Andolana originals

ದೀಪಾವಳಿ: ಈ ಬಾರಿ ಪಟಾಕಿ ಮಾರಾಟ ಕುಸಿತ

ವ್ಯಾಪಾರಕ್ಕೆ ಮಂದ ಬೆಳಕು; ಜಾಗೃತಿ ಹಿನ್ನೆಲೆಯಲ್ಲಿ ಖರೀದಿಸಲು ಆಸಕ್ತಿ ತೋರದ ಜನರು 

ಭಾರತೀನಗರ: ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಬಗ್ಗೆ ನಿರಂತರವಾಗಿ ಜನಜಾಗೃತಿ ಮೂಡಿಸುವ ಜಾಹೀರಾತುಗಳಿಂದ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಪಟಾಕಿ ಸಿಡಿಸುವ ಸಂಭ್ರಮ ಗಣನೀಯವಾಗಿ ಕುಸಿದಿದೆ.

ಪ್ರತಿ ವರ್ಷವೂ ಭಾರತೀನಗರ ಪಟ್ಟಣದಲ್ಲಿ ವ್ಯಾಪಾರ ಬಲು ಜೋರಾಗಿ ನಡೆಯುತ್ತಿತ್ತು. ಆದರೆ ಈ ಬಾರಿ ಪಟ್ಟಣದಿಂದ ೧.೫ ಕಿ.ಮೀ. ದೂರದ ಮೆಳ್ಳಹಳ್ಳಿಯ ಬಳಿ ಜಿಲ್ಲಾಡಳಿತದ ಆದೇಶದ ಮೇರೆಗೆ ಪಟಾಕಿ ಮಾರಾಟದ ಮಳಿಗೆಗಳನ್ನು ಇಡಲಾಗಿದ್ದು, ಇದು ಹಸಿರು ಪಟಾಕಿಗೆ ಮಾತ್ರ ಸೀಮಿತವಾಗಿದೆ.

ಮದ್ದೂರು-ಮಳವಳ್ಳಿ ಸೇರಿದಂತೆ ವಿವಿಧೆಡೆ ವಿವಿಧ ಅಂಗಡಿ ಮಾಲೀಕರ ನಿರೀಕ್ಷೆಗೆ ತಕ್ಕಂತೆ ವ್ಯಾಪಾರವಾಗದೆ ಶೇ.೫೦ರಷ್ಟು ಕುಸಿತ ಕಂಡಿದೆ. ಕೆಲವರು ಮಕ್ಕಳನ್ನು ಸಂತೋಷಪಡಿಸಲು ಅಪಾಯಕಾರಿಯಲ್ಲದ ಸಣ್ಣಪುಟ್ಟ ಪಟಾಕಿಗಳನ್ನು ಖರೀದಿಸುತ್ತಿರುವುದು ಕಂಡುಬಂದಿತು.

ಅಂಗಡಿ ಮಾಲೀಕರ ನಿರೀಕ್ಷೆಯಷ್ಟು ಜನರು ಪಟಾಕಿ ಕೊಂಡುಕೊಳ್ಳದ ಕಾರಣ ಪಟಾಕಿಗಳ ಸದ್ದು, ಗದ್ದಲ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ದೀಪಾವಳಿ ಶಬ್ದಮಾಲಿನ್ಯ ಮುಕ್ತವಾಗಬೇಕೆಂಬ ಅರಿವು ಎಲ್ಲೆಡೆ ಹೆಚ್ಚಾಗುತ್ತಿರುವುದರಿಂದ ಪಟಾಕಿಗಳ ಖರೀದಿಗೆ ಜನರು ಹಿಂದೇಟು ಹಾಕುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಹಾಗೂ ಪ್ರಾಣಿ-ಪಕ್ಷಿಗಳಿಗೆ ಕಿರಿಕಿರಿಯಾಗುವ ಪಟಾಕಿಗಳನ್ನು ಮಾರಾಟ ಮಾಡದಂತೆ ಜಿಲ್ಲಾಡಳಿತ ಸೂಚಿಸಿದೆ. ಎಲ್ಲೆಡೆ ಈ ಬಾರಿ ಪಟಾಕಿಗಳ ಅಬ್ಬರವಿಲ್ಲದೆ, ಜನರು ಮನೆಗಳಲ್ಲೇ ಹಣತೆ ಹಚ್ಚುವ ಮೂಲಕ ದೀಪಾವಳಿ ಆಚರಿಸುತ್ತಿದ್ದಾರೆ. ಹಾಗಾಗಿ ಮಕ್ಕಳ ದೃಷ್ಟಿಯಲ್ಲಿ ಪಟಾಕಿ ಹಬ್ಬವೆಂದೇ ಕರೆಯಲಾಗುವ ದೀಪಾವಳಿ ಈ ಬಾರಿ ಕಳೆಗುಂದಿದೆ.

ಇದನ್ನು ಓದಿ: ದೀಪಾವಳಿ ಜಾತ್ರೆ: ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೂ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸುತ್ತಿರುವ ಜನತೆ ಪಟಾಕಿಗಳತ್ತ ಹೆಚ್ಚು ಮುಖ ಮಾಡದಿರುವುದು ಪಟಾಕಿ ವ್ಯಾಪಾರಸ್ಥರಲ್ಲಿ ಅಸಮಾಧಾನ ಮೂಡಿಸಿದೆ. ಅದರಲ್ಲೂ ಪಟಾಕಿ ವ್ಯಾಪಾರಿಗಳ ಉತ್ಸಾಹಕ್ಕೆ ಈ ಬಾರಿ ತಣ್ಣೀರೆರಚಿದಂತಾಗಿದೆ. ಲಾಭಗಳಿಸುವುದಿರಲಿ, ಹಾಕಿದ ಬಂಡವಾಳವೂ ಇಲ್ಲದಂತಾಗಿದೆ.

ಹೊರರಾಜ್ಯಗಳಿಂದ ಪಟಾಕಿಗಳನ್ನು ತಂದು ವ್ಯಾಪಾರ ಮಾಡುತ್ತಿರುವ ಮಾಲೀಕರು ಪಟಾಕಿಗಳನ್ನು ಹೆಚ್ಚಾಗಿ ಕೊಂಡುಕೊಳ್ಳದ ಕಾರಣ ನಷ್ಟ ಅನುಭವಿಸಬೇಕಾಗಿದೆ. ತಂದ ಬೆಲೆಗೆ ಮಾರಾಟ ಮಾಡಬೇಕಿದೆ ಎನ್ನುತ್ತಾರೆ ಸೌಭಾಗ್ಯ ಟ್ರೇಡರ‍್ಸ್ ಪಟಾಕಿ ಮಳಿಗೆಯ ಮಾಲೀಕ ವಿ.ರಾಘು ಹಾಗೂ ಪಟಾಕಿ ವ್ಯಾಪಾರಿ ಧನಪಾಲ್‌ಶೆಟ್ಟಿ. ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ಪಟಾಕಿಯಿಂದ ಸಂಭವಿಸಿದ ಹಾನಿ ಪ್ರಮಾಣ  ಕಡಿಮೆಗೊಳ್ಳುತ್ತಿದೆ ಎನ್ನುತ್ತಾರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅರ್ಜುನ್ ಕುಮಾರ್.

” ಪಟಾಕಿಗಳನ್ನು ಸಿಡಿಸುವುದರಿಂದ ಮನಸ್ಸಿಗೆ ಖುಷಿ ತರಬಹುದು. ಆದರೆ, ಅದೇ ಪಟಾಕಿಯಿಂದ ಪರಿಸರ ನಾಶಗೊಳ್ಳುತ್ತದೆ. ಇದರಿಂದ ಉಂಟಾಗುವ ಸಮಸ್ಯೆಗಳು ಕೆಲವು ಪ್ರತ್ಯಕ್ಷವಾದರೆ ಹಲವು ಪರೋಕ್ಷವಾಗಿ ಪರಿಣಾಮ ಬೀರುತ್ತವೆ. ಆದ್ದರಿಂದ ಎಲ್ಲರೂ ಪರಿಸರ ಪ್ರೇಮಿಗಳಾಗಿ ಅತ್ಯಮೂಲ್ಯವಾದ ಪರಿಸರವನ್ನು ಉಳಿಸಿ ಬೆಳೆಸಲು ಪಣತೊಡಬೇಕು.”

-ಡಿ.ಸಿ.ತಮ್ಮಣ್ಣ, ಮಾಜಿ ಸಚಿವರು

” ಪ್ರತಿ ವರ್ಷವೂ ತಮಿಳುನಾಡಿನಿಂದ ಪಟಾಕಿಗಳನ್ನು ತಂದು ವ್ಯಾಪಾರ ಮಾಡುತ್ತಿದ್ದೆ. ಕಳೆದ ಎರಡು ಮೂರು ವರ್ಷಗಳಿಗಿಂತ ಶೇ.೫೦ರಷ್ಟು ವ್ಯಾಪಾರ ಕುಸಿತ ಕಂಡಿದೆ.”

-ವಿ.ರಾಘು, ಪಟಾಕಿ ಸ್ಟಾಲ್ ಮಾಲೀಕ

ಅಣ್ಣೂರು ಸತೀಶ್

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

2 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

6 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

6 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

6 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

7 hours ago