ನವೀನ್ ಡಿಸೋಜ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಿಲ್ಲಾಡಳಿತ, ಮಾಲಿನ್ಯ ನಿಯಂತ್ರಣ ಮಂಡಳಿ ಮನವಿ
ಮಡಿಕೇರಿ: ದಸರಾ, ಕಾವೇರಿ ಜಾತ್ರೆಯ ಬೆನ್ನಲ್ಲೇ ಜಿಲ್ಲೆಯಲ್ಲಿ ಈಗ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಜಿಲ್ಲೆಯಾದ್ಯಂತ ಪಟಾಕಿ ವ್ಯಾಪಾರದ ಭರಾಟೆ ಜೋರಾಗಿದೆ. ಮತ್ತೊಂದೆಡೆ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಜಿಲ್ಲಾಡಳಿತ ಹಸಿರು ಪಟಾಕಿಗಳ ಬಳಕೆ ಸಂಬಂಧ ಪಟಾಕಿ ಮಳಿಗೆಗಳ ಮೇಲೆ ಹದ್ದಿನ ಕಣ್ಣಿಟ್ಟಿವೆ.
ಬೆಳಕಿನ ಹಬ್ಬ ದೀಪಾವಳಿಯನ್ನು ಕೊಡಗು ಜಿಲ್ಲೆಯಲ್ಲಿಯೂ ಸಂಭ್ರಮ ದಿಂದ ಆಚರಿಸಲಾಗುತ್ತಿದೆ. ಮನೆಗಳಲ್ಲಿ, ಅಂಗಡಿಗಳಲ್ಲಿ ವಿಶೇಷ ಅಲಂಕಾರ, ಪೂಜೆ ನಡೆಯುತ್ತಿದೆ. ಎಲ್ಲೆಡೆ ದೀಪಗಳು ಮತ್ತು ಪಟಾಕಿಗಳ ಖರೀದಿ ಜೋರಾಗಿ ನಡೆದಿದೆ. ಜಿಲ್ಲೆಯಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲಾಗಿದ್ದು, ಜಿಲ್ಲಾಡಳಿತ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಅಗ್ನಿ ಶಾಮಕ ಇಲಾಖೆಯ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ. ದೀಪಾವಳಿ ಹಬ್ಬದಲ್ಲಿ ವಾಯು ಮಾಲಿನ್ಯ, ಯಾವುದೇ ಅಹಿತಕರ ಘಟನೆಗಳಾಗದಂತೆ ಎಚ್ಚರ ವಹಿಸಲಾಗಿದೆ.
ಜಿಲ್ಲೆಯಲ್ಲಿ ಪಟಾಕಿ ಮಳಿಗೆಗಳನ್ನು ತೆರೆದಿರುವವರಿಗೆ ಸುರಕ್ಷತೆ ಮತ್ತು ಮಾಲಿನ್ಯ ನಿಯಂತ್ರಣ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿ ವ್ಯಾಪಾರಕ್ಕೆ ಅನುಮತಿಸಲಾಗಿದೆ. ಅ.೧೯ರಿಂದ ಲಾಗಿದೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ ೬ ಮಳಿಗೆಗಳು ಸೇರಿದಂತೆ ಒಟ್ಟು ೪೬ ಮಳಿಗೆಗಳಿಗೆ ಜಿಲ್ಲೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಮಳಿಗೆಗಳಲ್ಲಿ ಬೆಂಕಿ ಅವಘಡಗಳಾಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ಸರ್ಕಾರದ ಸೂಚನೆಯಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಸೂಚಿಸಲಾಗಿದೆ. ಅಲ್ಲದೇ ಯಾವುದೇ ಕಾರಣಕ್ಕೂ ನಿಯಮ, ಷರತ್ತುಗಳಿಗೆ ಬದ್ಧರಾಗಿರುತ್ತೇವೆಂದು ಪ್ರತಿ ವ್ಯಾಪಾರಿಯಿಂದಲೂ ೧೦೦ ರೂ. ಛಾಪಾ ಕಾಗದದಲ್ಲಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ.
ದೇಶದಲ್ಲಿಯೇ ಅತಿ ಶುದ್ಧ ಗಾಳಿ ಹೊಂದಿರುವ ಪ್ರದೇಶಗಳಲ್ಲೊಂದಾದ ಮಡಿಕೇರಿ ನಗರ ಸೇರಿದಂತೆ ಕೊಡಗಿನಾದ್ಯಂತ ದೀಪಾವಳಿಗೂ ಒಂದು ವಾರದ ಮೊದಲು ಮತ್ತು ಹಬ್ಬದ ಒಂದು ವಾರದ ನಂತರ ವಾಯು ಮಾಲಿನ್ಯದ ಕುರಿತು ದತ್ತಾಂಶಗಳನ್ನು ಕಲೆಹಾಕಲಾಗುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅ.೧೩ರಿಂದಲೇ ಮಾನಿಟರಿಂಗ್ ಆರಂಭಿಸಿದ್ದು, ಇದು ಅ.೨೭ರವರೆಗೆ ಮುಂದುವರಿಯಲಿದೆ. ಇದಲ್ಲದೇ ದೀಪಾವಳಿ ದಿನಗಳಂದು ರಾತ್ರಿ ವೇಳೆ ಸಿಡಿಸಲು ಅನುಮತಿ ಸಲಾದ ಪಟಾಕಿಗಳನ್ನು ಮಾತ್ರ ಬಳಸಲಾಗು ತ್ತಿದೆಯೇ ಎಂಬುದರ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ ನಿಗಾ ವಹಿಸಲಿದೆ.
” ೨೦೨೫ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ, ವಾಯು ಮಾಲಿನ್ಯವನ್ನು ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಭಾರತ ಸರ್ಕಾರದ ಪರಿಸರ ನಿಯಮಾವಳಿ ಅಡಿಯಲ್ಲಿ ನಿಗದಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು. ಯಾವುದೇ ಕ್ರಮಗಳನ್ನು ಉಲ್ಲಂಘಿಸಿದರೆ, ಅದಕ್ಕೆ ಕಾರಣರಾದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಸಾರ್ವಜನಿಕರು ಸಹಕರಿಸಬೇಕು.”
-ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ
” ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳಿಗೆ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯಬೇಕು. ೧೨೫ ಡೆಸಿಬಲ್‌ಗಳಿಗಿಂತ ಹೆಚ್ಚು ಶಬ್ದ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಬಳಕೆಯನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ರಾತ್ರಿ ೮ ರಿಂದ ೧೦ ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್. ಕೋಡ್ ಇರುವ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ದಿನದ ಯಾವುದೇ ಸಮಯದಲ್ಲಿ ನಿಶ್ಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾಮಂದಿರ, ವೃದ್ಧಾಶ್ರಮ ಇತ್ಯಾದಿ) ಸುತ್ತ ಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.”
” ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಉಂಟಾಗದಂತೆ ಎಚ್ಚರ ವಹಿಸಲಾಗಿದೆ. ಇಲಾಖೆ ಅಧಿಕಾರಿಗಳು ಪಟಾಕಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸುವುದರ ಜತೆಗೆ, ಹಬ್ಬದ ದಿನಗಳಲ್ಲಿ ರಾತ್ರಿ ವೇಳೆ ಪಟಾಕಿಗಳ ಬಳಕೆಯ ಮೇಲೆಯೂ ನಿಗಾ ವಹಿಸಿದ್ದಾರೆ. ನಿಯಮ ಉಲ್ಲಂಘನೆ ಕಂಡುಬಂದರೆ ಕ್ರಮ ಕೈಗೊಳ್ಳುವ ಬಗ್ಗೆಯೂ ಎಚ್ಚರಿಕೆ ನೀಡಲಾಗಿದೆ”
-ರಘುರಾಮ್, ಜಿಲ್ಲಾ ಮಾಲಿನ್ಯ ನಿಯಂತ್ರಣ ಅಧಿಕಾರಿ
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…