Andolana originals

ಬೈಲಕುಪ್ಪೆ-ಆಲನಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ

ಬೈಲಕುಪ್ಪೆ: ಬೈಲಕುಪ್ಪೆ-ಆಲನಹಳ್ಳಿ ಮುಖ್ಯ ರಸ್ತೆಯ ಡಾಂಬರು ಕಿತ್ತು ಬಂದು, ವಾಹನ ಸವಾರರು ಪ್ರತಿನಿತ್ಯ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ ಆಲನಹಳ್ಳಿ, ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್‌ತನಕ ಸಂಪೂರ್ಣವಾಗಿ ಡಾಂಬರು ಕಿತ್ತುಬಂದಿದ್ದು ರಸ್ತೆ ತೀರಾ ಹಾಳಾಗಿದೆ.

ಆಲನಹಳ್ಳಿ, ನವಿಲೂರು, ಹಕ್ಕೆಮಾಳ, ಗಿರಿಜನರ ಹಾಡಿ, ರೈತರ ಜಮೀನುಗಳಿಗೆ ತೆರಳಲು ಇದೇ ರಸ್ತೆಯಲ್ಲಿ ಓಡಾಡಬೇಕಿದೆ. ಅಲ್ಲದೆ, ಶಾಲಾ ಮಕ್ಕಳು ಕುಶಾಲ ನಗರ, ಕೊಪ್ಪ ಬೈಲಕುಪ್ಪೆಗೆ ಇದೇ ಮಾರ್ಗದಲ್ಲಿ ಬಂದು ಹೋಗಬೇಕಾಗಿದೆ. ಗುಂಡಿಮಯವಾದ ಈ ರಸ್ತೆಯಲ್ಲಿ ಈಗಾಗಲೇ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯ ಗೊಂಡಿರುವ ಉದಾಹರಣೆಗಳಿವೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ರಸ್ತೆಯನ್ನು ದುರಸ್ತಿ ಮಾಡಬೇಕೆಂದು  ಸ್ಥಳೀಯರು ಒತ್ತಾಯಿಸಿದ್ದಾರೆ. ಆಲನಹಳ್ಳಿ, ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್ ಮುಖ್ಯರಸ್ತೆ ವರೆಗೂ ಸಂಪೂರ್ಣ ಹದಗೆಟ್ಟಿದೆ.

ಈ ಭಾಗದ ರೈತರು ಜಮೀನು ಚಟುವಟಿಕೆಗಳಿಗೆ ತೆರಳಲು, ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ. ಅಧಿಕಾರಿಗಳು ಕೂಡಲೇ ಈ ರಸ್ತೆಯನ್ನು ದುರಸ್ತಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹುಣಸೇವಾಡಿ ಗ್ರಾಪಂ ಮಾಜಿ ಅಧ್ಯಕ್ಷ ರಾಜಣ್ಣ ಒತ್ತಾಯಿಸಿದ್ದಾರೆ.

” ನಂದಿನಾಥಪುರ, ಬೂತನಹಳ್ಳಿ, ಆಲನಹಳ್ಳಿ ಮುಖ್ಯರಸ್ತೆ ಲೋಕೋಪಯೋಗಿ ಇಲಾಖೆಗೆ ಸೇರಿದೆ. ಈ ರಸ್ತೆಯಲ್ಲಿ ನಂದಿನಾಥಪುರ, ಬೂತನಹಳ್ಳಿ, ಆಲನಹಳ್ಳಿ ತನಕ ಗುಂಡಿಗಳಿಗೆ ತೇಪೆ ಹಾಕಲಾಗಿದೆ. ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್ ತನಕ ರಸ್ತೆ ದುರಸ್ತಿಗೆ ಈಗಾಗಲೇ ಹಣ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಸಚಿವರಾದ ಕೆ.ವೆಂಕಟೇಶ್ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.”

-ಎಂ.ಆರ್.ವೆಂಕಟೇಶ್, ಎಇಇ, ಲೋಕೋಪಯೋಗಿ ಇಲಾಖೆ, ಪಿರಿಯಾಪಟ್ಟಣ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

3 hours ago

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

3 hours ago

ಓದುಗರ ಪತ್ರ: ಖಾಸಗಿ ಕಾಲೇಜುಗಳ ಅನಗತ್ಯ ಶುಲ್ಕ ಹೆಚ್ಚಳ ನಿಯಂತ್ರಿಸಿ

ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮೂರಡಿಯ ಮೂರ್ತಿಗೆ ಡಾಕ್ಟರಾದ ಕೀರ್ತಿ

ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…

3 hours ago

ಬರದಲ್ಲೂ ಜಾನುವಾರುಗಳ ಮೇವಿಗಿಲ್ಲ ಕೊರತೆ

ಕೆ.ಬಿ.ರಮೇಶನಾಯಕ ಹೋಬಳಿಗೊಂದರಂತೆ ೨೯ ಮೇವು ಬ್ಯಾಂಕ್ ತೆರೆಯಲು ಪ್ರಸ್ತಾವನೆ  ಮೈಸೂರು: ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿದ್ದರಿಂದಾಗಿ ಮಳೆಯಾಶ್ರಿತ…

3 hours ago

ಮಂಜಿನ ನಡುವೆ ಕೇಸರಿ ರೈಲು; ಕಾಗಿನೆರೆ ದೃಶ್ಯ ವೈರಲ್

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ  ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ…

3 hours ago