ಕೋಟೆಯ ವಿವಿಧೆಡೆ ಕಳವು ಪ್ರಕರಣ: ಪತ್ತೆಯಾಗದ ಆರೋಪಿಗಳ ಸುಳಿವು; ಜನರಲ್ಲಿ ಭೀತಿ
ಎಚ್.ಡಿ.ಕೋಟೆ: ಪಟ್ಟಣದಲ್ಲಿ ನಡೆಯುತ್ತಿರುವ ಗಾಂಜಾ, ಇತರ ಮಾದಕ ವಸ್ತುಗಳ ಮಾರಾಟ ಹಾವಳಿಯಿಂದಾಗಿ ಯುವ ಸಮುದಾಯ ಬಲಿಯಾಗುತ್ತಿದೆ. ಎಗ್ಗಿಲ್ಲದೆ ನಡೆಯುತ್ತಿರುವ ಸರಣಿ ಕಳ್ಳತನ ಮತ್ತು ಅಕ್ರಮ ಚಟುವಟಿಕೆಗಳು ದಿನೇದಿನೇ ಹೆಚ್ಚಾಗುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಉಂಟುಮಾಡಿದೆ.
ಕಳೆದೆರಡು ವರ್ಷಗಳಿಂದ ಪಟ್ಟಣ ವ್ಯಾಪ್ತಿಯಲ್ಲಿ ರಾತ್ರಿ, ಹಾಡಹಗಲಲ್ಲೇ ಕಳ್ಳತನ ನಡೆಯುತ್ತಿದ್ದು, ಮೂರು ತಿಂಗಳಿನಿಂದ ದೇವಸ್ಥಾನ ಮತ್ತು ಮನೆಗಳಲ್ಲಿ ಸರಣಿ ಕಳವು ನಿರಂತರವಾಗಿ ನಡೆಯುತ್ತಿದ್ದು ಖದೀಮರು ಲಕ್ಷಾಂತರ ರೂ. ಬೆಲೆಬಾಳುವ ಚಿನ್ನ -ಬೆಳ್ಳಿ ಆಭರಣಗಳು ಹಾಗೂ ನಗದನ್ನು ದೋಚಿದ್ದಾರೆ.
ಒಂದು ವಾರದಲ್ಲೇ ಪಟ್ಟಣದ ೧ನೇ ಮುಖ್ಯರಸ್ತೆಯ ವಾರಾಹಿ ಮಾರಮ್ಮ ದೇವಸ್ಥಾನ, ಪೇಪರ್ ಶೇಷಾದ್ರಿ, ವಿಶ್ವನಾಥ ಕಾಲೋನಿಯ ಗೋಬಿ ಕೃಷ್ಣ, ಸ್ಟೇಡಿಯಂ ಬಡಾವಣೆಯ ಎಎಸ್‌ಐ ಕೆ.ಕೆ.ಮಹದೇವ್ ಎಂಬವರ ಮನೆಗಳಲ್ಲಿ ೫೫ ಲಕ್ಷ ರೂ. ವೆಚ್ಚದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದನ್ನು ಕಳ್ಳರು ದೋಚಿರುವುದು ತಾಲ್ಲೂಕಿನ ಜನರನ್ನು ಬೆಚ್ಚಿಬೀಳಿಸಿದೆ.
ಇದನ್ನು ಓದಿ: ಮೈಸೂರಲ್ಲಿ ಸ್ಥಾಪನೆಯಾಗಲಿದೆ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರ
ಪಟ್ಟಣ ಮತ್ತು ತಾಲ್ಲೂಕಿನಾದ್ಯಂತ ಎರಡು ವರ್ಷಗಳಿಂದ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಬಗ್ಗೆ ಪೊಲೀಸರು ಎಚ್ಚರಿಕೆ ವಹಿಸಿದರೂ ಕಳ್ಳರ ಸುಳಿವು, ಕಳವಾದ ವಸ್ತುಗಳು ಮಾಲೀಕರ ವಶವಾಗದಿರುವುದರಿಂದ ಪೊಲೀಸರ ಕಾರ್ಯವೈಖರಿ ಬಗ್ಗೆ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನಾದ್ಯಂತ ಅಲ್ಲಲ್ಲಿ ಕಳವು, ಅಕ್ರಮ ಚಟುವಟಿಕೆಗಳು, ದಂಧೆಗಳು ನಡೆಯುತ್ತಿದ್ದರೂ ಪೊಲೀಸ್ ಇಲಾಖೆಯವರು ಕಂಡರೂ ಕಾಣದಂತೆ ಇರುವುದರಿಂದಲೇ ದಿನದಿಂದ ದಿನಕ್ಕೆ ಸರಣಿ ಕಳ್ಳತನ ಹೆಚ್ಚಾಗಲು ಕಾರಣವಾಗಿದೆ ಎಂದು ಮಹಿಳೆಯರು ಮತ್ತು ಪ್ರಜ್ಞಾವಂತರು ಆರೋಪಿಸಿದ್ದಾರೆ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುವ ಅನೇಕ ಯುವಕರು ಹಣಕಾಸು ಮುಗ್ಗಟ್ಟು ಎದುರಾದಾಗ ಮನೆಗಳವು ಮಾಡುತ್ತಾರೆ. ಬೀಗ ಹಾಕಿರುವ ಮನೆಗಳು, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಗುಂಪು ಕಳ್ಳತನ ನಡೆಸುತ್ತಿದ್ದಾರೆ.
ಪೊಲೀಸರು ಪಟ್ಟಣ ಮತ್ತು ತಾಲ್ಲೂಕಿನಾದ್ಯಂತ ಗಾಂಜಾ, ಅಕ್ರಮ ಮದ್ಯ ಮಾರಾಟ, ಜೂಜಾಟ, ಸರಣಿ ಕಳ್ಳತನಕ್ಕೆ ಕಡಿವಾಣ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ. ಕಳ್ಳರನ್ನು ಸೆದೆಬಡಿಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಪೊಲೀಸರು ಈ ಬಗ್ಗೆ ಹದ್ದಿನ ಕಣ್ಣು ಇಡಬೇಕಿದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
” ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ಕಟ್ಟಿನಿಟ್ಟಿನ ಸೂಚನೆ ನೀಡಲಾಗಿದೆ. ಸ್ಥಳೀಯರೇ ಅಥವಾ ಹೊರಗಿನಿಂದ ಬಂದ ಕಳ್ಳರೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಎಲ್ಲ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಎಎಸ್‌ಪಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.”
-ವಿಷ್ಣುವರ್ಧನ್, ಪೊಲೀಸ್ ವರಿಷ್ಠಾಧಿಕಾರಿ
–ಮಂಜು ಕೋಟೆ
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…
ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…
ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು…