ಪ್ರಶಾಂತ್ ಎಸ್.
ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ನೂರು ವರ್ಷ ಹಿನ್ನೆಲೆ
ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ;
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪರಿಚಯಿಸಲು ತೀರ್ಮಾನ
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ದಸರಾ ಕವಿಗೋಷ್ಠಿಯನ್ನು ಈ ಬಾರಿ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ ಬಿಎಂಶ್ರೀ ಸಭಾಂಗಣದಲ್ಲಿ ಆಯೋಜಿಸಲು ದಸರಾ ಕವಿ ಗೋಷ್ಠಿ ಉಪ ಸಮಿತಿ ನಿರ್ಧರಿಸಿದ್ದು, ದೇಶ-ವಿದೇಶಗಳ ಖ್ಯಾತನಾಮ ಕವಿಗಳನ್ನು ಕವಿಗೋಷ್ಠಿಗೆ ಆಹ್ವಾನಿಸಲು ನಿರ್ಧರಿಸಿದೆ.
ಸಾಮಾನ್ಯವಾಗಿ ದಸರಾ ಕವಿಗೋಷ್ಠಿಯನ್ನು ಈವರೆಗೆ ಜಗನ್ಮೋಹನ ಅರಮನೆ, ಮಾನವಿಕ ಸಭಾಂಗಣ ಅಥವಾ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿತ್ತು. ಆದರೆ, ಈ ಬಾರಿ ಕುವೆಂಪು ವಿರಚಿತ ನಾಡ ಗೀತೆಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಯಲ್ಲಿರುವ ೪೦೦ ಆಸನ ಸಾಮರ್ಥ್ಯದ ಬಿ.ಎಂ.ಶ್ರೀ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ ಆಯೋಜಿಸಲು ನಿರ್ಧರಿಸಲಾಗಿದ್ದು, ಆ ಮೂಲಕ ಕುವೆಂಪು ಅಧ್ಯಯನ ಸಂಸ್ಥೆಯ ಪರಿಚಯವನ್ನು ಕಾವ್ಯಾಸಕ್ತರಿಗೆ ಮಾಡಿಕೊಡಲು ಮುಂದಾಗಿದೆ.
ಅಂತಾರಾಷ್ಟ್ರೀಯ ಕವಿಗಳು ಆಗಮನ: ದಸರಾ ಮಹೋತ್ಸವದ ಒಂದು ಭಾಗವಾಗಿ ಕವಿ ಗೋಷ್ಠಿ ವಾಡಿಕೆಯಂತೆ ನಡೆದುಕೊಂಡು ಬಂದಿದೆ. ಕಾವ್ಯೋತ್ಸವವು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ವೇದಿಕೆಯಾಗಿದ್ದು, ಇಲ್ಲಿ ಕರ್ನಾಟಕ ಮಾತ್ರವಲ್ಲದೇ ಬೇರೆ ಬೇರೆ ರಾಜ್ಯ ಹಾಗೂ ಹೊರದೇಶ ಗಳಿಂದಲೂ ಕವಿಗಳು ಆಗಮಿಸಿ ಕವನ ವಾಚನ ಮಾಡಲಿದ್ದಾರೆ.
ಕುವೆಂಪು ಅವರ ಸಮಗ್ರ ಚಿತ್ರಗಳು: ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ಗೀತೆಗೆ ನೂರು ವರ್ಷಗಳು ತುಂಬಿವೆ. ಹೀಗಾಗಿ ಕುವೆಂಪು ವಿರಚಿತ ಕರ್ನಾಟಕ ನಾಡಗೀತೆ ಕವನದ ಹಸ್ತಪ್ರತಿ ನೀಡಲು ಉದ್ದೇಶಿಸಿದೆ. ಹಾಗೆಯೇ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ ಕುವೆಂಪು ಗ್ಯಾಲರಿಯಲ್ಲಿ ಕುವೆಂಪು ಅವರ ಸಮಗ್ರ ಬದುಕನ್ನು ಕಟ್ಟಿಕೊಡುವ ಅಪರೂಪದ ಚಿತ್ರಗಳಿರಲಿದ್ದು, ಇದನ್ನು ಸಾಹಿತ್ಯಾಸಕ್ತರು ಕಣ್ತುಂಬಿಕೊಳ್ಳಬಹುದಾಗಿದೆ.
” ಕುವೆಂಪು ಅವರ ‘ಕೊಳಲು’ ಕವನ ಸಂಕಲನ ೧೯೩೦ರಲ್ಲಿ ಪ್ರಕಟವಾಯಿತು. ಅದರಲ್ಲಿ ‘ಜಯ ಹೇ ಕರ್ಣಾಟಕ ಮಾತೆ’ ಕವನವೂ ಸೇರಿದೆ. ೨೦೦೪ರಲ್ಲಿ ಕರ್ನಾಟಕ ಸರ್ಕಾರ ಅಽಕೃತ ನಾಡಗೀತೆಯಾಗಿಸಿದೆ.”
” ನಾಡಗೀತೆಗೆ ೧೦೦ ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ನಾಡಗೀತೆಯ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಲಾಗಿದೆ. ವಿಶೇಷವಾಗಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಗ್ಗೆ ಸಾಹಿತ್ಯಾ ಸಕ್ತರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಲಾಗಿದೆ.”
-ಪ್ರೊ.ಎನ್.ಕೆ.ಲೋಲಾಕ್ಷಿ, ಕಾರ್ಯಾಧ್ಯಕ್ಷರು, ದಸರಾ ಕವಿಗೋಷ್ಠಿ ಉಪ ಸಮಿತಿ
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್‌ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…