Andolana originals

ಏ.25ಕ್ಕೆ ಮೈಸೂರು ಬೃಹತ್‌ ನಗರಪಾಲಿಕೆ ರಚನೆ ನಿರ್ಧಾರ

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಕೆ. ಬಿ. ರಮೇಶ್ ನಾಯಕ

ಮೈಸೂರು: ಹಲವು ದಿನಗಳಿಂದ ಎದುರು ನೋಡುತ್ತಿರುವ ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮೈಸೂರು ಮಹಾ ನಗರಪಾಲಿಕೆ ಯನ್ನಾಗಿ ಮೇಲ್ದರ್ಜೆಗೇರಿಸುವ ವಿಷಯ ಏ. 25ರಂದು ನಿರ್ಧಾರವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ರಚನೆ ಸಂಬಂಧ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿರುವುದರಿಂದ ಅಂದಿನ ಸಭೆ ಕುತೂಹಲ ಮೂಡಿಸಿದೆ. ಈ ಸಭೆಯಲ್ಲಿ ಗ್ರೇಟರ್ ಮೈಸೂರು ರಚನೆಗೆ ಒಲವು ತೋರಿದರೆ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಕ್ಕೆ ಜಿಲ್ಲಾಡಳಿತ ಬೇಕಾದ ತಯಾರಿ ಮಾಡಿಕೊಂಡಿದೆ.

ಒಂದು ವೇಳೆ ಗ್ರೇಟರ್ ಮೈಸೂರು ಪ್ರಸ್ತಾಪವನ್ನು ಮುಂದೂಡಿ ಚುನಾವಣೆ ನಡೆಸುವ ತೀರ್ಮಾನ ತೆಗೆದುಕೊಂಡರೆ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಸಂತಸ ಮೂಡಲಿದೆ.

ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ವರ್ಷದಿಂದ ವರ್ಷಕ್ಕೆ ನಗರದ ನಾಲ್ಕೂ ದಿಕ್ಕುಗಳಲ್ಲಿ ವಿಸ್ತಾರಗೊಂಡಿರುವುದರಿಂದ ಮುಂದಿನ 30-40 ವರ್ಷಗಳ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ನಗರಪಾಲಿಕೆಯನ್ನು ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮಹಾನಗರ ಪಾಲಿಕೆ ರಚನೆ ಮಾಡಬೇಕೆಂಬ ಕೂಗು ಎದ್ದಿತ್ತು. ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿ ಇದ್ದಾಗ ಈ ಪ್ರಸ್ತಾಪ ಚರ್ಚೆಗೆ ಬಂದಿತ್ತಾದರೂ ರಾಜ್ಯ ಸರ್ಕಾರಕ್ಕೆ ಅಧಿಕೃತವಾಗಿ ಪ್ರಸ್ತಾವನೆ ಕಳುಹಿಸಿರಲಿಲ್ಲ.

2025ರ ನ.14ರಂದು ಸದಸ್ಯರ ಐದು ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ನಂತರ ಪ್ರಾದೇಶಿಕ ಆಯುಕ್ತರನ್ನು ಆಡಳಿತಾಧಿಕಾರಿ ಯನ್ನಾಗಿ ನೇಮಿಸಲಾಗಿದೆ. ಅವಧಿ ಮುಗಿದ ಮೇಲೆ ಚುನಾವಣೆ ನಡೆಸಬೇಕಾಗಿತ್ತಾದರೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡ ಅವರು ಮೈಸೂರು ನಗರದ ಸುತ್ತಮುತ್ತಲ ಪ್ರದೇಶಗಳನ್ನು ಸೇರಿಸಿಕೊಂಡು ಬೃಹತ್ ಪಾಲಿಕೆ ಮಾಡಬೇಕೆಂಬ ಮನವಿ ಸಲ್ಲಿಸುವ ಜತೆಗೆ ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್. ಕೆ. ಅತೀಕ್ ಅವರು ಎರಡು ತಿಂಗಳ ಹಿಂದೆ ಅಧಿಕಾರಿಗಳ ಸಭೆ ನಡೆಸಿ ವರದಿ ಸಲ್ಲಿಸಲು ಆಗಮಿಸಬೇಕಿತ್ತಾದರೂ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು. ಇದೀಗ ಕಾಲು ನೋವಿನಿಂದ ಗುಣಮುಖರಾಗಿ ಮೂರು ತಿಂಗಳ ಬಳಿಕ ತವರು ಜಿಲ್ಲೆಗೆ ಆಗಮಿಸುತ್ತಿರುವ ಸಿದ್ದರಾಮಯ್ಯ ಅವರು 25ಕ್ಕೆ ಮಹತ್ವದ ಸಭೆ ನಡೆಸುವುದು ನಿಶ್ಚಿತವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ನಗರಾಭಿವೃದ್ಧಿ, ಪೌರಾಡಳಿತ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

ನಗರದ ಹೊರವಲಯದ ಹೂಟಗಳ್ಳಿ ನಗರಸಭೆ, ಕಡಕೊಳ, ಶ್ರೀರಾಂಪುರ, ಬೋಗಾದಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಆಡಳಿತಾಧಿಕಾರಿಗಳು ಆಡಳಿತ ನಿರ್ವಹಿಸುತ್ತಿದ್ದು, ಬೃಹತ್ ಮಹಾನಗರ ಪಾಲಿಕೆಯೊಂದಿಗೆ ಇವುಗಳ ಸೇರ್ಪಡೆಗೆ ಈಗಾಗಲೇ ಸಮ್ಮತಿ ಸಿಕ್ಕಿದೆ. ಅದೇ ರೀತಿ ಚಾಮುಂಡಿಬೆಟ್ಟ, ಇಲವಾಲ, ಸಿದ್ದಲಿಂಗಪುರದಲ್ಲೂ ಆಕ್ಷೇಪಣೆ ಇಲ್ಲವೆಂದು ನಿರ್ಣಯ ಕೈಗೊಂಡು ಜಿಲ್ಲಾಡಳಿತಕ್ಕೆ ಪತ್ರ ನೀಡಲಾಗಿದೆ. ಇದರಿಂದಾಗಿ ಬೃಹತ್ ಮಹಾನಗರ ಪಾಲಿಕೆ ರಚನೆಗೆ ಸಂಬಂಧಪಟ್ಟಂತೆ ಯಾವುದೇ ಆಕ್ಷೇಪಣೆಗಳು ಇಲ್ಲದಿರುವ ಬಗ್ಗೆ ಸಿಎಂಗೆ ಮಾಹಿತಿ ಒದಗಿಸಲಾಗುತ್ತದೆ ಎಂದು ಗೊತ್ತಾಗಿದೆ.

ಡಿಸಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ: ಸಿಎಂ ಸಭೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಮುಡಾ ಆಯುಕ್ತ ಎ. ಎನ್. ರಘನಂದನ್, ಉಪ ವಿಭಾಗಾಧಿಕಾರಿ ಕೆ. ಆರ್. ರಕ್ಷಿತ್, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ವಿ. ಪ್ರಿಯದರ್ಶಿನಿ, ಹೂಟಗಳ್ಳಿ ನಗರಸಭೆ ಪೌರಾಯುಕ್ತ ಚಂದ್ರಶೇಖರ್, ಮುಖ್ಯಾಧಿಕಾರಿಗಳಾದ ಎಚ್. ಎಂ. ಸುರೇಶ್, ಎಚ್. ಆರ್. ದೀಪಾ, ಬಸವರಾಜು, ನಗರಪಾಲಿಕೆ ಉಪ ಆಯುಕ್ತ ಜಿ. ಎಸ್. ಸೋಮಶೇಖರ್, ಅಧಿಕ್ಷಕ ಅಭಿಯಂತರರಾದ ಕೆ. ಜೆ. ಸಿಂಧು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರ ಆಸೀಫ್ ಇಕ್ಬಾಲ್ ಖಲೀಲ್, ಮುಡಾ ನಗರ ಯೋಜಕ ಸದಸ್ಯ ಶಿವರಾಮಯ್ಯ ಮತ್ತಿತರರು ಹಾಜರಿದ್ದು ಸಿಎಂ ಸಭೆಯಲ್ಲಿ ಚರ್ಚಿಸುವ ವಿಷಯಗಳ ಪ್ರಾತ್ಯಕ್ಷಿಕೆ ನೀಡಿದರು. ‌

ಬೃಹತ್ ಮಹಾನಗರ ಪಾಲಿಕೆ ರಚನೆ ಮಾಡಲು ಒಪ್ಪಿಗೆ ಸಿಕ್ಕಿದರೆ ಕನಿಷ್ಠ 2-3 ವರ್ಷಗಳ ಕಾಲ ಚುನಾವಣೆ ನಡೆಯುವುದು ಅನುಮಾನ. ಪಪಂಗಳು ಮತ್ತು ನಗರಸಭೆಯನ್ನು ಪಾಲಿಕೆಯೊಂದಿಗೆ ವಿಲೀನ ಮಾಡಿದರೆ ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಎಂಎಎಸ್ ಮಟ್ಟದ ಅಧಿಕಾರಿಗಳು ಬದಲಿ ಜಾಗ ನೋಡಿಕೊಳ್ಳಬೇಕಿದೆ. ಒಂದು ವೇಳೆ ಚುನಾವಣೆ ನಡೆದರೆ ರಾಜಕೀಯ ಪಕ್ಷಗಳ ಆಕಾಂಕ್ಷಿಗಳು ತಯಾರಿ ಮಾಡಿಕೊಳ್ಳುವುದು ಗ್ಯಾರಂಟಿಯಾಗಿದೆ.

 

ಆಂದೋಲನ ಡೆಸ್ಕ್

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

20 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

29 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago