Andolana originals

ದಸರಾ ದಶಮಂಟಪ ಬಹುಮಾನ ಆಯ್ಕೆ ಬಗ್ಗೆ ಅಸಮಾಧಾನ

ನವೀನ್ ಡಿಸೋಜ

ಸೂಕ್ತ ಮಾರ್ಗೋಪಾಯ ಕಂಡುಕೊಳ್ಳಲು ಸಮಿತಿ ನಿರ್ಧಾರ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಸಂಭ್ರಮಕ್ಕೆ ತೆರೆ ಬಿದ್ದಿದೆ. ಆದರೆ, ಪ್ರತಿಬಾರಿಯೂ ಬಹುಮಾನ ಪ್ರಕಟಿಸುವ ಸಂದರ್ಭದಲ್ಲಿ ಉದ್ಭವಿಸುವ ಭಿನ್ನಾಭಿಪ್ರಾಯಗಳು, ಅಸಮಾಧಾನ ದಸರಾ ಉತ್ಸವಕ್ಕೆ ಕಪ್ಪು ಚುಕ್ಕೆಯಾಗಿ ಮಾರ್ಪಡುತ್ತಿದ್ದು, ಈ ವಿಷಯ ಈಗ ಚರ್ಚೆಗೆ ಗ್ರಾಸವಾಗಿದೆ.

ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆ ದಶಮಂಟಪಗಳ ಶೋಭಾಯಾತ್ರೆ. ಈ ಶೋಭಾಯಾತ್ರೆಯನ್ನು ಮತ್ತಷ್ಟು ಆಕರ್ಷಣೀಯವಾಗಿಸುವ ನಿಟ್ಟಿನಲ್ಲಿ ಪ್ರತಿವರ್ಷ ಉತ್ತಮವಾಗಿ ಹಾಗೂ ಅಚ್ಚುಕಟ್ಟಾಗಿ ಮಂಟಪ ತಯಾರಿಸುವ ಸಮಿತಿಗೆ ಬಹುಮಾನ ನೀಡುತ್ತಾ ಬರಲಾಗುತ್ತಿದೆ. ಆದರೆ. ಈ ನಿರ್ಧಾರ ಇತ್ತೀಚಿನ ವರ್ಷಗಳಲ್ಲಿ ಬಹಳಷ್ಟು ಅಸಮಾಧಾನ ಮತ್ತು ವಿವಾದಗಳಿಗೆ ಕಾರಣವಾಗುತ್ತಿದೆ. ಪ್ರತಿವರ್ಷವೂ ಬಹುಮಾನ ಪ್ರಕಟವಾಗುವ ಸಂದರ್ಭದಲ್ಲಿ ಒಂದಲ್ಲ ಒಂದು ದೇವಾಲಯ ಸಮಿತಿಯಿಂದ ಬಹಿರಂಗವಾಗಿ ಅಸಮಾಧಾನ ವ್ಯಕ್ತವಾಗುತ್ತಿದೆ. ಕೆಲವು ದೇವಾಲಯ ಸಮಿತಿಗಳು ನಮಗೆ ಬಹುಮಾನವೇ ಬೇಡ ಎಂದು ತಿರಸ್ಕರಿಸಿರುವ ಘಟನೆಗಳೂ ನಡೆಯುತ್ತಿವೆ. ಪ್ರತಿಬಾರಿಯೂ ತೀರ್ಪುಗಾರಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎನ್ನುವ ಅಸಮಾಧಾನ ಕೇಳಿಬರುತ್ತಿದೆ.

ಈ ಬಾರಿಯ ದಸರಾ ಜನೋತ್ಸವದಲ್ಲಿಯೂ ಇದೇ ಘಟನೆ ಮರು ಕಳಿಸಿದ್ದು, ಬಹುಮಾನ ನೀಡದಿರುವುದಕ್ಕೆ ಕರವಲೆ ಭಗವತಿ ದೇವಾಲಯ ಸಮಿತಿಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ವೇದಿಕೆಗೆ ಹತ್ತಿ ಪೋಡಿಯಂ, ಪ್ರಶಸ್ತಿಗಳನ್ನು ಎತ್ತಿ ಹಾಕಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿಯೂ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ತೀರ್ಪುಗಾರಿಕೆ ವಿಚಾರದಲ್ಲಿಯೂ ವ್ಯಾಪಕ ಚರ್ಚೆಗಳಾಗುತ್ತಿದ್ದು, ಸಮಯಪಾಲನೆ ಮಾಡಿದ್ದರೂ ಆ ಕಾಲಂನಲ್ಲಿ ಅಂಕ ಕಡಿತಗೊಳಿಸಿರುವುದರ ಬಗ್ಗೆಯೂ ಅಸಮಾಧಾನ ವ್ಯಕ್ತವಾಗಿದೆ. ಯಾವ ಮಾನದಂಡ ಆಧರಿಸಿ ತೀರ್ಪುಗಾರಿಕೆ ನಡೆಯುತ್ತದೆ ಎನ್ನುವ ಬಗ್ಗೆಯೂ ಪ್ರಶ್ನೆ ಮಾಡಲಾಗುತ್ತಿದ್ದು, ಈ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಮತ್ತಷ್ಟು ಅನಾಹುತ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಪೊಲೀಸ್ ಇಲಾಖೆಯಿಂದಲೂ ದಸರಾ ದಶಮಂಟಪ ಸಮಿತಿಗೆ ಎಚ್ಚರಿಕೆ ನೀಡಿ, ಅಸಮಾಧಾನಕ್ಕೆ ಎಡೆಮಾಡಿ ಕೊಡದಂತೆ ತಿಳಿಸಲಾಗಿತ್ತು. ಪ್ರತಿಬಾರಿಯೂ ಬಹುಮಾನ ವಿತರಣೆ ವೇಳೆ ಅಹಿತಕರ ಘಟನೆಗಳು ನಡೆಯುತ್ತಿರುವುದನ್ನು ತಪ್ಪಿಸಬೇಕಿದೆ. ಇದಕ್ಕಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲ ಮಂಟಪಗಳಿಗೂ ಬಹುಮಾನ ವಿತರಿಸುವ ನಿರ್ಧಾರವನ್ನು ಕೈಗೊಳ್ಳಬೇಕು ಎನ್ನುವ ಸಲಹೆ ನೀಡಲಾಗಿದೆ. ಈ ನಡುವೆ ಕಹಿ ಅನುಭವಗಳ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಮಡಿಕೇರಿ ದಸರಾ ದಶಮಂಟಪ ಸಮಿತಿ, ಮುಂದಿನ ವರ್ಷಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ.

ಇದನ್ನೂ ಓದಿ:-ದಸರಾ ಮುಗಿದರೂ ತಗ್ಗದ ಪ್ರವಾಸಿಗರ ಪ್ರವಾಹ

ನಾಡಹಬ್ಬ ದಸರಾವನ್ನು ಯಾವುದೇ ಗೊಂದಲವಿಲ್ಲದೆ ಅತ್ಯಂತ ಶಾಂತಿಯುತವಾಗಿ ನಡೆಸಲು ಸರ್ವರೂ ಒಟ್ಟಾಗಿ ಸೇರಿ ಸಮಗ್ರ ಚಿಂತನೆ ನಡೆಸಲು ತೀರ್ಮಾನಿಸಲಾಗಿದ್ದು, ಬಹುಮಾನದ ಆಯ್ಕೆ ವಿಚಾರವಾಗಿ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ನಿರ್ಧರಿಸಿದೆ.

” ಪ್ರತಿವರ್ಷ ಮಡಿಕೇರಿ ದಸರಾ ಜನೋತ್ಸವದ ದಶಮಂಟಪಗಳ ಬಹುಮಾನ ವಿತರಣೆ ವೇಳೆ ಸಣ್ಣಪುಟ್ಟ ಗಲಾಟೆಗಳು ನಡೆಯುತ್ತಿವೆ. ಈ ವರ್ಷದ ಪೂರ್ವಭಾವಿ ಸಭೆಯಲ್ಲಿ ಎಲ್ಲರೂ ಮಂಟಪ ತಯಾರಿಸಲು ಶ್ರಮವಹಿಸುವುದರಿಂದ ಎಲ್ಲರಿಗೂ ಬಹುಮಾನ ನೀಡ ಬೇಕೆಂದು ಸಲಹೆ ನೀಡಲಾಗಿತ್ತು. ಪ್ರತಿ ಬಾರಿಯೂ ತೀರ್ಪು ಗಾರಿಕೆಯಲ್ಲಿ ತಾರತಮ್ಯ ಆಗುತ್ತಿದೆ ಎಂದು ಹೇಳಲಾಗು ತ್ತಿದ್ದು, ಇದಕ್ಕೆ ಅವಕಾಶ ನೀಡದಂತೆ ಸೂಚಿಸಲಾಗಿತ್ತು. ಆದರೆ,೩ ಬಹುಮಾನಗಳನ್ನು ಮಾತ್ರ ನೀಡಿರುವುದರಿಂದ ಈ ಬಾರಿಯೂ ಅಹಿತಕರ ಘಟನೆ ನಡೆದಿದೆ. ಮುಂದೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಾದ ಅವಶ್ಯವಿದೆ.”

-ಕೆ. ರಾಮರಾಜನ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

” ಸಾರ್ವಜನಿಕರು, ಜನಪ್ರತಿನಿಧಿಗಳು, ದೇವಾಲಯ ಸಮಿತಿಗಳು ಹಾಗೂ ಸರ್ವ ಅಧಿಕಾರಿ ವರ್ಗದ ಸಹಕಾರದಿಂದ ಈ ಬಾರಿಯ ಮಡಿಕೇರಿ ದಸರಾ ಜನೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಆದರೆ ಕೊನೆಯ ದಿನ ವಿಜಯದಶಮಿಯಂದು ಬಹುಮಾನ ಘೋಷಿಸುವ ಸಂದರ್ಭದಲ್ಲಿ ಉಂಟಾದ ಘಟನೆ ಕುರಿತು ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರಲ್ಲಿ ಬೇಸರವಿದೆ. ದಶಮಂಟಪ ಸಮಿತಿಯ ಪರವಾಗಿ ಸರ್ವರಲ್ಲಿಯೂ ಕ್ಷಮೆ ಕೋರುತ್ತೇವೆ. ಮುಂದಿನ ವರ್ಷಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಬಹುಮಾನದ ಆಯ್ಕೆ ವಿಚಾರವಾಗಿ ಮಾರ್ಗೋಪಾಯಗಳನ್ನು ಕಂಡುಕೊಳ್ಳಲಾಗುವುದು.”

-ಬಿ.ಎಂ.ಹರೀಶ್, ದಶಮಂಟಪ ಸಮಿತಿ ಅಧ್ಯಕ್ಷ

ಆಂದೋಲನ ಡೆಸ್ಕ್

Recent Posts

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…

20 mins ago

ಗಣರಾಜ್ಯೋತ್ಸವ | ಸಂಪೂರ್ಣ ಭಾಷಣ ಓದಿದ ರಾಜ್ಯಪಾಲರು

ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

31 mins ago

ಮೈಸೂರು | ಧ್ವಜಾರೋಹಣ ನೆರವೇರಿಸಿದ ಸಚಿವ ಮಹದೇವಪ್ಪ : ಸಂವಿಧಾನ ರಕ್ಷಿಸಲು ಕರೆ

ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…

41 mins ago

ಗಣರಾಜ್ಯೋತ್ಸವ ಸಂಭ್ರಮ : ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಧ್ವಜಾರೋಹಣ, ಪರೇಡ್‌ ಆರಂಭ

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…

2 hours ago

ಫ್ಲೀಸ್. . ಬಸ್ ನಿಲ್ಲಿಸಿ ಸಾರ್. . !

ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್‌ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ಗಾಂಧಿ, ಬುದ್ಧ, ಬಸವ ಅರ್ಜೆಂಟಾಗಿ ಬೇಕು

ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…

2 hours ago