಸ್ಥರ ಬಗ್ಗೆ ಮಾಹಿತಿ ಪಡೆದುಕೊಂಡು ಬಂದಿದ್ದೇವೆ. ಗ್ರಾಮಕ್ಕೆ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನು ದೊರಕಿಸಿಕೊಡಲು ಜಿಲ್ಲಾಡಳಿತ ಈಗಾಗಲೇ ಕ್ರಿಯಾ ಯೋಜನೆ ಮಾಡಿ ಸರ್ಕಾರಕ್ಕೆ ಕಳುಹಿಸಿದೆ. ಹಣಕಾಸು ಇಲಾಖೆಯಲ್ಲಿ ಅನುಮೋದನೆ ನೀಡಿದ ನಂತರ ಕಾಡಂಚಿನ ಗ್ರಾಮಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದು ಎಂದು ಶಿಲ್ಪಾ ನಾಗ್ ಭರವಸೆ ನೀಡಿದರು.
‘ಗ್ರಾಮದಲ್ಲಿ 16 ಮಕ್ಕಳಿದ್ದು ಅವರಿಗೆ ನೇರವಾಗಿ ಮುಂದಿನ ತರಗತಿಗಳಿಗೆ ಪ್ರವೇಶಾತಿ ಕೊಟ್ಟು, ತಾಲ್ಲೂಕಿನ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಸೇರಿಸಿ ಗುಣಮಟ್ಟದ ಶಿಕ್ಷಣ ಕೊಡಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.
‘ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡಲು ಕೆಲವು ಗ್ರಾಮಸ್ಥರು ಜಾಬ್ ಕಾರ್ಡ್ ಕೇಳಿದ್ದಾರೆ. ಇದಕ್ಕೆ ತಕ್ಕ ಕ್ರಮ ವಹಿಸಲಾಗುವುದು. ಗ್ರಾಮದಲ್ಲಿರುವ ಸೋಲಾರ್ ದೀಪ ದುರಸ್ತಿಗೊಳಿಸಲು ಸೆಸ್ಕ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ ಮನೆ ನಿರ್ಮಾಣಕ್ಕೂ ಅನುಕೂಲ ಮಾಡಿಕೊಡಲಾಗುವುದು’ ಎಂದು ಡಿಸಿ ‘ಆಂದೋಲನ’ಕ್ಕೆ ತಿಳಿಸಿದರು.
ಟ್ಯಾಂಕರ್ ಮೂಲಕ ನೀರು: ಇಂಡಿಗನತ್ತ ಗ್ರಾಮದ ಕೊಳವೆಬಾವಿಯ ನೀರನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಡಿದು ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ನಾಲ್ಕು ಕೊಳವೆ ಬಾವಿಗಳಿದ್ದು ನೀರು ಬರುತ್ತಿದೆ. ಆದರೂ ಕುಡಿಯುವ ನೀರಿನ ಸಮಸ್ಯೆ ಆಗಬಾರದೆಂದು ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದವರು ತಿಳಿಸಿದರು.
ಗ್ರಾಮದ ರೈತರು ತಮ್ಮ ಜಾನುವಾರುಗಳಿಗೆ ಮೇವು ಬೇಕೆಂದು ತಿಳಿಸಿದ್ದಾರೆ. ಈಗಾಗಲೇ ಎರಡು ಟನ್ ಮೇವು ವಿತರಣೆ ಮಾಡಲಾಗಿದೆ . ಮಳೆ ಬಂದು ಮೇವು ಬರುವವರೆಗೂ ಮೇವು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.
ಕುಟುಂಬದ ಯಜಮಾನ ಜೈಲು ಪಾಲಾಗಿರುವ ಮನೆಗಳಲ್ಲಿ ಮಹಿಳೆಯರು, ಮಕ್ಕಳು ಮತ್ತು ವಯೋವೃದ್ಧರ ಹಿತದೃಷ್ಟಿಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಶಿಶು ಪಾಲನ ಇಲಾಖೆಯ ಜಂಟಿ ಸಹಯೋಗದಲ್ಲಿ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.
ಅಧಿಕಾರಿಗಳ ಗಡಣ: ತಹಸಿಲ್ದಾರ್ ವೈ.ಕೆ ಗುರುಪ್ರಸಾದ್, ಡಿಎಚ್‌ಓ ಡಾ. ಚಿದಂಬರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಇಒ ಉಮೇಶ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್, ಟಿಹೆಚ್ ಒ ಡಾ. ಪ್ರಕಾಶ್, ಸಿಡಿಪಿಓ ನಂಜಮಣಿ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಕೇಶವಮೂರ್ತಿ ಪಿಡಿಒ ಕಿರಣ್, ಗ್ರಾಮ ಆಡಳಿತ ಅಧಿಕಾರಿ ವಿನೋದ್ ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…