Andolana originals

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ

ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ

ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್

ಹೈಕಮಾಂಡ್ ನಾಯಕರಿಂದ ಸಿಗದ ಸ್ಪಷ್ಟತೆ; ಡಿಕೆಶಿಗೆ ನಿರಾಸೆ 

ಬೆಂಗಳೂರು: ನಾಯಕತ್ವದ ಗೊಂದಲ, ಬಣಗಳ ಬಲ ಪ್ರದರ್ಶನದ ನಡುವೆ ಅಧಿಕಾರ ಹಂಚಿಕೆ ವಿಚಾರ ತಾರಕಕ್ಕೆ ಏರಿದ್ದು, ಇದರ ಬೆನ್ನಲ್ಲೆದಿಲ್ಲಿಗೆ ತೆರಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಹಂಚಿಕೆ ವಿಚಾರವನ್ನು ಹೈಕಮಾಂಡ್ ನಾಯಕರ ಬಳಿ ಪ್ರಸ್ತಾಪ ಮಾಡಿಯೂ ಅವರಿಂದ ಯಾವುದೇ ಸ್ಪಷ್ಟ ನಿರ್ದೇಶನ ಸಿಗದೆ ಬರಿಗೈಯಲ್ಲಿ ವಾಪಸ್ ಆಗುವಂತಾಗಿದೆ.

ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿ, ಹಿಂದೆ ಆಗಿದ್ದ ಒಪ್ಪಂದದಂತೆ ತಮಗೆ ಸಿಎಂ ಹುದ್ದೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದು, ರಾಹುಲ್ ಅವರ ಮಾತು ಡಿ.ಕೆ.ಶಿವಕುಮಾರ್ ಅವರಲ್ಲಿ ನಿರಾಶಾಭಾವ ಮೂಡಿಸಿದೆ.

ಬೆಳಗಾವಿ ಅಧಿವೇಶನ ಮುಗಿಯುವವರೆಗೆ ನಾಯಕತ್ವದ ವಿಚಾರದಲ್ಲಿ ಯಾರೂ ಕೂಡ ಹೇಳಿಕೆಗಳನ್ನು ನೀಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದ್ದರೂ, ಅಧಿವೇಶನದ ನಡುವೆಯೇ ಎರಡೂ ಬಣಗಳ ಡಿನ್ನರ್ ಮೀಟಿಂಗ್, ನಾಯಕತ್ವ ಕುರಿತ ಹೇಳಿಕೆ; ಪ್ರತಿ ಹೇಳಿಕೆಗಳು ಮತ್ತೆ ಕಿಡಿ ಹೊತ್ತಿಸಿದ್ದವು. ಈ ಪರಿಸ್ಥಿತಿಯನ್ನು ಪೂರಕವಾಗಿ ಬಳಸಿಕೊಳ್ಳಲು ಮುಂದಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಭಾನುವಾರ ದಿಲ್ಲಿಯಲ್ಲಿ ಎಐಸಿಸಿ ಹಮ್ಮಿ ಕೊಂಡಿದ್ದ ವೋಟ್ ಚೋರಿ ವಿರುದ್ಧದ ಆಂದೋಲನದಲ್ಲಿ ಭಾಗವಹಿಸಿದ್ದಾಗ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ.

ಇದಕ್ಕೆ ರಾಹುಲ್ ಅವರಿಂದ ತಕ್ಕ ಸ್ಪಂದನೆ ಸಿಗದೆ ನಿರಾಸೆಯಿಂದ ರಾಜ್ಯಕ್ಕೆ ಮರಳಿದ್ದಾರೆ. ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯ ನಾಯಕರೂ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೋಜನ ಕೂಟ ಆಯೋಜಿಸಿದ್ದರು. ಅದರಲ್ಲಿ ಆಯ್ದ ನಾಯಕರಿಗೆ ಮಾತ್ರ ಭೋಜನ ಕೂಟಕ್ಕೆ ಆಹ್ವಾನ ನೀಡಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿ.ಕೆ. ಹರಿಪ್ರಸಾದ್ ಅವರಿಗೂ ಆಹ್ವಾನ ಇತ್ತು. ಸಿದ್ದರಾಮಯ್ಯ ಅವರು ತಡವಾಗಿ ದೆಹಲಿಗೆ ಆಗಮಿಸಿದ್ದರು. ಡಿ.ಕೆ. ಶಿವಕುಮಾರ್ ಶನಿವಾರವೇ ದಿಲ್ಲಿಗೆ ತೆರಳಿ ತಮ್ಮ ರಾಜಕೀಯ ಚಟುವಟಿಕೆಗಳನ್ನು ಆರಂಭಿಸಿದ್ದರು. ಕರ್ನಾಟಕ ಭವನದಲ್ಲಿ ಹಲವಾರು ಶಾಸಕರು, ಸಚಿವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಪ್ರತಿಭಟನೆ ಬಳಿಕ ಔತಣ ಕೂಟದಲ್ಲಿ ಭಾಗವಹಿಸಿದ್ದ ಡಿ.ಕೆ.ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರು ತಮ್ಮ ವಾದವನ್ನು ರಾಷ್ಟ್ರ ನಾಯಕರ ಮುಂದೆ ಮಂಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ಡಿ.ಕೆ.ಶಿವಕುಮಾರ್ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದವಾಗಿತ್ತು. ಅದರಂತೆ ಮೊದಲರ್ಧ ಅವಧಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಉಳಿದರ್ಧ ಅವಧಿ ನಾನು ಮುಖ್ಯಮಂತ್ರಿ ಆಗಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಈಗಾಗಲೇ ಎರಡೂವರೆ ವರ್ಷಗಳು ಕಳೆದಿದ್ದು, ಅಧಿಕಾರ ಹಂಚಿಕೆ ವಿಳಂಬವಾಗುತ್ತಿದೆ. ಹಾಗಾಗಿ ನೀವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಂಚಿಕೆ ಬಗ್ಗೆ ತಿಳಿಸಿ ನನಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ರಾಹುಲ್ ಗಾಂಧಿ ಅವರು, ಅಧಿಕಾರ ಹಂಚಿಕೆ ಬಗ್ಗೆ ನನಗೆ ಗೊತ್ತಿಲ್ಲ. ಅಧಿಕಾರ ಹಂಚಿಕೆ ವಿಚಾರ ಯಾವ ನಾಯಕರ ಮಧ್ಯೆ ಆಗಿದೆ ಎಂಬುದು ನನಗೆ ತಿಳಿದಿಲ್ಲ. ಹಾಗಾಗಿ ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕ್ಷಣದಲ್ಲಿ ಮಾತನಾಡುವುದು ಸೂಕ್ತವಲ್ಲ ಎಂದು ತಿಳಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಸದ್ಯ ನಾವು ಜರ್ಮನಿಗೆ ತೆರಳುತ್ತಿದ್ದು, ಈಗ ಮಾತ ನಾಡುವುದು ಬೇಡ. ಡಿ.೨೦ಕ್ಕೆ ಜರ್ಮನಿಯಿಂದ ವಾಪಸಾ ಗುತ್ತೇನೆ. ಬಳಿಕ ಈ ವಿಚಾರದ ಬಗ್ಗೆ ಮಾತನಾಡೋಣ ಎಂದು ರಾಹುಲ್ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಇದ ರಿಂದ ಡಿ.ಕೆ.ಶಿವಕುಮಾರ್ ಅವರ ಸಿಎಂ ಕನಸಿಗೆ ಸದ್ಯಕ್ಕೆ ತಣ್ಣೀರು ಬಿದ್ದಿರುವುದಲ್ಲದೆ, ಅಧಿಕಾರ ಹಂಚಿಕೆ ವಿಚಾರ ಮತ್ತಷ್ಟು ವಿಳಂಬವಾಗಲಿದ್ದು, ಡಿಕೆಶಿ ಅವರಲ್ಲಿ ನಿರಾಶಾಭಾವ ಮೂಡಿದೆ.

ಡಿಕೆಶಿ ಹೇಳಿದ್ದೇನು?: 

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದವಾಗಿತ್ತು. ಅದರಂತೆ ಮೊದಲರ್ಧ ಅವಧಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವುದು, ಉಳಿದರ್ಧ ಅವಧಿ ನಾನು ಮುಖ್ಯಮಂತ್ರಿ ಆಗಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಈಗಾಗಲೇ ಎರಡೂವರೆ ವರ್ಷಗಳು ಕಳೆದಿದ್ದು, ಅಧಿಕಾರ ಹಂಚಿಕೆ ವಿಳಂಬವಾಗುತ್ತಿದೆ. ಹಾಗಾಗಿ ನೀವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಂಚಿಕೆ ಬಗ್ಗೆ ತಿಳಿಸಿ ನನಗೆ ಸಿಎಂ ಹುದ್ದೆ ನೀಡಬೇಕೆಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಾಹುಲ್ ಹೇಳಿದ್ದೇನು?: 

ಬೆಂಗಳೂರು: ಅಧಿಕಾರ ಹಂಚಿಕೆ ಬಗ್ಗೆ ನನಗೆ ಗೊತ್ತಿಲ್ಲ. ಅಧಿಕಾರ ಹಂಚಿಕೆ ವಿಚಾರ ಯಾವ ನಾಯಕರ ಮಧ್ಯೆ ಆಗಿದೆ ಎಂಬುದು ನನಗೆ ತಿಳಿದಿಲ್ಲ. ಹಾಗಾಗಿ ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕ್ಷಣದಲ್ಲಿ ಮಾತನಾಡುವುದು ಸೂಕ್ತವಲ್ಲ. ಸದ್ಯ ನಾನು ಜರ್ಮನಿಗೆ ತೆರಳುತ್ತಿದ್ದು, ಈಗ ಮಾತನಾಡುವುದು ಬೇಡ. ಡಿ.೨೦ಕ್ಕೆ ಜರ್ಮನಿಯಿಂದ ವಾಪಸಾಗುತ್ತೇನೆ. ಬಳಿಕ ಈ ವಿಚಾರದ ಬಗ್ಗೆ ಮಾತನಾಡೋಣ ಎಂದು ರಾಹುಲ್ ಗಾಂಽ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

 

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

33 mins ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

12 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

12 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

13 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

13 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

13 hours ago