Andolana originals

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ

ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು ಕಾಯ್ದೆಯ ಅನ್ವಯ ವೈಯಕ್ತಿಕ ಅರಣ್ಯ ಭೂಮಿ ಹಕ್ಕು, ಸಾಮೂಹಿಕ ಅರಣ್ಯ ಹಕ್ಕು ಹಾಗೂ ಪರಂಪರೆಯ ಅರಣ್ಯ ನೆಲಸುಗಳ ಮೇಲಿನ ಹಕ್ಕುಗಳಿಗೆ ೨೦೧೦-೧೧ನೇ ಸಾಲಿನಲ್ಲಿ ಸಲ್ಲಿಸಿರುವ ಪ್ರಸ್ತಾವನೆಗಳನ್ನು ಪರಿಗಣಿಸಿ ತಾಲ್ಲೂಕಿನ ಎಲ್ಲ ೩೦ ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಬೇಕೆಂದು ಆಗ್ರಹಿಸಿ ಅರಣ್ಯ ಪ್ರವೇಶ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ವೀರನಹೊಸಹಳ್ಳಿ, ಭಾರತವಾಡಿ ಹಾಗೂ ಕೆರೆ ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳು ವೀರನಹೊಸಹಳ್ಳಿ ವನ್ಯಜೀವಿ ವಲಯದ ಮಂಟಳ್ಳಿ ಕಾಡನ್ನು ಪ್ರವೇಶಿಸಿ ಆದಿವಾಸಿ ಪರಂಪರೆಯ ಬಸವೇಶ್ವರ ದೇವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಸರ್ಕಾರ ಅರಣ್ಯ ಹಕ್ಕುಗಳಿಗೆ ಹಕ್ಕುಪತ್ರ ನೀಡಬೇಕೆಂದು ದೇವರ ಸನ್ನಿಧಿಯಲ್ಲಿ ಸಭೆ ಸೇರಿ ಪೂಜೆ ಸಲ್ಲಿಸಿ ಮನವಿಗಳನ್ನು ಓದಿ ಸರ್ಕಾರಕ್ಕೆ ಸ್ಥಳೀಯ ಅರಣ್ಯ ಇಲಾಖೆಯ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಜಿಲ್ಲಾ ಅರಣ್ಯಹಕ್ಕು ಸಮಿತಿ ಅಧ್ಯಕ್ಷರು, ಜಿಲ್ಲಾಧಿಕಾರಿಗಳಿಗೆ ೧೨ ವರ್ಷಗಳಿಂದ ಹಕ್ಕುಪತ್ರ ನೀಡದೆ ಅನ್ಯಾಯ ಮಾಡಿರುವುದನ್ನು ಸರಿಪಡಿಸಿ ಕೂಡಲೇ ಹಕ್ಕುಪತ್ರ ನೀಡಲು ಮನವಿ ಮಾಡಿದರು.

ಸಾಮೂಹಿಕ ಹಕ್ಕುಪತ್ರ ನೀಡುವ ಕಾಡಿಗೆ ಹಾಡಿ ಅರಣ್ಯ ಹಕ್ಕು ಸಮಿತಿಯ ನಾಮಫಲಕ ಅಳವಡಿಸಿ, ಪ್ರಾಣಿಗಳು ನೀರು ಕುಡಿಯಲು ಬೋರ್ ತೆಗೆಸಿ ಕಾಡೊಳಗಿನ ಖಾಲಿ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಒತ್ತಾಯಿಸಿದರು. ವೀರನಹೊಸಹಳ್ಳಿ ಅರಣ್ಯ ಹಕ್ಕು ಸಮಿತಿ ಕಾರ್ಯದರ್ಶಿ ಜಯಂತಿ ಮಾತನಾಡಿ, ತಮ್ಮ ಹಾಡಿಗೆ ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ವೀರನಹೊಸಹಳ್ಳಿ ಯಜಮಾನ ಪುಟ್ಟಯ್ಯ, ಯುವಕ ಹರೀಶ್ ಪೂಜಾ ಕಾರ್ಯ ನೆರವೇರಿಸಿದರು. ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಜಯಪ್ಪ ಮುಖ್ಯಮಂತ್ರಿಗಳಿಗೆ ಸಲ್ಲಿದ ಮನವಿ ಓದಿದರು. ವಿಠಲ್ ನಾಣಚ್ಚಿ ಆರಣ್ಯ ಹಕ್ಕಿನ ಕಾಯ್ದೆಯ ಮಾಹಿತಿ ನೀಡಿದರು. ಡಾ.ಎಸ್.ಶ್ರೀಕಾಂತ್ ಜಿಲ್ಲಾ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಿಗೆ ಸಾಮೂಹಿಕ ಹಾಗೂ ನೆಲಸುಗಳ ಮೇಲಿನ ಹಕ್ಕುಪತ್ರಕ್ಕೆ ಅಗ್ರಹಿಸಿ ಬರೆದಿರುವ ಮನವಿ ಓದಿದರು. ಹೆಮ್ಮಿಗೆ ಹರ್ಷ ಮಾತನಾಡಿ, ನಾಳೆ ತರಿಕಲ್ ಹಾಡಿ ಕಾಡಿಗೆ ಪ್ರವೇಶ ಮಾಡಿ ಅರಣ್ಯಪ್ರವೇಶ ಅಭಿಯಾನ ಮುಕ್ತಾಯಗೊಳಿಸಲಾಗುವುದು ಎಂದರು.

ಆದಿವಾಸಿ ಮುಖಂಡರ ತಂಡ ವಲಯ ಅರಣ್ಯ ಅಧಿಕಾರಿ ಕಚೇರಿಗೆ ತೆರಳಿ ಆರ್‌ಎಫ್‌ಒ ವಿನೋದಗೌಡರ ಪರವಾಗಿ ಹಾಜರಿದ್ದ ಸುನಿಲ್ ಅವರಿಗೆ ಮನವಿ ಸಲ್ಲಿಸಿ ಜಿಲ್ಲಾ ಆರಣ್ಯ ಹಕ್ಕು ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿಯನ್ನು ಸೂಕ್ತ ಕ್ರಮಕ್ಕಾಗಿ ಕಳುಹಿಸಿಕೊಡಲು ವಿನಂತಿಸಿತು

” ಮುಂದಿನ ವರ್ಷ ಕಾಡು ಪ್ರವೇಶಕ್ಕೂ ಮುನ್ನವೇ ಅರಣ್ಯ ಹಕ್ಕು ನೀಡಬೇಕು. ಇಲ್ಲವಾದರೆ ಸಂವಿಧಾನದ ಹೆಸರಲ್ಲಿ ಆಡಳಿತ ನಡೆಸುವ ಸರ್ಕಾರಕ್ಕೆ ಅವಮಾನವಾದೀತು.”

-ಭಾರತವಾಡಿ ಲಕ್ಷ್ಮಿ, ಮಹಿಳಾ ಸಂಘದ ಅಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago