Mysore
28
haze

Social Media

ಗುರುವಾರ, 01 ಜನವರಿ 2026
Light
Dark

ಹದಗೆಟ್ಟ ಭಾಗಮಂಡಲ-ಕರಿಕೆ ಮಾರ್ಗ

ಪುನೀತ್

ಮಡಿಕೇರಿ: ರಾಜ್ಯದಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಭಾಗ ಮಂಡಲ-ಕರಿಕೆ ಮಾರ್ಗ ಸಂಪೂರ್ಣವಾಗಿ ಹದಗೆಟ್ಟಿದ್ದು, ರಸ್ತೆ ಅಭಿವೃದ್ಧಿ ಮರೀಚಿಕೆಯಾಗಿದೆ.

ರಾಷ್ಟ್ರೀಯ ಹೆದ್ದಾರಿ ೨೭೫ರಲ್ಲಿ ಸಮಸ್ಯೆಯಾಗಿ ಮಡಿಕೇರಿ-ಮಂಗಳೂರು ಸಂಪರ್ಕ ಕಡಿತ ಗೊಂಡರೆ ಇರುವ ಏಕೈಕ ಬದಲಿ ಮಾರ್ಗ ಭಾಗಮಂಡಲ-ಕರಿಕೆ ರಸ್ತೆ. ಕೇರಳದೊಂದಿಗೆ ರಾಜ್ಯವನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಇದೂ ಒಂದು. ಆದರೆ ನಿರ್ವಹಣೆಯ ಕೊರತೆ ಯಿಂದಾಗಿ ಈ ಮಾರ್ಗ ಸಂಪೂರ್ಣ ಹಾಳಾ ಗಿದೆ. ಮಳೆಗಾಲ ಕಳೆದ ನಂತರ ಇಲ್ಲಿ ವಾಹನ ಸಂಚಾರವೇ ಅಸಾಧ್ಯ ಎನ್ನುವ ಸ್ಥಿತಿ ನಿರ್ಮಾಣ ವಾಗುತ್ತದೆ. ಹೆದ್ದಾರಿಯಾಗಿ ಮೇಲ್ದರ್ಜೆಗೇರಿದ ಮೇಲೆ ಸಂಪರ್ಕ ವ್ಯವಸ್ಥೆ ಉತ್ತಮಗೊಳ್ಳ ಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.

ರಸ್ತೆಯುದ್ದಕ್ಕೂ ಡಾಂಬರು ಕಿತ್ತು ಬಂದಿದೆ. ಅಲ್ಲಲ್ಲಿ ಬರೆ ಜರಿದು ರಸ್ತೆಯೇ ಕಿರಿದಾಗಿದೆ. ದಟ್ಟ ಅರಣ್ಯದ ಮಧ್ಯೆ ರಸ್ತೆ ಹಾದು ಹೋಗುವುದರಿಂದ ಬದಿಯಲ್ಲಿ ಗಿಡಗಂಟೆಗಳು ಬೆಳೆದು ನಿಂತಿವೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದ್ದು, ರಸ್ತೆಯಲ್ಲಿ ವಾಹನ ಚಲಾಯಿಸುವುದು ಚಾಲಕರಿಗೆ ಸವಾಲಾಗಿ ಪರಿಣಮಿಸಿದೆ.

ತುರ್ತು ಚಿಕಿತ್ಸೆಗೆ ಕಷ್ಟ: ಗ್ರಾಮಸ್ಥರು ಜ್ವರ, ನೆಗಡಿ ಸೇರಿದಂತೆ ಸಣ್ಣಪುಟ್ಟ ಸಮಸ್ಯೆಗಳಿಗೆ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ. ಆದರೆ, ಹೃದಯಾಘಾತ, ಡೆಂಗ್ಯು, ಅಪಘಾತ ಇತ್ಯಾದಿಗಳಿಗೆ ಜಿಲ್ಲಾಸ್ಪತ್ರೆಗೆ ಬರಬೇಕಾಗಿದೆ. ರಸ್ತೆ ದುರಸ್ತಿಗೊಳ್ಳದ ಹಿನ್ನೆಲೆಯಲ್ಲಿ ಸಂಚಾರ ಕಷ್ಟವಾಗಿದೆ.

ಜಿಲ್ಲಾಧಿಕಾರಿಗೆ ಮನವಿ: ಕರಿಕೆ- ಭಾಗ ಮಂಡಲ ರಸ್ತೆಯನ್ನು ತಕ್ಷಣ ಅಭಿವೃದ್ಧಿ ಪಡಿಸಬೇಕು ಮತ್ತು ಮಳೆಗಾಲದಲ್ಲಿ ಬಿದ್ದಿರುವ ಮಣ್ಣಿನ ರಾಶಿಯನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಪ್ರಮುಖರು ಜಿಲ್ಲಾಽಕಾರಿಗೆ ಮನವಿ ಪತ್ರ ಸಲ್ಲಿಸಿದ್ದರು. ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರಿಕೆ ಗ್ರಾ. ಪಂ. ಅಧ್ಯಕ್ಷರಾದ ಎನ್. ಬಾಲಚಂದ್ರ ನಾಯರ್ ಹೇಳುತ್ತಾರೆ.

ರಾಷ್ಟ್ರೀಯ ಹೆದ್ದಾರಿ ಕನಸು

೨೦೧೭ರಲ್ಲಿ ಕೇರಳದ ಕಾಂಞ್ಞಂಗಾಡುವಿನಿಂದ ಮಡಿಕೇರಿಯ ಕಾಟಕೇರಿವರೆಗೆ ೧೧೦ ಕಿ. ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ರಸ್ತೆ ಅಭಿವೃದ್ಧಿ ನಿಗಮದಿಂದ ಸರ್ವೆಗೆ ಆದೇಶ ನೀಡ ಲಾಗಿತ್ತು. ಈ ಬಗ್ಗೆ ಕೇರಳ ರಾಜ್ಯದ ಗಡಿ ಭಾಗದ ವರೆಗೆ ಸರ್ವೆಯಾಗಿದೆ. ಆದರೆ ಕರ್ನಾಟಕದಲ್ಲಿ ಸರ್ವೆ ಕಾರ್ಯ ನಡೆದಿಲ್ಲ. ರಾಷ್ಟ್ರೀಯ ಹೆದ್ದಾರಿ ಎನ್ನುವುದು ಕನಸಾಗಿಯೇ ಉಳಿದಿದೆ ಎಂದು ಎನ್. ಬಾಲಚಂದ್ರ ನಾಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರಿಕೆ ಆರಂಭದಿಂದ ಸುಮಾರು ೭. ೮ ಕಿ. ಮೀ ರಸ್ತೆ ಅಭಿವೃದ್ಧಿಗೆ ಎಸ್‌ಎಚ್‌ಡಿಪಿ ಅಡಿಯಲ್ಲಿ ೧೨ ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ. ಈಗಾಗಲೇ ಜಂಗಲ್ ಕಟ್ಟಿಂಗ್ ನಡೆಯುತ್ತಿದೆ. ಆದಷ್ಟು ಶೀಘ್ರದಲ್ಲಿ ರಸ್ತೆ ಕಾಮಗಾರಿ ಆರಂಭಿಸ ಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಎಇಇ ಗಿರೀಶ್ ತಿಳಿಸಿದ್ದಾರೆ.

ಕರಿಕೆ ಗ್ರಾಮದ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಕರಿಕೆ ಗ್ರಾಮ ಜಿಲ್ಲಾ ಕೇಂದ್ರವಾದ ಮಡಿಕೇರಿಯಿಂದ ಕೇವಲ ೬೮ ಕಿ. ಮೀ. ದೂರದಲ್ಲಿದೆ. ಅಂತರ ರಾಜ್ಯ ವ್ಯಾಪಾರ, ವಹಿವಾಟು, ಸರಕು ಸಾಗಾಣಿಕೆಗೂ ಇದು ಸಹಕಾರಿಯಾಗಿದೆ. ಆದರೆ ಸಾವಿರಾರು ವಾಹನಗಳು ಸಂಚರಿಸುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸದೆ ಕಡೆಗಣಿಸಲಾಗಿದೆ. ವಾಹನ ಚಾಲಕರು ಮಾತ್ರವಲ್ಲದೆ ಪಾದಚಾರಿಗಳು ಕೂಡ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. –ಎನ್. ಬಾಲಚಂದ್ರ ನಾಯರ್, ಅಧ್ಯಕ್ಷರು, ಕರಿಕೆ ಗ್ರಾ. ಪಂ.

ಪಂಚಾಯಿತಿ ವ್ಯಾಪ್ತಿಯ ಸುಮಾರು ೧೦ ಕಿ. ಮೀ. ನಷ್ಟು ರಸ್ತೆ ಸಂಪೂರ್ಣವಾಗಿ ಹದಗೆ ಟ್ಟಿದೆ. ಇದರಿಂದ ಗ್ರಾಮಸ್ಥರ ನಿತ್ಯ ಸಂಚಾರಕ್ಕೆ ತೊಂದರೆಯಾಗಿದೆ. ಶಾಲಾ ಮಕ್ಕಳು ಹಾಗೂ ನಿತ್ಯ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು ಗುಂಡಿ ಬಿದ್ದ ರಸ್ತೆಯ ಮೂಲಕವೇ ಕಷ್ಟಪಟ್ಟು ತೆರಳಬೇಕಿದೆ. ರಸ್ತೆಯ ಅಭಿವೃದ್ಧಿ ಯನ್ನು ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. –ಬಿ. ಎಸ್. ರಮಾನಾಥ್, ಕರಿಕೆ ಗ್ರಾಮಸ್ಥರು

 

Tags:
error: Content is protected !!