Andolana originals

ಈಡೇರಿದ ಸಾಲಿಗ್ರಾಮ ಜನತೆಯ ದಶಕಗಳ ಬೇಡಿಕೆ

ಕೆ.ಟಿ.ಮೋಹನ್ ಕುಮಾರ್

ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಸಾಲಿಗ್ರಾಮ ಗ್ರಾಮ ಪಂಚಾಯಿತಿ

ಸಾಲಿಗ್ರಾಮ: ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಪಟ್ಟಣದ ಜನರ ಬಹುದಿನಗಳ ಬೇಡಿಕೆ ಈಗ ಈಡೇರಿದೆ.

ಸಾಲಿಗ್ರಾಮ ಈ ಹಿಂದೆ ನಗರಸಭೆಯಾಗಿತ್ತು. ಕಾರಣಾಂತರಗಳಿಂದ ಅದನ್ನು ಪಂಚಾಯಿತಿಯನ್ನಾಗಿ ಮಾರ್ಪಡಿಸಲಾಗಿತ್ತು. ಇದನ್ನು ಪುರಸಭೆಯಾಗಿ ಮಾರ್ಪಾಡು ಮಾಡಬೇಕೆಂದು ೧೯೭೫ರ ನ.೨೧ರಂದು ಅಂದಿನ ಮುಖ್ಯಮಂತ್ರಿ ಯಾಗಿದ್ದ ಡಿ.ದೇವರಾಜ ಅರಸು ಮತ್ತು ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದ ಹೆಚ್.ಎಂ.ಚನ್ನಬಸಪ್ಪ ಅವರುಗಳಿಗೆ ಅಂದಿನ ನಗರ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಮನವಿ ಸಲ್ಲಿಸಿದ್ದರು. ಅಂದಿನಿಂದ ಇಲ್ಲಿಯವರೆಗೂ ಬೇಡಿಕೆ ಈಡೇರಿರಲಿಲ್ಲ.

ಸಾಲಿಗ್ರಾಮ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೩೦ ಜನ ಸದಸ್ಯರಿದ್ದಾರೆ. ಪ್ರಸ್ತುತ ದಿನಗಳಲ್ಲಿ ಪಟ್ಟಣವು ಬಹಳ ವಿಸ್ತಾರವಾಗಿ ಬೆಳೆದಿದ್ದು, ೨೦ ಸಾವಿರಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ, ರಸ್ತೆ, ಮಾರುಕಟ್ಟೆ, ಮೂಲಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಪಟ್ಟಣವನ್ನು ಅಭಿವೃದ್ಧಿ ಪಡಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂಬುದು ಈ ಭಾಗದ ಜನರ ಬೇಡಿಕೆಯಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನ.೨೭ರಂದು ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವುದಕ್ಕೆ ಒಪ್ಪಿಗೆ ನೀಡಿದೆ. ಆ ಮೂಲಕ ಪಟ್ಟಣಕ್ಕೆ ಹೆಚ್ಚಿನ ಅನುದಾನ ಬರಲಿದ್ದು ಸರ್ವಾಂಗೀಣ ಅಭಿವೃದ್ಧಿಗೆ ಮುನ್ನುಡಿ ಬರೆದಂತಾಗಿದೆ. ಅದ ರೊಂದಿಗೆ ಈ ಭಾಗದ ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕ್ಷೇತ್ರದ ಶಾಸಕ ಡಿ.ರವಿಶಂಕರ್ ಅವರ ಅಧಿಕಾರ ಅವಧಿಯಲ್ಲಿ ಸಾಲಿ ಗ್ರಾಮವು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದೆ.

ಈ ಹಿಂದೆ ಕಾಂಗ್ರೆಸ್-ಜಾ.ದಳ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಂದಿನ ಪ್ರವಾಸೋದ್ಯಮ ಇಲಾಖೆ ಸಚಿವರಾಗಿದ್ದ ಸಾ.ರಾ.ಮಹೇಶ್ ಅವರು ಅಭಿವೃದ್ಧಿಯ ದೃಷ್ಟಿಕೋನದಿಂದ ಕೃಷ್ಣರಾಜನಗರ ತಾಲ್ಲೂಕನ್ನು ವಿಭಜಿಸಿ ಸಾಲಿಗ್ರಾಮವನ್ನು ನೂತನ ತಾಲ್ಲೂಕು ಕೇಂದ್ರವನ್ನಾಗಿ ಮಾಡಿದ್ದರು. ಸಾಲಿಗ್ರಾಮದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪಟ್ಟಣದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಆರಂಭಗೊಳ್ಳಬೇಕು. ಜೊತೆಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬುದು ಜನರ ಆಶಯವಾಗಿದೆ.

” ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿಮೇಲ್ದರ್ಜೆಗೇರಿಸಿರುವುದರಿಂದ ಪಟ್ಟಣದ ಜನತೆಯ ಬಹುದಶಕಗಳ ಬೇಡಿಕೆ ಈಡೇರಿದಂತಾಗಿದೆ. ಇದಕ್ಕೆ ಪ್ರಮುಖ ಕಾರಣರಾದ ಶಾಸಕ ಡಿ.ರವಿಶಂಕರ್ ಅವರಿಗೆ ಸಾಲಿಗ್ರಾಮ ಪಟ್ಟಣದ ಜನತೆಯ ಪರವಾಗಿ ಅಭಿನಂದನೆಗಳು.”

-ಕಂಠಿಕುಮಾರ್, ಅಧ್ಯಕ್ಷರು, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕ

ಆಂದೋಲನ ಡೆಸ್ಕ್

Recent Posts

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

17 mins ago

ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಅಂಕಾರ: ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…

43 mins ago

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್‌…

52 mins ago

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ

ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ…

60 mins ago

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

2 hours ago

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…

2 hours ago