Andolana originals

ದಮ್ಮನಕಟ್ಟೆ ಸಫಾರಿ ವಲಯ ವೀಕ್ಷಿಸಿದ ಡಿಕೆಶಿ

ಕುಟುಂಬದವರೊಡನೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಉಪ ಮುಖ್ಯಮಂತ್ರಿ
ಮಂಜು ಕೋಟೆ

ಎಚ್. ಡಿ. ಕೋಟೆ: ತಾಲ್ಲೂಕಿನ ಸಂಬಂಧಿಕರ ರೆಸಾರ್ಟ್ ನಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕುಟುಂಬ ಸಮೇತವಾಗಿ ಆಗಮಿಸಿ ತಮ್ಮ ಹುಟ್ಟುಹಬ್ಬ ವನ್ನು ಸರಳವಾಗಿ ಆಚರಿಸಿಕೊಂಡರು.

ರಾಜಕೀಯ, ಅಧಿಕಾರದ ಒತ್ತಡಗಳ ನಡುವೆಯೂ ಮೂರು ದಿನಗಳ ಕಾಲ ತಮ್ಮ ಹುಟ್ಟುಹಬ್ಬದ ನಿಮಿತ್ತ ಕುಟುಂಬಸ್ಥರೊಡನೆ ಕಾಲ ಕಳೆಯಲು ತಾಲ್ಲೂಕಿನ ಕಾರಾಪುರ ಸಮೀಪದ ಸೆರಾಯಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬುಧವಾರ ಸಂಜೆ ಡಿ. ಕೆ. ಶಿವಕುಮಾರ್ ಅವರು ತಮ್ಮ ಪತ್ನಿ, ಮಗಳು, ಅಳಿಯ ಹಾಗೂ ಕುಟುಂಬಸ್ಥರೊಡನೆ ರೆಸಾರ್ಟ್‌ನಲ್ಲಿ ಉಳಿದಿದ್ದು, ಗುರುವಾರ ಬೆಳಿಗ್ಗೆ ಜಂಗಲ್ ಲಾಡ್ಜ್ ನ ವಾಹನಗಳಲ್ಲಿ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆಯ ಸಫಾರಿ ವಲಯವನ್ನು ವೀಕ್ಷಣೆ ಮಾಡಿದ್ದಾರೆ.

ಈ ವೇಳೆ ಹುಲಿ, ಚಿರತೆ, ಆನೆ, ಜಿಂಕೆ, ಕಡವೆ ಇನ್ನಿತರ ಪ್ರಾಣಿಗಳು ಕಾಣಿಸಿಕೊಂಡಾಗ ಖುಷಿ ವ್ಯಕ್ತಪಡಿಸಿದ್ದಾರೆ.

ಅರಣ್ಯದ ಉತ್ತಮವಾದ ವಾತಾವರಣ ನೋಡಿ ಎಲ್ಲರೂ ಖುಷಿಪಟ್ಟಿದ್ದಾರೆ. ಸಂಜೆ ಕಬಿನಿ ಹಿನ್ನೀರಿನಲ್ಲಿ ಬೋಟ್ ಸಫಾರಿ ನಡೆಸಿ ಆನಂದಪಟ್ಟಿದ್ದಾರೆ.

ತದನಂತರ ಕುಟುಂಬಸ್ಥರು ಡಿ. ಕೆ. ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು. ತೆರೆದ ವಾಹನದಲ್ಲಿ ಸಫಾರಿಗೆ ಹೋಗುತ್ತಿದ್ದಾಗ ಅಕ್ಕ ಪಕ್ಕದ ಗ್ರಾಮಸ್ಥರು, ನಿವಾಸಿಗಳು ಡಿ. ಕೆ. ಶಿವಕುಮಾರ್ ಅವರಿಗೆ ಜೈಕಾರ ಕೂಗಿ ಮುಂದಿನ ಮುಖ್ಯಮಂತ್ರಿ ನೀವೇ ಎಂದು ಘೋಷಣೆ ಕೂಗಿದರು. ಈ ವೇಳೆ ಡಿಕೆಶಿ ಎಲ್ಲರತ್ತ ಕೈ ಬೀಸಿ ವಿಶ್ ಮಾಡಿದರು.

ಡಿ. ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆದ ನಂತರ ತಮ್ಮ ಕುಟುಂಬ ಸಮೇತವಾಗಿ ತಾಲ್ಲೂಕಿನಲ್ಲಿ ಮೂರು ದಿನಗಳ ಕಾಲ ವಾಸ್ತವ್ಯ ಹೂಡಿರುವುದು ಇದೇ ಮೊದಲು.

ಈ ವರ್ಷ ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಕಬಿನಿಯಲ್ಲಿ ಕಾಲ ಕಳೆಯುವ ಮೂಲಕ ಆಚರಿಸಿದೆ. ಪ್ರಕೃತಿಯೊಂದಿಗೆ ಒಂದಾದ ಭಾವ, ಕಬಿನಿಯ ಸೌಂದರ್ಯ, ವನ್ಯ ಸಂಪತ್ತನ್ನು ಕಣ್ತುಂಬಿಕೊಂಡು ಪ್ರಶಾಂತವಾದ ಜಗತ್ತಿಗೆ ಕಾಲಿಟ್ಟ ಅನುಭವವಾಯಿತು. ಡಿ. ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ

ಆಂದೋಲನ ಡೆಸ್ಕ್

Recent Posts

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

9 mins ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

56 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

58 mins ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

1 hour ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

4 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

4 hours ago