Andolana originals

ಆಹಾರ ಮೇಳ: ಮಳಿಗೆಗಳ ಬಾಡಿಗೆ ಕಡಿತಕ್ಕೆ ಆಗ್ರಹ

ಮೈಸೂರು: ಪ್ರಸಕ್ತ ಸಾಲಿನ ದಸರಾ ಮಹೋತ್ಸವದಲ್ಲಿ ಆಹಾರ ಮೇಳದ ಮಳಿಗೆಗಳ ಬಾಡಿಗೆ ದರ ಕಡಿಮೆ ಮಾಡುವಂತೆ ಮೈಸೂರು ದಸರಾ ಆಹಾರ ಮೇಳದ ತಿಂಡಿ-ತಿನಿಸುಗಳ ಮಾರಾಟಗಾರರ ಸಂಘ, ಮುಖ್ಯಮಂತ್ರಿಗಳು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ನಾಗರಾಜು ಎಸ್. ಸಿದ್ದರಾಮನಹುಂಡಿ ಅವರು, ಕಳೆದ ಬಾರಿ ರಾಜ್ಯದಲ್ಲಿ ಬರ ವಿದ್ದ ಹಿನ್ನೆಲೆಯಲ್ಲಿ ಆಹಾರ ಮಳಿಗೆಗಳ ಬಾಡಿಗೆಯನ್ನು ಸಸ್ಯಾಹಾರಿ ವಿಭಾಗದಲ್ಲಿ ೫೯,೦೦೦ ರೂ. , ಮಾಂಸಾಹಾರಿ ವಿಭಾಗದ ಮಳಿಗೆಗೆ ೮೮,೫೦೦ ರೂ. ಜೊತೆಗೆ ಜಿಎಸ್‌ಟಿಯನ್ನು ನಿಗದಿಪಡಿಸಲಾಗಿತ್ತು. ಈ ಪರಿಣಾಮ ವ್ಯಾಪಾರ ಸ್ಥರು ನಷ್ಟ ಅನುಭವಿಸಬೇಕಾಯಿತು. ಹಾಗಾಗಿ ಈ ಬಾರಿ ಸಸ್ಯಾಹಾರಕ್ಕೆ ೨೫,೦೦೦ ರೂ. , ಮಾಂಸಾಹಾರಕ್ಕೆ ೩೦,೦೦೦ ರೂ. ಗಳನ್ನು ಜಿಎಸ್‌ಟಿ ರಹಿತವಾಗಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

೪೦ ಕೋಟಿ ರೂ. ವೆಚ್ಚದಲ್ಲಿ ಅದ್ಧೂರಿ ದಸರಾ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರವು, ಅತ್ಯಂತ ಹೆಚ್ಚು ಜನರನ್ನು ಆಕರ್ಷಿಸುವ ಆಹಾರ ಮೇಳದಲ್ಲಿ ಸಸ್ಯಾ ಹಾರಕ್ಕೆ ೨೫,೦೦೦ ರೂ. , ಮಾಂಸಾ ಹಾರಕ್ಕೆ ೩೦,೦೦೦ ರೂ. ಗಳನ್ನು ಜಿಎಸ್‌ಟಿ ರಹಿತವಾಗಿ ಮಳಿಗೆಗಳಿಗೆ ನಿಗದಿಪಡಿಸುವ ಮೂಲಕ ವ್ಯಾಪಾರ ಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಈ ಬಾರಿ ೧೭೫ ಮಳಿಗೆಗಳನ್ನು ಒಂದೇ ಕಡೆ ನೀಡಲು ಜಿಲ್ಲಾಡಳಿತ ತೀರ್ಮಾನಿಸಿದೆ. ಆದರೆ, ಪಾರ್ಕಿಂಗ್ ಸಮಸ್ಯೆಗಳು ಉದ್ಭವವಾಗಲಿದೆ. ಆದ್ದರಿಂದ ಈ ಬಾರಿ ಜಂಬೋ ಸರ್ಕಸ್ ನಡೆಯದಿರುವುದರಿಂದ ಆಹಾರ ಮೇಳವನ್ನು ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ೧೨೫ ಮಳಿಗೆಗಳು ಮತ್ತು ಇಟ್ಟಿಗೆಗೂಡಿನ ಕಾರಂಜಿ ಕೆರೆ ಪಕ್ಕದ ಮೈದಾನದಲ್ಲಿ ೫೦ ಮಳಿಗೆಗಳನ್ನು ನಿರ್ಮಿಸಿ ವ್ಯಾಪಾರಿಗಳು ಮತ್ತು ಪ್ರವಾಸಿಗರಿಗೆ ಅನುಕೂಲ ಮಾಡಿ ಕೊಂಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರದಾನ ಕಾರ್ಯದರ್ಶಿ ಕಂಸಾಳೆ ರವಿ, ಉಪಾಧ್ಯಕ್ಷೆ ಶಾಂತಮ್ಮ, ಶಿವಸಿದ್ದು, ಬೀರೇಶ್, ಸಂತೋಷ್ ಮತ್ತಿತರರು ಹಾಜರಿದ್ದರು.

ಇಟ್ಟಿಗೆಗೂಡಿನ ಕಾರಂಜಿ ಕೆರೆ ಪಕ್ಕದ ಮೈದಾನವು ಅರಮನೆಯ ಸುಪರ್ದಿಯಲ್ಲಿ ಇರುವುದರಿಂದ ಇದನ್ನು ಆಹಾರ ಮೇಳಕ್ಕೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಮತ್ತು ಸಂಸದ ಯದುವೀರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇವೆ. -ನಾಗರಾಜು ಎಸ್. ಸಿದ್ದರಾಮನಹುಂಡಿ

* ಈ ಬಾರಿಯ ದಸರಾ ಮಹೋತ್ಸವ ಅಧಿಕಾರಿಗಳ ದಸರಾ ಆಗಬಾರದು.

* ದಸರಾ ಉಪ ಸಮಿತಿಗಳನ್ನು ಮುಂಚಿತವಾಗಿ ನೇಮಕ ಮಾಡಬೇಕು.

* ಅಧಿಕಾರಿಗಳು ಸಭೆ ನಡೆಸುವಾಗ ಸಂಘದವರಿಗೆ ಆಹ್ವಾನ ನೀಡಿ ಮುಕ್ತವಾಗಿ ಚರ್ಚಿಸಬೇಕು.

* ಆಹಾರ ಮೇಳದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು.

* ಹೊರ ಜಿಲ್ಲೆ, ರಾಜ್ಯಗಳ ವ್ಯಾಪಾರಸ್ಥರಿಗೂ ಅವಕಾಶ ನೀಡಬೇಕು.

 

andolana

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

12 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

13 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

13 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

14 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

14 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

18 hours ago